ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುನಿರೀಕ್ಷಿತ ಚಿತ್ರವಾದ ಕಬ್ಜ ಸಿನಿಮಾದ (Kabzaa Movie) ಪ್ರೀ ರೀಲಿಸ್ ಕಾರ್ಯಕ್ರಮ ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅದ್ಧೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದೆ.
ಇದನ್ನೂ ಓದಿ: Upendra Birthday | UI ತಂಡದಿಂದ ಸ್ಪೆಷಲ್ ವಿಡಿಯೊ: ಸೇಬಿನ ಹಾರದಲ್ಲಿ ಮಿಂಚಿದ ರಿಯಲ್ ಸ್ಟಾರ್!
ಈ ಕಾರ್ಯಕ್ರಮದಲ್ಲಿ ಉಪೇಂದ್ರ, ಸುದೀಪ್, ಶಿವರಾಜ್ ಕುಮಾರ್, ಆರ್.ಚಂದ್ರು ಸೇರಿ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಈಗಾಗಲೇ ಮುಂಬೈ, ಚೆನ್ನೈ, ಹೈದರಾಬಾದ್‌ನಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ನಡೆಸಲಾಗಿದೆ. ಸಿನಿಮಾ ಬಿಡುಗಡೆಗೆ ಮೂರೇ ದಿನ ಬಾಕಿಯಿರುವ ಹಿನ್ನೆಲೆ ಇದೀಗ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಆರ್.ಚಂದ್ರು ಅವರ ನಿರ್ದೇಶನವಿರುವ ಈ ಸಿನಿಮಾ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನವಾದ ಮಾರ್ಚ್ 17ರಂದೇ ತೆರೆ ಕಾಣಲಿದೆ. ಕೆಜಿಎಫ್, ಕಾಂತಾರಾ ಸಿನಿಮಾಗಳಂತೆಯೇ ಕಬ್ಜ ಕೂಡ ನಿರೀಕ್ಷೆ ಹುಟ್ಟಿಸಿರುವ ಸಿನಿಮಾವಾಗಿದೆ. ವಿಶ್ವಾದ್ಯಂತ ಒಟ್ಟು 4000 ತೆರೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ತೆರೆ ಕಾಣಲಿದೆ.
ಇದನ್ನೂ ಓದಿ: Kabzaa Trailer: ಕಬ್ಜ ಟ್ರೈಲರ್ ಬಿಡುಗಡೆ: ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡ ರಿಯಲ್ ಸ್ಟಾರ್!
ಕಬ್ಜ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶಿವರಾಜ್ಕುಮಾರ್, ಶ್ರೀಯಾ ಶರಣ್, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ, ನವಾಬ್ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ವಿತರಣಾ ಹಕ್ಕನ್ನು ಲೈಕಾ ಪ್ರೊಡಕ್ಷನ್ ಸಂಸ್ಥೆ ಹಲವಾರು ಕೋಟಿ ರೂ. ಕೊಟ್ಟು ಖರೀದಿಸಿದೆ.