ಪ್ರಮುಖ ಸುದ್ದಿ
Kabzaa Movie: ವಿಶ್ವಾದ್ಯಂತ ಕಬ್ಜ ರಿಲೀಸ್: ಸಿನಿಮಾ ನೋಡಿ ಇನ್ನೊಂದು ಕೆಜಿಎಫ್ ಅಂದ್ರು ನೆಟ್ಟಿಗರು, ಇಲ್ಲಿದೆ ಟ್ವೀಟ್ ವಿಮರ್ಶೆ!
ರಿಯಲ್ ಸ್ಟಾರ್ ಉಪೇಂದ್ರ ಅವರ ಬಹು ನಿರೀಕ್ಷಿತ ಚಿತ್ರ ಕಬ್ಜ (Kabzaa Movie) ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟ್ವೀಟರ್‌ನಲ್ಲಿ ‘ಕಬ್ಜ’ ಬಗ್ಗೆ ನೋಡುಗರು ಹೇಳಿದ್ದೇನು? ಇಲ್ಲಿದೆ ಮಾಹಿತಿ!
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಬಹು ನಿರೀಕ್ಷಿತ ಚಿತ್ರ ಕಬ್ಜ ಸಿನಿಮಾ (Kabzaa Movie) ವಿಶ್ವಾದ್ಯಂತ ತೆರೆ ಕಂಡಿದೆ. ಕಿಚ್ಚ ಸುದೀಪ್, ಶಿವರಾಜ್‌ಕುಮಾರ್ ಕೂಡ ಕಾಣಿಸಿಕೊಳ್ಳುವುದರಿಂದ ಪ್ರೇಕ್ಷಕರನ್ನು ಕುತೂಹಲವಿತ್ತು. ಅಲ್ಲದೆ ಬಹುಭಾಷಾ ನಟಿ ಶ್ರಿಯಾ ಶರಣ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರು ಇವರನ್ನು ರೆಟ್ರೋ ಲುಕ್‌ನಲ್ಲಿ ನೋಡುವುದಕ್ಕೆ ಕಾದು ಕೂತಿದ್ದರು. ಪುನೀತ್ ರಾಜ್‌ಕುಮಾರ್ ಅವರ ಜನುಮದಿನದಂದೇ ಸಿನಿಮಾ ಬಿಡುಗಡೆಗೊಂಡಿದ್ದು, ಸಿನಿರಸಿಕರಲ್ಲಿ ಕುತೂಹಲ ಹೆಚ್ಚಾಗಿದೆ.
ಇಲ್ಲಿ ಉಪೇಂದ್ರ ಅರ್ಕೇಶ್ವರನಾಗಿ, ವಾಯುಸೇನೆಯ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಾರೆ. ಟ್ವೀಟರ್‌ನಲ್ಲಿ ‘ಕಬ್ಜ’ ಬಗ್ಗೆ ನೋಡುಗರು ಹೇಳಿದ್ದೇನು? ಇಲ್ಲಿದೆ ಮಾಹಿತಿ!
ಒಬ್ಬರು ಸಿನಿಮಾ ಬಗ್ಗೆ ʻʻನಾನು ಚಿತ್ರದ ಬಗ್ಗೆ ಏನನ್ನೂ ಬರೆಯಲು ಬಯಸುವುದಿಲ್ಲ ಎಂದು ನಾನು ಹೇಳಬಲ್ಲೆ, ಈ ಉಪ್ಪಿ ಸರ್ ಮತ್ತು ಇತರರು ಚಿತ್ರ ಬಿಡುಗಡೆಯ ಬಗ್ಗೆ ಹೇಗೆ ವಿಶ್ವಾಸ ಹೊಂದಿದ್ದಾರೆಂದು ನನಗೆ ಅರ್ಥವಾಗಲಿಲ್ಲ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Kabzaa Movie: ಕಬ್ಜ ರಿಲೀಸ್‌ಗೆ ಒಂದು ದಿನ ಬಾಕಿ: ತಿರುಪತಿಯತ್ತ ಚಿತ್ರತಂಡ ಪಯಣ
ಇನ್ನೊಬ್ಬರು ʻʻಕಬ್ಜ ಕನ್ನಡ ಚಿತ್ರರಂಗದ ಹೆಮ್ಮೆಯ ಸಿನಿಮಾ. ಆರ್.ಚಂದ್ರು ಅವರ ನಿರ್ದೇಶನ ಅದ್ಭುತವಾಗಿದೆ. ಉಪೇಂದ್ರ ಅವರ ನಟನೆಯು ಸಖತ್. ಸುದೀಪ್ ಅವರ ಆನ್-ಸ್ಕ್ರೀನ್ ಉಪಸ್ಥಿತಿ ಚೆನ್ನಾಗಿದೆ. ಶಿವಣ್ಣನ ಅಚ್ಚರಿಯ ಪ್ರವೇಶ ನನಗೆ ಗೂಸ್‌ಬಂಪ್ಸ್ ನೀಡಿತು. ಖಂಡಿತವಾಗಿ ಇದು 202ರ ಮೊದಲ ಬ್ಲಾಕ್‌ಬಸ್ಟರ್ ಸಿನಿಮಾ ಆಗಿದೆʼʼಎಂದು ಬರೆದುಕೊಂಡಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಹೆಮ್ಮೆ ಪಡುವಂತಹ ಸಿನಿಮಾ ಮತ್ತೆ ಬಂದಿದೆ ಎಂದು ಬರೆದುಕೊಂಡಿದ್ದಾರೆ.
