Site icon Vistara News

Manoranjan Ravichandran | ಅದ್ಧೂರಿ ಆರತಕ್ಷತೆಯಲ್ಲಿ ಸಿಎಂ ಸೇರಿದಂತೆ ಅನೇಕ ಗಣ್ಯರು ಭಾಗಿ

Manoranjan Ravichandran

ಬೆಂಗಳೂರು: ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ (Manoranjan Ravichandran) ಅವರ ಆರತಕ್ಷತೆ ಕಾರ್ಯಕ್ರಮ ದೇವನಹಳ್ಳಿಯ ಜೆ.ಡಬ್ಲ್ಯೂ ಮ್ಯಾರೀಟ್ ರೆಸಾರ್ಟ್ ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪ , ಎಸ್‌ ಎಂ ಕೃಷ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

ಮನೋರಂಜನ್‌ ಭಾನುವಾರದಂದು (ಆ.21) ಸಂಗೀತಾ ದೀಪಕ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಆಹ್ವಾನದ ಮೇರೆಗೆ ಸಚಿವ ಡಾ. ಸುಧಾಕರ್‌ ಸೇರಿದಂತೆ ರಾಜ್ಯದ ಅನೇಕ ರಾಜಕಾರಣಿಗಳು, ಸ್ಯಾಂಡಲ್‌ವುಡ್‌ನ ಕೆಲ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ, ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ನಟ ಯಶ್‌ ನವ ದಂಪತಿಗಳಿಗೆ ಶುಭ ಹಾರೈಸಿದರು.

ಸೋಮವಾರ ಸಂಜೆ 7 ಗಂಟೆಯಿಂದಲೇ ಕಾರ್ಯಕ್ರಮ ಆರಂಭವಾಗಿದೆ. ಸುಮಾರು ಒಂದು ಸಾವಿರ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆರತಕ್ಷತೆಯ ಅಂಗವಾಗಿ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರೇಜಿ ಸ್ಟಾರ್‌ ರವಿಚಂದ್ರನ್‌ ಬಂದ ಗಣ್ಯರನ್ನು ಸ್ವಾಗತಿಸಿ, ನವಜೋಡಿಯನ್ನು ಪರಿಚಯಿಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಆಗಮಿಸಿದ್ದರು.

ಮದುವೆಯ ಹಿಂದಿನ ದಿನ ಅಂದರೆ ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೂಡ ಅದ್ಧೂರಿಯಾಗಿ ಈ ರೀತಿಯ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕನ್ನಡ ಚಿತ್ರರಂಗದ ಬಹುತೇಕ ನಟ-ನಟಿಯರು ಭಾಗವಹಿಸಿದ್ದರು. 

ಇದನ್ನೂ ಓದಿ | Manoranjan Ravichandran | ಸಂಗೀತಾಗೆ ಮಾಂಗಲ್ಯಧಾರಣೆ ಮಾಡಿದ ಮನೋರಂಜನ್: ಇಲ್ಲಿದೆ ವಿಡಿಯೊ!

Exit mobile version