Site icon Vistara News

Kannada New Film | ಪ್ರಮೋದ್‌ ನಟನೆಯ ಬಾಂಡ್‌ ರವಿ ಟೀಸರ್‌ ರಿಲೀಸ್‌!

Kannada New Film

ಬೆಂಗಳೂರು: ಡಾಲಿ ಧನಂಜಯ್‌ ಅಭಿನಯದ ‘ರತ್ನನ್ ಪ್ರಪಂಚ’ದಲ್ಲಿ ಉಡಾಳ್ ಬಾಬು ಆಗಿ ನಟ ಪ್ರಮೋದ್‌ ಸಿನಿ ಪ್ರೇಕ್ಷಕರನ್ನು ರಂಜಿಸಿದ್ದರು. ಇದೀಗ ಪ್ರಮೋದ್ ಬಾಂಡ್‌ ರವಿಯಾಗಿ (Kannada New Film) ತೆರೆ ಮೇಲೆ ಬರುವುದಕ್ಕೆ ಸಜ್ಜಾಗಿದ್ದಾರೆ. ಚಿತ್ರದ ಟೀಸರ್‌ ಸೆ.25 ಬಿಡುಗಡೆಯಾಗಿದೆ. ಟೀಸರ್‌ ಅನ್ನು ಪತ್ರಕರ್ತರ ಮೂಲಕ ಬಿಡುಗಡೆ ಮಾಡಿಸಲಾಯಿತು.

ಈ ಕುರಿತು ಪ್ರಮೋದ್‌ ಮಾತನಾಡಿ ʻʻನಾನು ಏನು ಆಗಿಲ್ಲದೆ ಇದ್ದಾಗಿನಿಂದಲೂ ನನ್ನನ್ನು ಸಪೋರ್ಟ್ ಮಾಡಿಕೊಂಡು ಬಂದವರು ಪತ್ರಕರ್ತರು. ಎಂಟು ವರ್ಷದಿಂದ ನನ್ನ ಪ್ರತಿ ಹೆಜ್ಜೆಯಲ್ಲಿ ಮಾಧ್ಯಮ ಹಾಗೂ ಪತ್ರಕರ್ತ ಮಿತ್ರರ ಸಹಕಾರ ಬಹಳ ದೊಡ್ಡದು. ಆದ್ದರಿಂದ ಈ ಚಿತ್ರದ ಟೀಸರ್ ಪತ್ರಕರ್ತ ಮಿತ್ರರೇ ಮಾಡಿರುವ ಬಗ್ಗೆ ಖುಷಿ ಇದೆʼʼ ಎಂದರು. ‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಪ್ರಮೋದ್‌ ಪದಾರ್ಪಣೆ ಮಾಡಿದ್ದರು. ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ತಮ್ಮ ವಿಶೇಷ ಅಭಿನಯದ ಮೂಲಕ ಅಪಾರ ಮನ್ನಣೆ ಗಳಿಸಿಕೊಂಡಿದ್ದಾರೆ.

ಈ ಸಿನಿಮಾಗೆ ಮನೋಮೂರ್ತಿ ಸಂಗೀತ ನಿರ್ದೇಶನವಿದೆ. ʻʻನನಗೂ ಈ ಸಿನಿಮಾ ಬಗ್ಗೆ ಅಪಾರ ಭರವಸೆ ಇದೆ. ಮುಂಗಾರು ಮಳೆ ಕೂಡ ಹೀಗೆಯೇ ಆರಂಭವಾಗಿತ್ತು. ಅದು ದೊಡ್ಡ ಮಟ್ಟದಲ್ಲಿ ಹಿಟ್ ಆಯ್ತು. ಈ ಸಿನಿಮಾ ಕೂಡ ಹಿಟ್ ಆಗುತ್ತೆ. ಪ್ರಮೋದ್ ಮತ್ತು ಕಾಜಲ್ ಕುಂದರ್ ಇಬ್ಬರೂ ಅಮೋಘವಾಗಿ ನಟಿಸಿದ್ದಾರೆʼʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ | Kannada New Film | ಮೇಘನಾ ಗಾಂವ್ಕರ್ ನಟನೆಯ ಶುಭಮಂಗಳ ಸಿನಿಮಾ ರಿಲೀಸ್‌ ಡೇಟ್‌ ಪ್ರಕಟ

ಚಿತ್ರದ ನಟಿ ಕಾಜಲ್ ಕುಂದರ್ ಮಾತನಾಡಿ ʻʻನನ್ನ ಮೇಲೆ ನಂಬಿಕೆ ಇಟ್ಟು ಒಳ್ಳೆಯ ಪಾತ್ರವನ್ನು ಕೊಟ್ಟಿದ್ದಕ್ಕೆ ಚಿತ್ರತಂಡಕ್ಕೆ ತುಂಬಾ ಧನ್ಯವಾದಗಳು. ನನ್ನ ಪಾತ್ರಕ್ಕೆ ನ್ಯಾಯ ಒದಗಿಸಿದ್ದೇನೆ ಎಂಬ ನಂಬಿಕೆ ಇದೆ. ಪ್ರಮೋದ್ ಜತೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆʼʼ ಎಂದರು.

ಈ ಚಿತ್ರಕ್ಕೆ ಪ್ರಜ್ಚಲ್ ನಿರ್ದೇಶನವಿದೆ. ಲವ್‌ ಸ್ಟೋರಿಯನ್ನು ಒಳಗೊಂಡ ಈ ಚಿತ್ರಕ್ಕೆ ನರಸಿಂಹಮೂರ್ತಿ ಲೈಫ್ ಲೈನ್ ಫಿಲ್ಮ್‌ ಬ್ಯಾನರ್ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಚಿತ್ರದಲ್ಲಿ ಅಪ್ಪು ಅಭಿಮಾನಿಯಾಗಿ ಪ್ರಮೋದ್ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ, ಮಂಗಳೂರು ಭಾಗಗಳಲ್ಲಿ ಬಾಂಡ್‌ ರವಿ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರವಿ ಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್, ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ.

ಇದನ್ನೂ ಓದಿ | Kannada New Film | ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ನಟಿ ತಪಸ್ವಿನಿ ಪೂಣಚ್ಚ ಈಗ ಗಜರಾಮ ಸಿನಿಮಾಗೆ ನಾಯಕಿ

Exit mobile version