Site icon Vistara News

Kannada New Film | ʻಕಾಲಾಯ ನಮಃʼ ಎನ್ನುತ್ತ ಮತ್ತೆ ತೆರೆ ಮೇಲೆ ಬರುತ್ತಿದ್ದಾರೆ ನಟ ಕೋಮಲ್‌!

Kannada New Film (Komal actor)

ಬೆಂಗಳೂರು : ಸ್ಯಾಂಡಲ್‌ವುಡ್‌ ಹಾಸ್ಯ ಕಲಾವಿದ ನಟ ಕೋಮಲ್ ಕುಮಾರ್‌ (Kannada New Film) ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದರು. ಈಗ ʻಕಾಲಾಯ ನಮಃʼ ಚಿತ್ರದ ಮೂಲಕ ಚಿತ್ರರಂಗಕ್ಕೆ ಮರಳಿ ಬರುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.

ನಟ ಕೋಮಲ್‌ ಮಾತನಾಡಿ ʻʻಮನುಷ್ಯನ ಜೀವನದಲ್ಲಿ ಗ್ರಹಗಳ ಪ್ರಭಾವ ಅಪಾರವಾದದ್ದು. ನನ್ನ ಜೀವನದಲ್ಲೂ ಹಾಗೆ. ನಮ್ಮ ಅಣ್ಣ ಜಗ್ಗೇಶ್ ಅವರು, ಕೆಲವು ವರ್ಷಗಳ ಹಿಂದೆ ನನ್ನ ಜಾತಕ ನೋಡಿ, ನಿನಗೆ ಈಗ ಕೇತು ದೆಸೆ ನಡೆಯುತ್ತಿದೆ. ಹಾಗಾಗಿ ಸ್ವಲ್ಪ ಹುಷಾರಾಗಿರು ಅಂದಿದ್ದರು. ಹಾಗಾಗಿ ಐದು ವರ್ಷದಿಂದ ನಾನು ಯಾವುದೇ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.‌ ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ಮಾಡುತ್ತಿದೆ. ಈಗ ಕಾಲ ಕೂಡಿ ಬಂದಿದೆ. “ಕಾಲಾಯ ನಮಃ” ಶುರುವಾಗಿದೆ. ಕಾಲಭೈರವ ದೇವರ ಭಕ್ತನಾದ ನನ್ನ ಸಿನಿಮಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀಯ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿಮಾ ಸಾಗುತ್ತದೆʼ.ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ | Kannada New Film | ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟ ರಿಷಿ: ಪ್ರಶಾಂತ್ ರಾಜಪ್ಪ ಆ್ಯಕ್ಷನ್‌ ಕಟ್‌!

ಕೋಮಲ್‌ ಅವರ ಪತ್ನಿ ಅನಸೂಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮತಿವಣನ್ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್,‌ ತಿಲಕ್ ಹಾಗೂ ಜಗ್ಗೇಶ್ ಅವರ‌ ಪುತ್ರ ಯತಿರಾಜ್ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.‌

ಜಗ್ಗೇಶ್‌ ಚಿತ್ರದ ಕುರಿತು ಮಾತನಾಡಿ ʻʻಜ್ಯೋತಿಷ ಯಾರು ನಂಬುತ್ತಾರೋ, ಬಿಡುತ್ತಾರೋ ನನಗ ಗೊತ್ತಿಲ್ಲ. ಆದರೆ ನನಗೆ ನಂಬಿಕೆಯಿದೆ. ಕೋಮಲ್ ಅವರಿಗೆ ಕೇತುದೆಸೆ ಇದೆ. 2022 ರವರೆಗೂ ಏನು ಮಾಡಬೇಡ ಅಂದಿದ್ದೆ. ಆತ ನನ್ನ ಮಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದಯೆಯಿಂದ ಈ‌ ಚಿತ್ರ ಆರಂಭಿಸಿದ್ದಾನೆ. ನನ್ನ‌ ಮಗ ಯತಿರಾಜ್ ಕೂಡ ಇದರಲ್ಲಿ ಅಭಿನಯಿಸುತ್ತಿದ್ದಾನೆ. ಈ ತಂಡದಿಂದ ಒಳ್ಳೆಯ ಸಿನಿಮಾ ಬರುವ ವಿಶ್ವಾಸವಿದೆ.‌‌ ಒಳ್ಳೆಯದಾಗಲಿʼʼ ಎಂದಿದ್ದಾರೆ. ಈ ಚಿತ್ರಕ್ಕೆ ಎಮಿಲ್‌ ಅವರ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ ತಿಲಕ್ ಛಾಯಾಗ್ರಹಣವಿದೆ.

ಇದನ್ನೂ ಓದಿ | Kannada New film | ʻಮಾಫಿಯಾʼ ಚಿತ್ರದ ನಿರ್ದೇಶಕರ ಜತೆ ಮತ್ತೊಮ್ಮೆ ಕೈ ಜೋಡಿಸಿದ ಡೈನಾಮಿಕ್ ಪ್ರಿನ್ಸ್!

Exit mobile version