Site icon Vistara News

Kannada New Film | ʻರತ್ನನ್‌ ಪ್ರಪಂಚʼ ಖ್ಯಾತಿಯ ಪ್ರಮೋದ್ ನಟನೆಯ ‘ಬಾಂಡ್ ರವಿ’ ಡಿಸೆಂಬರ್‌ 9ಕ್ಕೆ ತೆರೆಗೆ

Kannada New Film (band ravi )

ಬೆಂಗಳೂರು : ‘ರತ್ನನ್ ಪ್ರಪಂಚ’ ಚಿತ್ರದಲ್ಲಿ (Kannada New Film) ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ತೆರೆ ಮೇಲೆ ಬರುತ್ತಿದ್ದಾರೆ. ಪ್ರಮೋದ್ ಸಿನಿ ಕೆರಿಯರ್‌ನಲ್ಲಿ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ. ಬಾಂಡ್ ರವಿ ಮೂಲಕ ಮಾಸ್ ಹೀರೊ ಆಗಿ ಮಿಂಚಲು ಸಜ್ಜಾಗಿದ್ದಾರೆ. ಲವ್ ಸ್ಟೋರಿ ಒಳಗೊಂಡ ಈ ಚಿತ್ರಕ್ಕೆ ಪ್ರಜ್ವಲ್ ಎಸ್.ಪಿ ಅವರ ನಿರ್ದೇಶನವಿದೆ. ಪ್ರೇಕ್ಷಕರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಡಿಸೆಂಬರ್ 9ರಂದು ತೆರೆ ಕಾಣುತ್ತಿದೆ.

ಇದನ್ನೂ ಓದಿ | Kannada New Film | ʻಕಾಲಾಯ ನಮಃʼ ಎನ್ನುತ್ತ ಮತ್ತೆ ತೆರೆ ಮೇಲೆ ಬರುತ್ತಿದ್ದಾರೆ ನಟ ಕೋಮಲ್‌!

ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿವೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ ವಿಜಯ ಪ್ರಕಾಶ್ ದನಿಯಾಗಿರುವ ‘ಮಜ ಮಜ ಮಾಡು ಬಾ’, ಜಯಂತ್ ಕಾಯ್ಕಿಣಿ ಸಾಹಿತ್ಯದ ಸೋನು ನಿಗಂ ದನಿಯಾಗಿರುವ ‘ಸಹಜ ಸಖಿ’ ಹಾಡುಗಳು ಬಿಡುಗಡೆಯಾಗಿ ಕೇಳುಗರ ಮನಗೆದ್ದಿವೆ.

ನರಸಿಂಹಮೂರ್ತಿ ವಿ ಅವರು ಲೈಫ್ ಲೈನ್ ಫಿಲ್ಮ್‌ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ. ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Film | ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟ ರಿಷಿ: ಪ್ರಶಾಂತ್ ರಾಜಪ್ಪ ಆ್ಯಕ್ಷನ್‌ ಕಟ್‌!

Exit mobile version