Site icon Vistara News

Kangana Ranaut: ʻಎಮರ್ಜೆನ್ಸಿʼ ಬಿಡುಗಡೆ ದಿನಾಂಕ ಘೋಷಿಸಿದ ಕಂಗನಾ ರಣಾವತ್​

Kangana Ranaut

Kangana Ranaut

ಮುಂಬೈ: ಜೂನ್‌ 25-ಈ ದಿನಾಂಕವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವೇ ಇಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ದಿನವಿದು. ಇಂದಿಗೆ ತುರ್ತು ಪರಿಸ್ಥಿತಿಗೆ 49 ವರ್ಷ ಪೂರ್ಣವಾಗಿದ್ದು, ಈ ಹಿನ್ನಲೆಯಲ್ಲಿ ಬಾಲಿವುಡ್‌ ನಟಿ, ಸಂಸದೆ ಕಂಗನಾ ರಣಾವತ್​ (Kangana Ranaut) ತಾವು ನಿರ್ದೇಶಿಸಿ, ನಿರ್ಮಿಸಿ, ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿರುವ ʼಎಮರ್ಜೆನ್ಸಿʼ (Emergency) ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ʼʼಭಾರತದ ಇತಿಹಾಸದಲ್ಲಿಯೇ ಕಪ್ಪು ಚುಕ್ಕೆಯಾಗಿರುವ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆಯ ಆರಂಭದಲ್ಲಿ ʼಎಮರ್ಜೆನ್ಸಿʼ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುತ್ತಿದ್ದೇವೆ. ಸೆಪ್ಟೆಂಬರ್‌ 6ರಂದು ಚಿತ್ರ ತೆರೆ ಕಾಣಲಿದೆ. ಭಾರತದ ಸಂವಿಧಾನದ ಬಹುದೊಡ್ಡ ವಿವಾದ ತೆರೆ ಮೇಲೆ ಅನಾವರಣಗೊಳ್ಳಲಿದೆʼʼ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಚಿತ್ರತಂಡ ಬರೆದುಕೊಂಡಿದೆ.

ಈ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಕಂಗನಾ ಕೆಲವು ದಿನಗಳ ಹಿಂದೆ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು. ಇಲ್ಲದಿದ್ದರೆ ಇಷ್ಟರಲ್ಲಾಗಲೇ ಚಿತ್ರ ತೆರೆ ಕಾಣಬೇಕಿತ್ತು. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಅವರು ರಿಲೀಸ್‌ ಡೇಟ್‌ ಮುಂದೂಡಿದ್ದರು. ಸದ್ಯ ಅವರು ಹಿಮಾಚಲ ಪ್ರದೇಶ ಮಂಡಿ ಕ್ಷೇತಚರದಿಂದ ಗೆದ್ದು, ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ರಾಹಜೀಯಕ್ಕೆ ಆದ್ಯತೆ ನೀಡುವುದಾಗಿ ಈ ಹಿಂದೆ ಕಂಗನಾ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಈಗ ಅನುಮಾನಕ್ಕೆ ಸ್ವತಃ ಅವರೇ ತೆರೆ ಎಳೆದಿದ್ದಾರೆ.

‘ಎಮರ್ಜೆನ್ಸಿ’ಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ನಟಿಸಿದ್ದು, ಫಸ್ಟ್‌ ಲುಕ್‌ನಲ್ಲಿ ಇಂದಿರಾ ಗಾಂಧಿ ಅವರನ್ನೇ ಹೋಲುತ್ತಿರುವುದನ್ನು ನೋಡಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ಇನ್ನು ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಇಂದಿರಾ ಗಾಂಧಿಯ ಗಟ್ಟಿ ವ್ಯಕ್ತಿತ್ವದ ಅನಾವರಣ ಮಾಡಲಾಗಿದೆ ಎನ್ನಲಾಗುತ್ತಿದೆ. ಜತೆಗೆ ತುರ್ತು ಪರಿಸ್ಥಿತಿಯನ್ನೂ ಇಂಚು ಇಂಚಾಗಿ ತೆರೆದಿಡಲಿದೆ. ಹೀಗಾಗಿ ಈಗಾಗಲೇ ಸಿನಿಮಾ ಗಮನ ಸೆಳೆದಿದೆ.

ಇದನ್ನೂ ಓದಿ: Kangana Ranaut: ರಾಜಕೀಯಕ್ಕಿಂತ ಸಿನಿಮಾ ಬೆಸ್ಟ್​ ಎಂದ ಕಂಗನಾ! ಪೊಲಿಟಿಕಲ್​ ಜರ್ನಿ ವಿವರಿಸಿದ ನಟಿ

ಗೆಲುವು ಅನಿವಾರ್ಯ

ಕಂಗನಾ ಅಭಿನಯದ ಇತ್ತೀಚಿನ ಚಿತ್ರಗಳು ಯಾವುದೂ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಿಲ್ಲ. ಕಂಗನಾ ಅಭಿನಯಕ್ಕೆ ಪ್ರೇಕ್ಷಕರು, ವೀಕ್ಷಕರು ಮೆಚ್ಚುಗೆ ಸೂಚಿಸಿದ್ದರೂ ಮ್ಯಾಜಿಕ್‌ ಮಾಡಿರಲಿಲ್ಲ. ಹೀಗಾಗಿ ಈ ಚಿತ್ರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಹಿಂದೆ ಕಂಗನಾ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 2021ರಲ್ಲಿ ಬಿಡುಗಡೆಯಾದ ʼತಲೈವಿʼ ಸಿನಿಮಾದಲ್ಲಿ ಕಂಗನಾ ಅವರು ಜಯಲಲಿತಾ ಅವರ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದರು. ಹೀಗಾಗಿ ಅವರು ಎರಡನೇ ಬಾರಿ ಪ್ರಬಲ ರಾಜಕಾರಣಿ ಪಾತ್ರಕ್ಕೆ ಬಣ್ಣ ಹಚ್ಚಿದಂತಾಗಿದೆ.

Exit mobile version