ಮತ್ತೊಬ್ಬರು “ಕೆಜಿಎಫ್ 1 ಮತ್ತು 2 ಅನ್ನು ನೋಡಿದವರು ‘ಕಬ್ಜ’ ಸಿನಿಮಾ ನೋಡುವುದಿಲ್ಲ. ಅದೇ ಸ್ಕ್ರೀನ್ ಪ್ಲೇ.. ಅದೇ ಎಡಿಟಿಂಗ್” ಎಂದು ನೆಗೆಟಿವ್ ಆಗಿ ಕಮೆಂಟ್ ಮಾಡಿದ್ದಾರೆ.
ವಿಶ್ವಾದ್ಯಂತ ಒಟ್ಟು 4000 ತೆರೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಸಿನಿಮಾ ತೆರೆ ಕಂಡಿದೆ. ಕಬ್ಜ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶಿವರಾಜ್‌ಕುಮಾರ್, ಶ್ರೀಯಾ ಶರಣ್, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ, ನವಾಬ್ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರದ ವಿತರಣಾ ಹಕ್ಕನ್ನು ಲೈಕಾ ಪ್ರೊಡಕ್ಷನ್ ಸಂಸ್ಥೆ ಹಲವಾರು ಕೋಟಿ ರೂ. ಕೊಟ್ಟು ಖರೀದಿಸಿದೆ. ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.
ಧಾರ್ಮಿಕ
Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ?
Ram Navami 2023: ಭಗವಾನ್ ಶ್ರೀರಾಮ ಎಂದರೆ ನಂಬಿಕೆ, ವಿಶ್ವಾಸ, ಭರವಸೆ ಹಾಗೂ ಪರಿಪೂರ್ಣತೆ. ಅಂತಹ ಪರಿಪೂರ್ಣತೆಯನ್ನು ಸಾಧಿಸಲು ಏನೆಲ್ಲ ಮಾಡಬೇಕು? ಇಲ್ಲಿದೆ ಮಾಹಿತಿ.
ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ
ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಿದರೆ ಮಾತ್ರ ಮತ ಪ್ರಮಾಣ ಹೆಚ್ಚಲು ಸಾಧ್ಯ.
ಕೇಂದ್ರ ಚುನಾವಣೆ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನವನ್ನು ಘೋಷಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು, ಮೇ 13ರಂದು ಮತ ಎಣಿಕೆಯಾಗಿ ಫಲಿತಾಂಶ ಕೂಡ ಬರಲಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ.
ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಈ ಬಾರಿ ಆಯೋಗವು ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದ್ದು ಕೂಡ ಯೋಜಿತ ಮತ್ತು ಪರಿಣಾಮಕಾರಿ ನಿರ್ಧಾರ ಎನ್ನಬಹುದಾಗಿದೆ. ಹಾಗೆಯೇ ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಆದರೆ ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಯಾಗುತ್ತಿರುವ ಇದೊಂದು ಕ್ರಾಂತಿಕಾರಿ ಉಪಕ್ರಮವೇ ಸರಿ. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕಿದೆ.
ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಕರ್ನಾಟಕದಲ್ಲಿ 5, 21, 73, 573 ಮತದಾರರಿದ್ದು, ಇದರಲ್ಲಿ ಮೊದಲ ಬಾರಿಯ ಮತದಾರರ ಸಂಖ್ಯೆ 9.17 ಲಕ್ಷದಷ್ಟು ಹೆಚ್ಚಳವಾಗಿದೆ. ಇವರನ್ನು ಮತಗಟ್ಟೆಗಳತ್ತ ತರಲು ಉತ್ಸಾಹ ತುಂಬಲು, ಪ್ರಜಾಪ್ರಭುತ್ವದಲ್ಲಿ ಅವರ ಹೊಣೆಯ ಕುರಿತು ಆಡುವ ನಾಲ್ಕು ಪ್ರೋತ್ಸಾಹದ ಮಾತುಗಳೂ ಸಾಕಾಗುತ್ತವೆ. ಇವರನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಜೇನು ಕುರುಬ ಹಾಗೂ ಕೊರಗ ಸಮುದಾಯಗಳನ್ನು ಬುಡಕಟ್ಟು ಸಮುದಾಯಗಳು ಎಂದು ಪರಿಗಣಿಸಲಾಗಿದ್ದು, ಈ ಸಮುದಾಯದವರ ಮತದಾನಕ್ಕೆ 40 ಮತಗಟ್ಟೆ ಮಾಡಲಾಗಿದೆ. ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲಾಗಿರುವುದರಿಂದ ಒತ್ತಡ ಕಡಿಮೆಯಾಗಲಿದೆ. ಬೆಂಗಳೂರು ನಗರದಲ್ಲಿ ಯುವಮತದಾರರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಐಐಎಸ್‌ಸಿ, ಐಐಟಿ ಹಾಗೂ ಸ್ಟಾರ್ಟಪ್‌ಗಳ ಸಹಯೋಗದೊಂದಿಗೆ ಎಲೆಕ್ಥಾನ್ ಹಾಗೂ ಇನ್ನಿತರ ಕ್ರಮಗಳನ್ನು ಆಯೋಗ ಕೈಗೊಳ್ಳುತ್ತಿದೆ. ಮತ ಪ್ರಮಾಣ ಹೆಚ್ಚಿಸುವ ಸಲಹೆ ನೀಡುವವರಿಗೆ ಬಹುಮಾನ ಇತ್ಯಾದಿ ಹಲವು ಕ್ರಮಗಳನ್ನು ಕೈಗೊಂಡಿರುವುದು ಕ್ರಾಂತಿಕಾರಕವಾಗಿದೆ.
ಪ್ರತಿ ಮತವೂ ಅಮೂಲ್ಯ ಎಂದು ನಾವು ಹೇಳುತ್ತೇವೆ. ಆದರೆ, ಮುಖ್ಯವಾಗಿ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ನಗರ ಪ್ರದೇಶದ ಮತದಾರರ ಆಲಸ್ಯ ಹಾಗೂ ಹಣದ ಪ್ರಾಬಲ್ಯವು ಕರ್ನಾಟಕದಲ್ಲಿ ಪ್ರಮುಖ ಸವಾಲಾಗಿದೆ ಎಂದು ಆಯೋಗವೇ ಹೇಳಿದೆ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.
ದೇಶ
ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್
ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿಯ ನೆರವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಂಸದ ಶಶಿ ತರೂರ್ ಅವರು ಧಾವಿಸಿದ್ದು, ಇದರಿಂದ ಬಾಲಕಿಯು ಚಿಕಿತ್ಸೆ ಪಡೆಯಲು ಸಾಧ್ಯವಾಗಿದೆ. ಮಾನವೀಯ ನೆಲೆಯ ನಡೆಯ ಬಗ್ಗೆ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ನವದೆಹಲಿ/ತಿರುವನಂತಪುರಂ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗೆ ಮಾನವೀಯತೆ ಇದ್ದರೆ, ಆಳುವ ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇದ್ದರೆ ಏನೆಲ್ಲ ಆಗುತ್ತದೆ ಎಂಬುದಕ್ಕೆ ನಿದರ್ಶನ ಸಿಕ್ಕಿದೆ. ಹೌದು, ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿಯೊಬ್ಬಳ ಪ್ರಾಣ ಉಳಿಸಲು ಕೇಂದ್ರ ಸರ್ಕಾರವು 7 ಲಕ್ಷ ರೂಪಾಯಿ ಜಿಎಸ್‌ಟಿಗೆ ವಿನಾಯಿತಿ ನೀಡಿದರೆ, ಬಾಲಕಿಗೆ ಅಗತ್ಯ ನೆರವಿನ ವ್ಯವಸ್ಥೆ ಮಾಡಿಸುವ ಮೂಲಕ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮಾನವೀಯತೆ ಮೆರೆದಿದ್ದಾರೆ.
