Site icon Vistara News

Kannada New Movie: ಈ ವಾರ ಸ್ಯಾಂಡಲ್‌ವುಡ್‌ನಲ್ಲಿ 12 ಸಿನಿಮಾಗಳು ರಿಲೀಸ್‌!

12 movies release in Sandalwood this week

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಈ ಶುಕ್ರವಾರ (ಮಾರ್ಚ್​ 3) 12 ಸಿನಿಮಾಗಳು (Kannada New Movie) ರಿಲೀಸ್​ ಆಗುತ್ತಿವೆ. ‘19.20.21’, ‘ದೂರದರ್ಶನ’, ‘ಕಾಸಿನ ಸರ’ (Kasina Sara Movie) ಮುಂತಾದ ಸಿನಿಮಾಗಳು ನಿರೀಕ್ಷೆ ಮೂಡಿಸಿವೆ. ಇದರ ಜತೆ ಪರಭಾಷಾ ಸಿನಿಮಾಗಳು ಪೈಪೋಟಿ ನೀಡಿದೆ.

19.20.21

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ (Manso Re) ನಿರ್ದೇಶನದ 19.20.21 ಸಿನಿಮಾ ಬಿಡುಗಡೆ ಆಗುತ್ತಿದೆ. ಜೈ ಭೀಮ್, ಜನಗಣಮನ ಸಿನಿಮಾಗಳ ಮಾದರಿಯಲ್ಲಿ ‘19.20.21’ ನೈಜ ಘಟನೆಯಾಧಾರಿತ ಚಿತ್ರವಾಗಿದೆ. ಬಾಲಾಜಿ ಮನೋಹರ್, ಎಂ ಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಲೆ ಮುಂತಾದವರ ತಾರಾ ಬಳಗ ಈ ಚಿತ್ರದಲ್ಲಿದೆ.ಆ್ಯಕ್ಟ್​-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದಾರೆ. ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿ ಕೆ ಕುಮಾರ್ ಕ್ಯಾಮೆರಾ, ಸುರೇಶ್ ಆರ್ಮುಗಂ ಸಂಕಲನವಿದೆ.

ಇದನ್ನೂ ಓದಿ: Manso Re | ರಾಷ್ಟ್ರಪಶಸ್ತಿ ಪುರಸ್ಕೃತ ಮಂಸೋರೆ ನಿರ್ದೇಶನದ ‘19.20.21’ ಟೀಸರ್‌ ಔಟ್‌

‘ದೂರದರ್ಶನ’ ಸಿನಿಮಾ

ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ದೂರದರ್ಶನ’ ಸಿನಿಮಾ. ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಅಯಾನ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್‌ನಡಿ ರಾಜೇಶ್ ಭಟ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಉಗ್ರಂ ಮಂಜು ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ. ಉಗ್ರಂ ಮಂಜು, ಸುಂದರ್, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಚಿತ್ರದಲ್ಲಿದೆ. ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿ ಜಿ ಸಂಭಾಷಣೆ, ವಾಸುಕಿ ವೈಭವ ಸಂಗೀತ ಚಿತ್ರಕ್ಕಿದೆ.

ʻಕಾಸಿನ ಸರ’

ವಿಜಯ್​ ರಾಘವೇಂದ್ರ ಮತ್ತು ಹರ್ಷಿಕಾ ಪೂಣಚ್ಚ ಅವರು ‘ಕಾಸಿನ ಸರ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಎನ್.ಆರ್. ನಂಜುಂಡೇಗೌಡ ನಿರ್ದೇಶನ ಮಾಡಿದ್ದಾರೆ. ರೈತ ಹೋರಾಟಗಾರನ ಪಾತ್ರದಲ್ಲಿ ವಿಜಯ್​ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಪತ್ನಿಯ ಪಾತ್ರಕ್ಕೆ ಹರ್ಷಿಕಾ ಪೂಣಚ್ಚ ಬಣ್ಣ ಹಚ್ಚಿದ್ದಾರೆ.

ಒಂದಂಕೆ ಕಾಡು

ರಾಮಚಂದ್ರ ವೈದ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಒಂದಂಕೆ ಕಾಡು ಬಿಡುಗಡೆಯಾಗುತ್ತಿದೆ. ರಥರ್ವ, ಸೋನಿ, ಮಧು ಹೆಗ್ಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರದ ಟ್ರೈಲರ್‌ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿದೆ.ಗಣೇಶ್ ಹೆಗ್ಡೆ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ಟಿ.ಜಿ. ನಂದೀಶ್ ಸಂಭಾಷಣೆ, ಮಧು ಹೆಗ್ಡೆ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಹೃದಯಶಿವ, ಡಾ. ಉಮೇಶ್ ಸಾಹಿತ್ಯದಲ್ಲಿ ಹಾಡುಗಳು ಮೂಡಿ ಬಂದಿದ್ದು, ಅನುರಾಧಾ ಭಟ್, ಕಪಿಲ್ ನಾಯರ್, ಕೀರ್ತನ್ ಹೊಳ್ಳ ಹಿನ್ನೆಲೆ ಗಾಯನ ಚಿತ್ರಕ್ಕಿದೆ.

ಇದನ್ನೂ ಓದಿ: Kannada New Movie: ಪೃಥ್ವಿ ಅಂಬಾರ್ ಅಭಿನಯದ ‘ದೂರದರ್ಶನ’ ಮಾರ್ಚ್ 3ಕ್ಕೆ ತೆರೆಗೆ

ಅದೇ ರೀತಿ ‘ಕಡಲ ತೀರದ ಭಾರ್ಗವ’, ‘ಪ್ರಜಾ ರಾಜ್ಯ’, ʻ ನಾಕು ಮುಖ’, ‘ಬೀಗ’, ‘ಅಂಬಾಸಡರ್​’, ‘ರಾಕ್ಷಸ ತಂತ್ರ’ ‘ಚೇರ್ಮನ್​’ ಸಿನಿಮಾಗಳು ಕೂಡ ಈ ವಾರವೇ ರಿಲೀಸ್​ ಆಗುತ್ತಿವೆ.

Exit mobile version