Site icon Vistara News

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

swagat babu no more

ಬೆಂಗಳೂರು: ಕನ್ನಡ ಚಲನಚಿತ್ರಗಳ ನಿರ್ಮಾಪಕ (film producer) ಹಾಗೂ ವಿತರಕರಾಗಿದ್ದ (distributor) ಸ್ವಾಗತ್‌ ಬಾಬು (Swagat Babu) ಅವರು ಮೃತಪಟ್ಟಿದ್ದಾರೆ. ಅವರು ನಿರ್ಮಿಸಿದ್ದ ಚಂದ್ರಮುಖಿ ಪ್ರಾಣಸಖಿ, ಶ್ರೀರಸ್ತು ಶುಭಮಸ್ತು, ಸ್ಮೈಲ್ ಮುಂತಾದ ಸಿನಿಮಾಗಳು ಹಿಟ್‌ ಆಗಿದ್ದವು. ಇವಲ್ಲದೇ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದರು. ಸುದೀರ್ಘ 35 ವರ್ಷಗಳಿಂದ ಅವರು ಕನ್ನಡ ಚಿತ್ರೋದ್ಯಮದ (kannada film industry) ಆಗುಹೋಗುಗಳಲ್ಲಿ ತೊಡಗಿಸಿಕೊಂಡಿದ್ದರು. ಸ್ವಾಗತ್‌ ಬಾಬು ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್‌ ಇನ್ನಿಲ್ಲ

ಬೆಂಗಳೂರು: ತಮಿಳು ಸಿನಿಮಾಗಳ ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ನಿನ್ನೆ (ಮೇ 27ರಂದು) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

Exit mobile version