ನಿಹಾರಿಕಾ ಎಂಬ ಬಾಲಕಿಯು ನ್ಯೂರೋಬ್ಲಾಸ್ಟೋಮಾ (Neuroblastoma) ಎಂಬ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಕ್ಯಾನ್ಸರ್ ಈಕೆಗೆ ನಾಲ್ಕನೇ ಸ್ಟೇಜ್‌ನಲ್ಲಿದೆ. ಬಾಲಕಿಯ ಪ್ರಾಣ ಉಳಿಸಲು ಡಿನುಟುಕ್ಸಿಮ್ಯಾಬ್ ಬೆಟಾ (Dinutuximab Beta) ಅಥವಾ ಕರ್ಜಿಬಾ (Qarziba) ಎಂಬ ಇಂಜೆಕ್ಷನ್ ನೀಡಬೇಕು. ಈ ಇಂಜೆಕ್ಷನ್‌ನ ಒಂದು ಬಾಟಲಿಗೆ 10 ಲಕ್ಷ ರೂಪಾಯಿ ಇದ್ದು, ಇದನ್ನು ವಿದೇಶದಿಂದ ತರಿಸಬೇಕು. ಹೀಗೆ, ತರಿಸಿದ ಇಂಜೆಕ್ಷನ್ ಬೆಲೆ ಒಟ್ಟು 63 ಲಕ್ಷ ರೂಪಾಯಿ ಆಗಿದೆ. ಇದಕ್ಕೆ 7 ಲಕ್ಷ ರೂಪಾಯಿ ಜಿಎಸ್‌ಟಿ ಕಟ್ಟಬೇಕಿರುತ್ತದೆ. ಆದರೆ, ನಿಹಾರಿಕಾಳ ಕುಟುಂಬ ಸಂಕಷ್ಟದಲ್ಲಿರುವ ಕಾರಣ ಇಷ್ಟೊಂದು ಮೊತ್ತ ಭರಿಸಲು ಆಗುತ್ತಿರಲಿಲ್ಲ.
ಶಶಿ ತರೂರ್ ಪತ್ರ
ನೆರವಿಗೆ ಧಾವಿಸಿದ ಶಶಿ ತರೂರ್
ನಿಹಾರಿಕಾ ಕುಟುಂಬದ ಸಂಕಷ್ಟ ಅರಿತ ಶಶಿ ತರೂರ್ ಅವರು ನೆರವಿಗೆ ಧಾವಿಸಿದ್ದಾರೆ. ಮಾನವೀಯತೆ ಆಧಾರದ ಮೇಲೆ 7 ಲಕ್ಷ ರೂಪಾಯಿ ಜಿಎಸ್‌ಟಿ ಮನ್ನಾ ಮಾಡಬೇಕು ಎಂಬುದಾಗಿ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆಯುತ್ತಾರೆ. ಆದರೆ, ಸಚಿವಾಲಯದಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ. ಮತ್ತೊಂದೆಡೆ, ಔಷಧವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು, ತೆರಿಗೆ ಕಟ್ಟದಿದ್ದರೆ ಅದನ್ನು ನೀಡುವುದಿಲ್ಲ ಎಂಬುದಾಗಿ ಕಸ್ಟಮ್ಸ್ ಅಧಿಕಾರಿಗಳು ಹೇಳುತ್ತಾರೆ. ಆದರೂ ಪ್ರಯತ್ನ ಬಿಡದ ಶಶಿ ತರೂರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೇರವಾಗಿ ಕರೆ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಜಿಎಸ್‌ಟಿ ವಿನಾಯಿತಿ ನೀಡಲು ಒಪ್ಪಿ, ಕೊನೆಗೆ ಮಾರ್ಚ್ 28ರಂದು ಔಷಧಿಯು ನಿಹಾರಿಕಾ ಕುಟುಂಬಸ್ಥರ ಕೈ ಸೇರುತ್ತದೆ.
