Site icon Vistara News

Kabzaa Movie: ʻಕಬ್ಜʼ ಚಿತ್ರದ ಧ್ವನಿ ಸುರುಳಿ ಅದ್ಧೂರಿ ಬಿಡುಗಡೆ: ಸದ್ದು ಮಾಡುತ್ತಿದೆ ‘ಚುಂ ಚುಂ ಚಳಿʼ ಸಾಂಗ್‌!

Kabzaa Movie Chum Chum Chali Kannada Lyrical Song

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಪ್ಯಾನ್‌ ಇಂಡಿಯಾ ಸಿನಿಮಾವಾದ ʼಕಬ್ಜʼ (Kabzaa Movie) ಶಿಡ್ಲಘಟ್ಟದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಿದೆ. ಕಬ್ಜ ಸಿನಿಮಾದ ಮೂರನೇ ಹಾಡನ್ನು ಗೀತಾ ಶಿವರಾಜ್ ಕುಮಾರ್ ದಂಪತಿ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕ ಆರ್‌.ಚಂದ್ರು ಊರಿನಲ್ಲೇ ‘ಕಬ್ಜ’ ಆಡಿಯೊ ಲಾಂಚ್ ಮಾಡಲಾಗಿದೆ.

ಈಗ ಬಿಡುಗಡೆ ಆಗಿರುವ ‘ಚುಂ ಚುಂ ಚಳಿ..’ ಹಾಡಿನಲ್ಲಿ ತಾನ್ಯಾ ಹೋಪ್​ ಹೆಜ್ಜೆ ಹಾಕಿದ್ದಾರೆ. ಗಾಯಕ ಗುರುಕಿರಣ್ ಮ್ಯೂಸಿಕಲ್ ನೈಟ್ಸ್ ನಡೆದಿದ್ದು, ಕಾರ್ಯಕ್ರಮದಲ್ಲಿ ನಟ ಉಪೇಂದ್ರ, ನಟಿ ಶ್ರೇಯಾ ಶರಣ್, ದುನಿಯಾ ವಿಜಯ್, ನೆನಪಿರಲಿ ಪ್ರೇಮ್, ಡಾಲಿ ಧನಂಜಯ್ ಭಾಗಿ ಆಗಿದ್ದಾರೆ. ಅಪ್ಪು ಜನ್ಮದಿನವಾದ ಮಾ.17ರಂದು ಕಬ್ಜ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾವನ್ನು ಅಪ್ಪುಗೆ ಅರ್ಪಿಸುವುದಕ್ಕೆ ಚಿತ್ರತಂಡ ನಿರ್ಧರಿಸಿದೆ. ಕಬ್ಜ ಸಿನಿಮಾದಲ್ಲಿ ಉಪೇಂದ್ರ ಅವರ ಜತೆಯಲ್ಲಿ ಕಿಚ್ಚ ಸುದೀಪ್‌ ಅವರೂ ಬಣ್ಣ ಹಚ್ಚಿದ್ದಾರೆ. ಸಿನಿಮಾದ ಟ್ರೈಲರ್‌ ಈಗಾಗಲೇ ಬಿಡುಗಡೆಯಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರಕ್ಕೆ ನಿರ್ದೇಶಕ ಆರ್‌.ಚಂದ್ರು ಅವರು ಆಕ್ಷನ್‌ ಕಟ್‌ ಹೇಳಿದ್ದಾರೆ. ಐಎಂಡಿಬಿ ಬಿಡುಗಡೆ ಮಾಡಿರುವ 2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಇರುವ ಕನ್ನಡದ ಏಕೈಕ ಸಿನಿಮಾ ಇದಾಗಿದೆ.

ಇದನ್ನೂ ಓದಿ: Kabzaa Movie: ಕಬ್ಜ ಆಡಿಯೊ ರಿಲೀಸ್‌ಗೆ ಭರ್ಜರಿ ಪ್ಲಾನ್: ಫೆಬ್ರವರಿ 26ಕ್ಕೆ ಆಡಿಯೊ ಲಾಂಚ್‌

ಇದನ್ನೂ ಓದಿ: Kannada New Movie | ಅಪ್ಪು ಹುಟ್ಟಿದ ಹಬ್ಬದಂದೇ ತೆರೆಗೆ ಬರಲಿದೆ ರಿಯಲ್‌ ಸ್ಟಾರ್‌ ನಟನೆಯ ಕಬ್ಜ

ಶ್ರೀಸಿದ್ಧೇಶ್ವರ ಎಂಟರ್‌ಪ್ರೈಸಸ್ ನಿರ್ಮಿಸಿರುವ ‘ಕಬ್ಜ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದೆ. ಸಿನಿಮಾದಲ್ಲಿ ಉಪೇಂದ್ರಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮ ಮುಂತಾದ ಕಲಾವಿದರು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.

Exit mobile version