Site icon Vistara News

Kannada New Film | ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟ ರಿಷಿ: ಪ್ರಶಾಂತ್ ರಾಜಪ್ಪ ಆ್ಯಕ್ಷನ್‌ ಕಟ್‌!

Kannada New Film ನಟ ರಿಷಿ ಪ್ರಶಾಂತ್ ರಾಜಪ್ಪ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ (Kannada New Film) ಡೈಲಾಗ್‌ ರೈಟರ್ ಆಗಿ ಗುರುತಿಸಿಕೊಂಡಿರುವ ಪ್ರಶಾಂತ್ ರಾಜಪ್ಪ ಈಗ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದಕ್ಕೆ ‘ಆಪರೇಷನ್ ಅಲಮೇಲಮ್ಮ’, ‘ಕವಲು ದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಜತೆಯಾಗಿದ್ದಾರೆ.

ʻವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಪೊಗರು’, ‘ಹೊಂದಿಸಿ ಬರೆಯಿರಿ’ ಸೇರಿದಂತೆ 25ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಬರೆದಿರುವ ಪ್ರಶಾಂತ್ ರಾಜಪ್ಪ, ಈಗ ಸ್ವತಂತ್ರವಾಗಿ ನಿರ್ದೇಶನಕ್ಕಿಳಿದಿದ್ದಾರೆ. ಕಾಮಿಡಿ, ಎಮೋಷನಲ್ ಡ್ರಾಮಾ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್‌ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯದಲ್ಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲವನ್ನೂ ರಿವೀಲ್ ಮಾಡುತ್ತೇವೆ ಎಂದು ಪ್ರಶಾಂತ್ ರಾಜಪ್ಪ ಹೇಳಿದ್ದಾರೆ. ಸಿನಿಮಾ ಬರಹಗಾರನಾಗಿ, ನಿರ್ದೇಶಕ ಗುರು ಪ್ರಸಾದ್, ಪಿ.ಸಿ. ಶೇಖರ್, ಎಚ್.ಪಿ. ದಾಸ್ ಜತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವನ್ನು ಪ್ರಶಾಂತ್ ರಾಜಪ್ಪ ಹೊಂದಿದ್ದಾರೆ.

ಇದನ್ನೂ ಓದಿ | Kannada New Film | ರವೀಂದ್ರ ವೆಂಶಿ ನಿರ್ದೇಶನದ ʻಮಠʼ ಟ್ರೈಲರ್‌ ಔಟ್‌: ನವೆಂಬರ್ 18ಕ್ಕೆ ತೆರೆಗೆ!

”ಸಿನಿಮಾಗೆ ಕಥೆ, ಚಿತ್ರಕಥೆ, ಸಂಭಾಷಣೆ ಮೂರರ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತಿದ್ದೇನೆ. ಸದ್ಯಕ್ಕೆ ರಿಷಿ ಮಾತ್ರ ಆಯ್ಕೆಯಾಗಿದ್ದು, ಇನ್ನೊಂದು ಮುಖ್ಯ ಪಾತ್ರಕ್ಕೆ ಭಾರತೀಯ ಚಿತ್ರರಂಗದ ಪ್ರಮುಖ ಪೋಷಕ ಕಲಾವಿದರು ಆಯ್ಕೆಯಾಗಲಿದ್ದಾರೆ. ಅದನ್ನು ಸದ್ಯದಲ್ಲೇ ರಿವೀಲ್‌ ಮಾಡುತ್ತೇವೆ” ಎಂದಿದ್ದಾರೆ ಪ್ರಶಾಂತ್‌.

ಇದನ್ನೂ ಓದಿ | Kannada New film | ʻಮಾಫಿಯಾʼ ಚಿತ್ರದ ನಿರ್ದೇಶಕರ ಜತೆ ಮತ್ತೊಮ್ಮೆ ಕೈ ಜೋಡಿಸಿದ ಡೈನಾಮಿಕ್ ಪ್ರಿನ್ಸ್!

Exit mobile version