Site icon Vistara News

Kabzaa Movie: ಕತಾರ್‌ನಲ್ಲಿ `ಕಬ್ಜ’ ಅದ್ಧೂರಿ ಪ್ರದರ್ಶನ

Qatar In Kabzaa Movie

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಕಿಚ್ಚ ಸುದೀಪ್‌ ನಟನೆಯ ಕಬ್ಜ ಸಿನಿಮಾ (Kabzaa Movie) ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆರ್ ಚಂದ್ರು ನಿರ್ದೇಶನದ ಕಬ್ಜ ಚಿತ್ರವು ಕತಾರ್‌ನಲ್ಲಿ ಕರ್ನಾಟಕ ಸಂಘ ಕತಾರ್ ಹಾಗೂ ಕೋರ್ಸಿಸ್ ಕನ್ನಡ ಮೂವೀಸ್ ಸಂಯೋಗದೊಂದಿಗೆ ಸ್ಪೆಷಲ್ ಶೋ ಆಯೋಜಿಸಿಲಾಗಿದೆ. ಚಿತ್ರವು ಕತಾರ್ ನಲ್ಲಿ ಮೊಟ್ಟಮೊದಲ ಬಾರಿಗೆ 11 ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಪೂರ್ಣವಾಗಿ ಸ್ಕ್ರಿಪ್ಟ್, ಸ್ಕ್ರೀನ್ ಪ್ಲೇ, ಚಿತ್ರಕಥೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳು ಕೇಕ್ ಕತ್ತರಿಸಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು. ವಿಶೇಷ ಪ್ರದರ್ಶನಕ್ಕೆ ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಮತ್ತು ಪ್ರಭುರಾಜ್ ಅವರು ಏರ್ಪಡಿಸಿದ್ದರು.
ಮಹೇಶ್‌ ಗೌಡ ಮಾತನಾಡಿ ʻʻಕಬ್ಜ ಚಿತ್ರವು 100 ದಿನಗಳು ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದರು. ಸುಬ್ರಮಣ್ಯ ಹೆಬ್ಬಾಗಿಲು ಅವರು ಮಾತನಾಡಿ ʻಕನ್ನಡ ಸಿನಿಮಾಗಳು ಕತಾರ್‌ನಲ್ಲಿ ಇದೇ ರೀತಿ ಅದ್ಧೂರಿಯಾಗಿ ತೆರೆ ಗೊಳ್ಳಲು ಪ್ರಯತ್ನ ಮಾಡುತ್ತೇವೆʼ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Kabzaa Movie: ಕಬ್ಜ ಚಿತ್ರದ ನಿಜವಾದ ಕಲೆಕ್ಷನ್‌ ಎಷ್ಟು?

ಬೆಂಗಳೂರಿನಲ್ಲೂ ಕಬ್ಜ ದರ್ಬಾರ್ ಜೋರಾಗಿದೆ. ರಾಜಧಾನಿಯಲ್ಲೇ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಮಾರ್ಚ್‌ 22 ಯುಗಾದಿ ಹಬ್ಬದ ಪ್ರಯುಕ್ತ ಸಿನಿರಸಿಕರು ಭಾರಿ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ. ಸಿನಿಮಾ ನೋಡಿ ಪರಭಾಷಾ ಸೆಲಬ್ರಿಟಿಗಳು ಹೊಗಳಿದ್ದಾರೆ. ಶ್ರೀಯಾ ಶರಣ್​, ಕಬೀರ್ ದುಹಾನ್​ ಸಿಂಗ್​, ಪ್ರಮೋದ್​ ಶೆಟ್ಟಿ, ನವಾಬ್​ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ವಿತರಣಾ ಹಕ್ಕನ್ನು ಲೈಕಾ ಪ್ರೊಡಕ್ಷನ್‌ ಸಂಸ್ಥೆ ಹಲವಾರು ಕೋಟಿ ರೂ. ಕೊಟ್ಟು ಖರೀದಿಸಿದೆ. ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.

Exit mobile version