ಇದನ್ನೂ ಓದಿ: Karwar News: ನಿತ್ರಾಣಗೊಂಡಿದ್ದ ಭಿಕ್ಷುಕನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ
ಸೀತಾರಾಮನ್‌ಗೆ ತರೂರ್ ಧನ್ಯವಾದ
ಇಡೀ ಘಟನೆಯನ್ನು ಶಶಿ ತರೂರ್ ಅವರು ಪತ್ರದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. “ಪುಟ್ಟ ಬಾಲಕಿಗೆ ಈಗ ಇಂಜೆಕ್ಷನ್ ಸಿಗಲಿದೆ. ಆಕೆ ಬದುಕುಳಿಯಲಿದ್ದಾಳೆ. ಕೇಂದ್ರ ಸರ್ಕಾರವು ಏಳು ಲಕ್ಷ ರೂಪಾಯಿ ಆದಾಯವನ್ನು ಬಿಟ್ಟಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು. ರಾಜಕೀಯದ ಹೊರತಾಗಿಯೂ ನೀವು ಮಾನವೀಯತೆ ಮೆರೆದಿದ್ದೀರಿ. ಸರ್ಕಾರದ ಮೇಲೆ ನಾನು ಇಟ್ಟಿರುವ ನಂಬಿಕೆಯನ್ನು ಹೆಚ್ಚಿಸಿದ್ದೀರಿ” ಎಂಬುದಾಗಿ ಭಾವುಕರಾಗಿ ಸಚಿವೆಗೆ ಧನ್ಯವಾದ ತಿಳಿಸಿದ್ದಾರೆ. ಶಶಿ ತರೂರ್ ಪೋಸ್ಟಿಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಸಂಸದ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.
ಕರ್ನಾಟಕ
ವಿಸ್ತಾರ TOP 10 NEWS: ಮೇ 10ಕ್ಕೆ ಚುನಾವಣೆ ಮುಹೂರ್ತದಿಂದ, ಟೆಕ್ಕಿ ಪ್ರತಿಭಾ ಅತ್ಯಾಚಾರಿಗೆ 30 ವರ್ಷ ಜೈಲುವರೆಗಿನ ಪ್ರಮುಖ ಸುದ್ದಿಗಳಿವು
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
1. Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಕರ್ನಾಟಕದಲ್ಲಿ 16ನೇ ವಿಧಾನಸಭೆಯನ್ನು ಆಯ್ಕೆ ಮಾಡುವ ಸಲುವಾಗಿ ಮೇ 10 ರ ಬುಧವಾರದಂದು ಒಂದೇ ಹಂತದಲ್ಲಿ ಚುನಾವಣೆ (Karnataka Election) ನಡೆಯಲಿದೆ. ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Karnataka Elections 2023: ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳುವುದೇನು?
ಮುಂಬರುವ ಲೋಕಸಭೆ ಚುನಾವಣೆ, ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ, ರಾಹುಲ್ ಗಾಂಧಿ ಅನರ್ಹತೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಎಂಬುದು ಸೇರಿ ಹಲವು ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Elections 2023) ದಿನಾಂಕ ನಿಗದಿಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13ಕ್ಕೆ ಫಲಿತಾಂಶ ಪ್ರಕಟವಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಎಬಿಪಿ-ಸಿವೋಟರ್ ಹಾಗೂ ಜೀ ನ್ಯೂಸ್-ಮ್ಯಾಟ್ರಿಜ್ ಚುನಾವಣೆಪೂರ್ವ ಸಮೀಕ್ಷೆ ನಡೆಸಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. Karnataka Elections 2023 : ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನರು ನಮ್ಮ ಪರ: ಬೊಮ್ಮಾಯಿ ವಿಶ್ವಾಸ
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು (Karnataka Elections 2023) ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಕಾಂಗ್ರೆಸ್ ಏನೇ ಆರೋಪ ಮಾಡಿದರೂ ಜನತಾ ಜನಾರ್ದನ ನಮ್ಮ ಪರವಾಗಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚುನಾವಣೆ ಘೋಷಣೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ತಳಮಟ್ಟದಿಂದಲೇ ಗಟ್ಟಿಯಾಗಿದೆ ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. Karnataka Election: ಚುನಾವಣೆ ಘೋಷಣೆ ಬೆನ್ನಿಗೇ ಗರ್ಜಿಸಿದ ಕಾಂಗ್ರೆಸ್: ʼಮತ್ತೆ ಗರ್ಜಿಸಲಿದೆ ಕರ್ನಾಟಕʼ ಅಭಿಯಾನ ಆರಂಭ
ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ “ಮತ್ತೆ ಗರ್ಜಿಸಲಿದೆ ಕರ್ನಾಟಕ” ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ವಿಧಾನಸಭೆ ಚುನಾವಣೆಯ ಎಲ್ಲ ಸುದ್ದಿಗಳನ್ನೂ ಓದಲು ಇಲ್ಲಿ ಕ್ಲಿಕ್ ಮಾಡಿ.
