Site icon Vistara News

Kannada Film | ಕಂಬ್ಳಿಹುಳ ಮೊದಲ ಹಾಡು ಔಟ್‌: ಮೋಡಿ ಮಾಡಿತು ಯಾಕೀ ನಗು ಹಾಡು!

Kannada Film

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ (Kannada Film) ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ʻʻಜಾರಿಬಿದ್ದರೂ ಯಾಕೀ ನಗುʼʼ ಎಂಬ ಸಾಹಿತ್ಯದ ಹಾಡು ಕೇಳುಗರನ್ನು ಸೆಳೆಯುತ್ತಿದೆ. ಎರಡು ಮುದ್ದಾದ ಜೋಡಿಯ ನವಿರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ಮಹದೇವ್ ಸ್ವಾಮಿ, ರವಿ ಧನ್ಯನ್ ಗೀತ ಸಾಹಿತ್ಯಕ್ಕೆ ವಿಜಯ್ ಪ್ರಕಾಶ್ ಮತ್ತು ಸಂಗೀತ ರವೀಂದ್ರನಾಥ್ ಅವರ ಸುಮಧುರ ಧ್ವನಿಯಿದೆ. ಶಿವ ಪ್ರಸಾದ್ ಅವರ ಸಂಗೀತವಿದ್ದು, ಈ ಹಾಡಿನಲ್ಲಿ ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಜೋಡಿ ಸಹಜ ನಟನೆ ಮೂಲಕ ಗಮನ ಸೆಳೆಯುತ್ತಾರೆ. ರೇಣುಕಾಂಬ ಸ್ಟುಡಿಯೋದಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮ ಜರುಗಿದ್ದು, ಈ ವೇಳೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿದೆ.

ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ, ʻʻಕಿರುಚಿತ್ರದಿಂದ ಆರಂಭವಾದ ನನ್ನ ಜರ್ನಿ ಈಗ ಕಂಬ್ಳಿಹುಳ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದೇನೆ. ಮಲೆನಾಡಿನ ಸುಂದರ ಪರಿಸರದಲ್ಲಿ ಚಿತ್ರ ಮೂಡಿಬಂದಿದ್ದು, ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇದೊಂದು ಎಮೋಷನಲ್ ಜರ್ನಿ ಎಂದು ಹೇಳಬಹುದಾಗಿದೆ. ಜತೆಗೆ ಹಾಸ್ಯ, ಭಾವನೆ ಎಲ್ಲವೂ ಇವೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ | Independence Day | ಸ್ಯಾಂಡಲ್‌ವುಡ್‌ ಟ್ರಿಬ್ಯೂಟ್ ವಿಡಿಯೊ ಸಾಂಗ್‌ ಔಟ್‌: ಇದು ಒಗ್ಗಟ್ಟಿನ ವಂದೇ ಮಾತರಂ!

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ತಯಾರಾಗಿರುವ ಈ ಚಿತ್ರಕ್ಕೆ ನವನ್ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಹಿಂದೆ ಕಿರುಚಿತ್ರಗಳ ಮೂಲಕ ನಿರ್ದೇಶನದ ಚಾಕಚಕತ್ಯೆ ಅರಿತಿರುವ ನವನ್ ಕಂಬ್ಳಿಹುಳ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಕಂಬ್ಳಿಹುಳ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗೂ ಗುರು ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರ ಛಾಯಾಗ್ರಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿ.ಕೆ. ಸಂಕಲನವಿದೆ.

ಇದನ್ನೂ ಓದಿ | Dollu Kannada Movie | ಡೊಳ್ಳು ಸಿನಿಮಾದ ಮಾಯಾನಗರಿ ಹಾಡು ಬಿಡುಗಡೆ ಮಾಡಿದ ಡಾಲಿ ಧನಂಜಯ್‌

Exit mobile version