Site icon Vistara News

Kabzaa Movie: ಕಬ್ಜ ಆಡಿಯೊ ರಿಲೀಸ್‌ಗೆ ಭರ್ಜರಿ ಪ್ಲಾನ್: ಫೆಬ್ರವರಿ 26ಕ್ಕೆ ಆಡಿಯೊ ಲಾಂಚ್‌

Kabza Movie

Kabza Movi

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಪ್ಯಾನ್‌ ಇಂಡಿಯಾ ಸಿನಿಮಾವಾದ ʼಕಬ್ಜʼ (Kabzaa Movie) ಕೂಡ ತೆರೆಗೆ ಬರಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಹು ನಿರೀಕ್ಷೆಯ ಈ ಸಿನಿಮಾ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಜನ್ಮದಿನದಂದೇ ತೆರೆಗೆ ಬರಲಿದೆ. ಇದೀಗ ಚಿತ್ರತಂಡ ಸಿನಿಮಾದ ಆಡಿಯೊ ಲಾಂಚ್‌ ಅನ್ನು ಅದ್ಧೂರಿಯಾಗಿ ಮಾಡಲು ನಿರ್ಧರಿಸಿದೆ.

ಶಿಡ್ಲಘಟ್ಟದಲ್ಲಿ ಫೆ. 26ಕ್ಕೆ ಅದ್ದೂರಿಯಾಗಿ ಆಡಿಯೊ ಲಾಂಚ್‌ ಇವೆಂಟ್‌ ನಡೆಯಲಿದೆ. ಈಗಾಗಲೇ ಸಿನಿಮಾದ ಟೀಸರ್‌ ಬಿಡುಗಡೆಗೊಂಡು ಸಖತ್‌ ಸುದ್ದಿಯಾಗಿದೆ.

ಫೆಬ್ರವರಿ 26ಕ್ಕೆ ಶಿಡ್ಲಘಟ್ಟದ ಜೂನಿಯರ್ ಕಾಲೇಜು ಮೈದಾನದ ಅದ್ಧೂರಿ ವೇದಿಕೆಯಲ್ಲಿ ‘ಕಬ್ಜ’ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 3 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ ಎಂದು ಆರ್‌. ಚಂದ್ರು ಮಾಹಿತಿ ನೀಡಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಅವಕಾಶವಿದ್ದು. ಶಿಡ್ಲಘಟ್ಟ ಸರಸ್ವತಿ ಕಾನ್ವೆಂಟ್ ಹಾಗೂ ವಿಜಯಪುರದ ಸುವೀಕ್ಷ ಹಾಸ್ಪಿಟಲ್‌ನಲ್ಲಿ ಪಾಸ್‌ಗಳು ದೊರೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.

ಆಡಿಯೋ ಲಾಂಚ್‌ ಕಾರ್ಯಕ್ರಮದಲ್ಲಿ ನಟರಾದ ಉಪೇಂದ್ರ, ಕಿಚ್ಚ ಸುದೀಪ್, ನಟಿ ಶ್ರಿಯಾ ಸರನ್ ಸೇರಿದಂತೆ ಇಡೀ ಚಿತ್ರತಂಡ ಭಾಗಿ ಆಗಲಿದೆ. ಇನ್ನುಳಿದಂತೆ ನಟ ಶಿವರಾಜ್‌ಕುಮಾರ್ ಸೇರಿದಂತೆ ಹಲವು ಖ್ಯಾತ ಕಲಾವಿದರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: Kannada New Movie | ಅಪ್ಪು ಹುಟ್ಟಿದ ಹಬ್ಬದಂದೇ ತೆರೆಗೆ ಬರಲಿದೆ ರಿಯಲ್‌ ಸ್ಟಾರ್‌ ನಟನೆಯ ಕಬ್ಜ

ಅಪ್ಪು ಜನ್ಮದಿನವಾದ ಮಾ.17ರಂದು ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾವನ್ನು ನಮ್ಮನ್ನು ಅಗಲಿರುವ ಅಪ್ಪುಗೆ ಅರ್ಪಿಸುವುದಕ್ಕೆ ಚಿತ್ರತಂಡ ನಿರ್ಧರಿಸಿದೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಅವರ ಜತೆಯಲ್ಲಿ ಕಿಚ್ಚ ಸುದೀಪ್‌ ಅವರೂ ಬಣ್ಣ ಹಚ್ಚಿದ್ದಾರೆ. ಸಿನಿಮಾದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರಕ್ಕೆ ನಿರ್ದೇಶಕ ಆರ್‌.ಚಂದ್ರು ಅವರು ಆಕ್ಷನ್‌ ಕಟ್‌ ಹೇಳಿದ್ದಾರೆ. ಐಎಂಡಿಬಿ ಬಿಡುಗಡೆ ಮಾಡಿರುವ 2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಇರುವ ಕನ್ನಡದ ಏಕೈಕ ಸಿನಿಮಾ ಇದಾಗಿದೆ.

ಇದನ್ನೂ ಓದಿ: IMDb 2023 Movies | 2023ರ IMDb ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ ಬಿಡುಗಡೆ: ಕನ್ನಡದ ಏಕೈಕ ಚಿತ್ರ ಯಾವುದು?

ಶ್ರೀಸಿದ್ಧೇಶ್ವರ ಎಂಟರ್‌ಪ್ರೈಸಸ್ ನಿರ್ಮಿಸಿರುವ ‘ಕಬ್ಜ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದೆ. ಸಿನಿಮಾದಲ್ಲಿ ಉಪೇಂದ್ರಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮ ಮುಂತಾದ ಕಲಾವಿದರು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.

Exit mobile version