5. SC ST Reservation: ಮಾರ್ಚ್ 30ಕ್ಕೆ ನಡೆಯಲ್ಲ ಬಂಜಾರ ಸಮುದಾಯದ ಪ್ರತಿಭಟನೆ; ನೀತಿ ಸಂಹಿತೆ ಜಾರಿ ಹಿನ್ನೆಲೆ ಮುಷ್ಕರ ವಾಪಸ್
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಗುರುವಾರ (ಮಾ. 30) ನಡೆಯಬೇಕಿದ್ದ ಬಂಜಾರ ಸಮುದಾಯದವರ ಬೃಹತ್ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ. ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ತೀರ್ಮಾನವನ್ನು ಹಿಂತೆಗೆದುಕೊಳ್ಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. Amritpal Singh: ವಿಡಿಯೊ ಬಿಟ್ಟ ಅಮೃತ್‌ಪಾಲ್, ಬಂಧನದ ಯತ್ನ ಸಿಖ್ಖರ ಮೇಲಿನ ದಾಳಿ ಎಂದ ಖಲಿಸ್ತಾನಿ ನಾಯಕ
ಖಲಿಸ್ತಾನಿಗಳ ನಾಯಕ, ಪಂಜಾಬ್‌ನಲ್ಲಿ ಗಲಭೆಗೆ ಕಾರಣವಾಗಿರುವ ಅಮೃತ್‌ಪಾಲ್ ಸಿಂಗ್ (Amritpal Singh) ಮಾರ್ಚ್ 18ರಿಂದ ನಾಪತ್ತೆಯಾಗಿದ್ದಾನೆ. ಈತನ ಬಂಧನಕ್ಕೆ ರಾಜ್ಯದ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ, ಅಮೃತ್‌ಪಾಲ್ ಸಿಂಗ್ ವಿಡಿಯೊ ಬಿಡುಗಡೆ ಮಾಡಿದ್ದು, “ನನ್ನ ಬಂಧನಕ್ಕೆ ನಡೆಸುತ್ತಿರುವ ಕಾರ್ಯಾಚರಣೆಯು ಇಡೀ ಸಿಖ್ ಸಮುದಾಯದ ಮೇಲೆ ನಡೆಸುತ್ತಿರುವ ದಾಳಿ” ಎಂದಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. Karnataka Rain: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ; ಚಾಮರಾಜನಗರ, ಬೆಂಗಳೂರಲ್ಲಿ ತಂಪೆರೆದ ವರುಣ
ಕಳೆದ ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್‌ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
ಬ್ಯಾಂಕ್ ಖಾತೆಗೆ ಲಿಂಕ್ ಹೊಂದಿರುವ ಯುಪಿಐ ಬಳಕೆಗೆ (UPI transactions) ಸಂಬಂಧಿಸಿ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದು ಉಚಿತ ಎಂದು ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಬುಧವಾರ ಸ್ಪಷ್ಟೀಕರಣ ನೀಡಿದೆ. ಇದರದೊಂದಿಗೆ ಯುಪಿಐ ಮೂಲಕ ಹಣ ಪಾವತಿಗೆ ಶುಲ್ಕ ( Interchange fee ) ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9. Rape and murder : ಬೆಂಗಳೂರಿನ ಐಟಿ ಉದ್ಯೋಗಿ ಪ್ರತಿಭಾ ಅತ್ಯಾಚಾರ, ಕೊಲೆ ಪ್ರಕರಣ; ಕ್ಯಾಬ್ ಡ್ರೈವರ್‌ಗೆ 30 ವರ್ಷ ಜೈಲು
ಇಡೀ ರಾಜ್ಯವೇ ನಡುಗುವಂತೆ ಮಾಡಿದ, ಐಟಿ ಉದ್ಯೋಗಿಗಳ ವಲಯದಲ್ಲಿ ತಲ್ಲಣವನ್ನು ಸೃಷ್ಟಿಸಿದ್ದ 2005ರ ಐಟಿಯ ಉದ್ಯೋಗಿಯ ಅತ್ಯಾಚಾರ ಮತ್ತು ಕೊಲೆ (Rape and murder) ಪ್ರಕರಣದಲ್ಲಿ ಆರೋಪಿಗೆ 30 ವರ್ಷಗಳ ಜೈಲುವಾಸದ ಶಿಕ್ಷೆಯನ್ನು ನೀಡಲಾಗಿದೆ. ಆರೋಪಿ ಶಿವಕುಮಾರ್ ಎಂಬಾತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ ಕೋರ್ಟ್ 30 ವರ್ಷಗಳ ಕಾಲ ಜೈಲಿನಿಂದ ಹೊರಗೆ ಬಿಡಬಾರದು ಎಂಬ ಷರತ್ತು ವಿಧಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. IPL 2023: ಐಪಿಎಲ್ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ(IPL 2023) ಆರಂಭಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಈ ಬಾರಿ ಯಾವ ತಂಡ ಕಪ್ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಅದರಲ್ಲೂ ಆರ್ಸಿಬಿ ಅಭಿಮಾನಿಗಳು ಈ ಬಾರಿ ಪಕ್ಕಾ ಕಪ್ ನಮ್ದೇ ಎಂದು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆರ್ಸಿಬಿ(RCB) ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಮತ್ತಷ್ಟು ಪ್ರಮುಖ ಸುದ್ದಿಗಳಿವು
- SC ST Scholarship: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶೀಘ್ರವೇ ಬಂಪರ್, ಏರಿಕೆ ಆಗಲಿದೆ ವಿದ್ಯಾರ್ಥಿ ವೇತನ
- Google: ಗೂಗಲ್‌ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
- Ballary young Mayor : ಬಳ್ಳಾರಿ ಪಾಲಿಕೆಗೆ 21 ವರ್ಷದ ಯುವತಿ ಮೇಯರ್, ರಾಜ್ಯದಲ್ಲೇ ಅತಿಕಿರಿಯ ವಯಸ್ಸಿನ ಮಹಾಪೌರರು!
- Priyanka Chopra: ಫೇರ್‌ನೆಸ್ ಆ್ಯಡ್‌ಗಳಲ್ಲಿ ನಟಿಸುವುದು ಹಾನಿಕರ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದೇಕೆ?
- Kabzaa Movie: ಕಬ್ಜ ಒಟಿಟಿ ರಿಲೀಸ್ ಯಾವಾಗ? ಕಬ್ಜ 2ಗೆ ತಯಾರಿ ನಡೆದಿದ್ಯಾ?
-
ಕರ್ನಾಟಕ12 hours ago
Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
-
ಕರ್ನಾಟಕ14 hours ago
Karnataka Election 2023 LIVE: ಕರ್ನಾಟಕದಲ್ಲಿ ಮೇ 10ಕ್ಕೆ ಮತದಾನ, 13ಕ್ಕೆ ರಿಸಲ್ಟ್, ಒಂದೇ ಹಂತದ ಎಲೆಕ್ಷನ್
-
ಕರ್ನಾಟಕ16 hours ago
Karnataka Election: ಕರ್ನಾಟಕ ಚುನಾವಣೆ ದಿನಾಂಕ ಇಂದು ಘೋಷಣೆ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
-
ಕರ್ನಾಟಕ11 hours ago
Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
-
ಪ್ರಮುಖ ಸುದ್ದಿ7 hours ago
UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್‌ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
-
ಗ್ಯಾಜೆಟ್ಸ್9 hours ago
Google: ಗೂಗಲ್‌ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
-
ಕರ್ನಾಟಕ11 hours ago
Karnataka Elections 2023 : ವಲಸಿಗ ಸಚಿವರ ಮೇಲೆ ಬೊಮ್ಮಾಯಿ ನಿಗಾ; ಹೆಬ್ಬಾರ್, ಮುನಿರತ್ನ ಕರೆಸಿಕೊಂಡು ಚರ್ಚೆ
-
ಕರ್ನಾಟಕ15 hours ago
Karnataka Elections 2023 : 8 ಸಚಿವರ ಸಹಿತ 35 ಶಾಸಕರಿಗೆ ಸೋಲಿನ ಭೀತಿ, ಈ ಬಾರಿ ಬಿಜೆಪಿಯಲ್ಲಿ 50 ಹೊಸ ಮುಖ?