Site icon Vistara News

Kannada New Film | ರವೀಂದ್ರ ವೆಂಶಿ ನಿರ್ದೇಶನದ ʻಮಠʼ ಟ್ರೈಲರ್‌ ಔಟ್‌: ನವೆಂಬರ್ 18ಕ್ಕೆ ತೆರೆಗೆ!

Kannada New Film

ಬೆಂಗಳೂರು : ಗುರು ಪ್ರಸಾದ್ ನಿರ್ದೇಶನದ ಸೂಪರ್ ಹಿಟ್ ಸಿನಿಮಾ (Kannada New Film) ‘ಮಠ’ 2006ರಲ್ಲಿ ತೆರೆ ಕಂಡು ಸಾಕಷ್ಟು ಹೆಸರು ಗಳಿಸಿತ್ತು. ಇದೀಗ ಅದೇ ಹೆಸರಲ್ಲಿ 16 ವರ್ಷಗಳ ನಂತರ ಹೊಸದೊಂದು ಸಿನಿಮಾ ನಿರ್ಮಾಣವಾಗಿದೆ. ಇದೆ ನವೆಂಬರ್‌ 18ರಂದು ತೆರೆಗೆ ಬರುತ್ತಿದೆ. ನಿರ್ದೇಶಕ ರವೀಂದ್ರ ವೆಂಶಿ ನಿರ್ದೇಶನದಲ್ಲಿ ಬರುತ್ತಿರುವ ಈ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ.

ಫಿಲಾಸಫಿಕಲ್ ಹಾಗೂ ಕಾಮಿಡಿ ಮಿಶ್ರಿತ ಕಥಾಹಂದರ ಸಿನಿಮಾದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಕರ್ನಾಟಕದಲ್ಲಿರುವ ಮಠಗಳ ಬಗ್ಗೆ ಹಾಗೂ ಅಲ್ಲಿ ನಡೆದಂತ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ನಿರ್ದೇಶಕ ರವೀಂದ್ರ ವೆಂಶಿ ಚಿತ್ರಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ. ರವೀಂದ್ರ ವೆಂಶಿ ‘ಪುಟಾಣಿ ಸಫಾರಿ’, ‘ವರ್ಣಮಯ’, ‘ವಾಸಂತಿ ನಲಿದಾಗ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು ಈ ಬಾರಿ ‘ಮಠ’ ಮೂಲಕ ವಿಭಿನ್ನ ಕಥಾವಸ್ತುವನ್ನು ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ | Kannada New Film | ʻಗಜರಾಮʼ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ವಿ ಆರ್ ಕಂಬೈನ್ಸ್ ಬ್ಯಾನರ್‌ನಡಿ ಆರ್.ರಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಹು ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ಸಂತೋಷ್ ದಾವಣಗೆರೆ ನಾಯಕ ನಟನಾಗಿ ನಟಿಸಿದ್ದಾರೆ. ಸಾಧುಕೋಕಿಲ, ರಮೇಶ್ ಭಟ್, ತಬಲ ನಾಣಿ, ಶರತ್ ಲೋಹಿತಾಶ್ವ, ಬ್ಯಾಂಕ್ ಜನಾರ್ದನ್‌, ರಾಜು ತಾಳಿಕೋಟೆ, ಮಂಡ್ಯ ರಮೇಶ್, ಗುರುಪ್ರಸಾದ್, ಬಿರಾದಾರ್ ಒಳಗೊಂಡ ತಾರಾಗಣವಿದೆ.

ಜೀವನ್ ಗೌಡ ಛಾಯಾಗ್ರಾಹಣ, ಸಿ. ರವಿಚಂದ್ರನ್ ಸಂಕಲನ, ಶ್ರೀ ಗುರು ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಯೋಗ ರಾಜ್ ಭಟ್, ವಿ.ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ.

ಇದನ್ನೂ ಓದಿ | Mata Film | ಸ್ಯಾಂಡಲ್‌ವುಡ್‌ಗೆ ಬರಲು ಮತ್ತೊಂದು ಮಠ ರೆಡಿ

Exit mobile version