Site icon Vistara News

Kannada New Film | ಮೇಘನಾ ಗಾಂವ್ಕರ್ ನಟನೆಯ ಶುಭಮಂಗಳ ಸಿನಿಮಾ ರಿಲೀಸ್‌ ಡೇಟ್‌ ಪ್ರಕಟ

Kannada New Film

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸೂಪರ್‌ಹಿಟ್‌ ಸಿನಿಮಾಗಳ ಟೈಟಲ್ ಮರುಬಳಕೆ ಆಗುವುದು ಹೊಸತೇನಲ್ಲ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಶುಭಮಂಗಳ’ (Kannada New Film) ಚಿತ್ರದ ಟೈಟಲ್ ಇಟ್ಟುಕೊಂಡು ಇದೀಗ ಹೊಸ “ಶುಭಮಂಗಳʼ ತೆರೆಗೆ ಬರಲಿದೆ. ಮೇಘನಾ ಗಾಂವ್ಕರ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಅದ್ದೂರಿಗಾಗಿ ಅಕ್ಟೋಬರ್ 14ಕ್ಕೆ ತೆರೆಗೆ ಬರಲಿದೆ.

ಚಿತ್ರದ ಟ್ರೈಲರ್‌ ಈಗಾಗಲೇ ಬಿಡುಗಡೆಗೊಂಡಿದೆ. ಇತ್ತೀಚೆಗಷ್ಟೇ ರೇಣುಕಾಂಬ ಸ್ಟುಡಿಯೋದಲ್ಲಿ ಟ್ರೈಲರ್‌ ಬಿಡುಗಡೆ ಕಾರ್ಯಕ್ರಮ ನೆರವೇರಿದ್ದು, ಇಡೀ ಚಿತ್ರತಂಡ ಈ ಕಾರ್ಯಕ್ರಮಕ್ಕೆ ಭಾಗಿಯಾಗಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಈ ಸಿನಿಮಾಗೆ ಸಂತೋಷ್ ಗೋಪಾಲ್ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಇದನ್ನೂ ಓದಿ | Kannada New Film | K ಕರಟಕ D ದಮನಕ; ಇದು ಶಿವಣ್ಣ-ಪ್ರಭುದೇವ-ಭಟ್ಟರ ಹೊಸ ಸಿನಿಮಾ ಜಾತಕ!

ನಿರ್ದೇಶಕ ಸಂತೋಷ್ ಗೋಪಾಲ್ ಮಾತನಾಡಿ, ʻʻಮದುವೆ ಮನೆಯಲ್ಲಿ ನಡೆಯುವ ಕಥೆ ಇದು. ಮದುವೆ ಮನೆಗೆ ಹೋದರೆ ಅಲ್ಲಿ ಎಮೋಷನ್, ಡ್ರಾಮಾ ಹೀಗೆ ಹಲವು ಸನ್ನಿವೇಶಗಳು ತುಂಬಾ ಕಥೆಗಳು ನಡೆಯುತ್ತಲೆ ಇರುತ್ತವೆ. ಆ ಕಥೆಗಳಲ್ಲಿ ಐದನ್ನು ಆಯ್ಕೆ ಮಾಡಿ ಸಿನಿಮಾ ಮಾಡಿದ್ದೇನೆ. ಈ ಚಿತ್ರದಲ್ಲಿ ಪುರುಷರು ಹಾಗೂ ಮಹಿಳೆ ಇಬ್ಬರಿಗೂ ಹೆಚ್ಚಿನ ಪ್ರಾಮುಖ್ಯತೆ ಇದೆ. ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂದು ಭಾವಿಸಿದ್ದೇವೆʼʼ ಎಂದರು.

ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ರೂಪಿಸಿದ್ದಾರೆ.

ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಾಲಾಜಿ ಮುಂತಾದವರು ನಟಿಸಿದ್ದಾರೆ. ಜುಡಾ ಸ್ಯಾಂಡಿ ಸಂಗೀತ, ರಾಕೇಶ್ ಬಿ ರಾಜ್ ಛಾಯಾಗ್ರಹಣ ಮಾಡಿದ್ದು, ಸಂತೋಷ್ ನಿರ್ದೇಶನದ ಜತೆಗೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಹಾಗೆಯೇ ಕಲ್ಯಾಣ್‌ ಮತ್ತು ಜಯಂತ್‌ ಕಾಯ್ಕಿಣಿ ಸಾಹಿತ್ಯ ಸಿನಿಮಾಕ್ಕಿದೆ.

ಅವ್ಯಕ್ತ ಫಿಲ್ಮ್ಸ್‌ನಡಿಯಲ್ಲಿ ಸಂತೋಷ್ ಸ್ನೇಹಿತರ ಜತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮದುವೆ ಮನೆಗೆ ತೆರಳಿ ವಿಭಿನ್ನವಾಗಿ ಈಗಾಗಲೇ ಪ್ರಮೋಷನ್‌ ನಡೆಸಲಾಗುತ್ತಿದೆ.

ಇದನ್ನೂ ಓದಿ | Kannada New Film | ಕಿರೀಟಿ ನೂತನ ಸಿನಿ ಸೆಟ್‌ಗೆ ಶಿವರಾಜ್‌ ಕುಮಾರ್‌ ಸರ್ಪ್ರೈಸ್ ವಿಸಿಟ್

Exit mobile version