Site icon Vistara News

Kannada New Film | ʻಗಜರಾಮʼ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

Kannada New Film

ಬೆಂಗಳೂರು: ನಟ ರಾಜವರ್ಧನ್ ನಟಿಸುತ್ತಿರುವ ‘ಗಜರಾಮ’ ಸಿನಿಮಾ (Kannada New Film)ಶೂಟಿಂಗ್ ಭರದಿಂದ ಸಾಗುತ್ತಿದೆ. ಚಿತ್ರತಂಡ 16 ದಿನಗಳ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಹಾಯಕ ನಿರ್ದೇಶಕರಾಗಿರುವ ಸುನೀಲ್ ಕುಮಾರ್ ವಿ.ಎ ನಿರ್ದೇಶನದ ಮೊದಲ ಸಿನಿಮಾವಿದು.

ʻʻಹದಿನಾರು ದಿನ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಮೊದಲ ಶೆಡ್ಯೂಲ್ ಮುಗಿದ್ದಿದ್ದು ಎರಡನೇ ಶೆಡ್ಯೂಲ್‌ಗಾಗಿ ಲೊಕೇಶನ್ ಹುಡುಕಾಟದಲ್ಲಿದ್ದೇವೆ. ಇನ್ನು ನಲವತ್ತು ದಿನಗಳ ಶೂಟಿಂಗ್ ಬಾಕಿ ಇದೆ. ನಾನು ಏನು ಅಂದುಕೊಂಡಿದ್ದೆನೋ ಹಾಗೆಯೇ ಚಿತ್ರೀಕರಣ ನಡೆಯುತ್ತಿದೆ. ಮೊದಲ ಸಿನಿಮಾ ಎಂದು ನೋಡದೇ ಹಿರಿಯ ಹಾಗೂ ಅನುಭವಿ ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ನನಗೆ ಸಹಕಾರ ನೀಡುತ್ತಾ ನನ್ನ ಬೆನ್ನೆಲುಬಾಗಿ ನಿಂತಿದ್ದಾರೆʼʼ ಎಂದು ನಿರ್ದೇಶಕ ಸುನೀಲ್ ಕುಮಾರ್‌ ವಿ. ಎ ತಿಳಿಸಿದ್ದಾರೆ.

ಲವ್ ಸ್ಟೋರಿ ಹಾಗೂ ಮಾಸ್ ಆಕ್ಷನ್ ಕಥಾಹಂದರ ಒಳಗೊಂಡ ಚಿತ್ರದಲ್ಲಿ ರಾಜವರ್ಧನ್ ಜೋಡಿಯಾಗಿ ʻಹರಿಕಥೆ ಅಲ್ಲ ಗಿರಿಕಥೆʼ ಸಿನಿಮಾ ಖ್ಯಾತಿಯ ತಪಸ್ವಿನಿ ಪೂಣಚ್ಚ ನಟಿಸುತ್ತಿದ್ದಾರೆ. ಶಿಷ್ಯ ದೀಪಕ್ ಚಿತ್ರದ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದು, ಖಳನಟನಾಗಿ ʻಪೈಲ್ವಾನ್ʼ ಖ್ಯಾತಿಯ ಕಬೀರ್ ದುಹಾನ್ ಸಿಂಗ್ ನಟಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತು, ಗೋವಿಂದೇ ಗೌಡ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

ಇದನ್ನೂ ಓದಿ | Kannada New Film | ʻಊರಿಗೆ ಹೋಗಿ ಬರೋಕೂ ನಮ್ಮತ್ರ ಹಣವಿಲ್ಲʼ: ಕಂಬ್ಳಿಹುಳ ತಂಡಕ್ಕೆ ರಿಷಬ್‌ ಶೆಟ್ಟಿ ಹೇಳಿದ್ದೇನು?

ಲೈಫ್ ಲೈನ್ ಫಿಲ್ಮ್‌ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝೇವಿಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮನೋಮೂರ್ತಿ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ ಇದೆ. ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್ ಸಾಹಿತ್ಯದಲ್ಲಿ ಹಾಡುಗಳು ಮೂಡಿ ಬರಲಿವೆ.

ಇದನ್ನೂ ಓದಿ | Kannada New Film | `ಜುಗಲ್ ಬಂದಿ’ ಸಿನಿಮಾ ಮೊದಲ ಹಾಡು ಬಿಡುಗಡೆ: ಕನ್ನಡಕ್ಕೆ ಬಂದ ತಮಿಳು ಗಾಯಕಿ!

Exit mobile version