Site icon Vistara News

Kannada New Movie: ’ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

Kannada New Movie

ಬೆಂಗಳೂರು: ಸಿದ್ದು ಮೂಲಿಮನಿ ಮುಖ್ಯ ಭೂಮಿಕೆಯಲ್ಲಿರುವ ’ಅಭಿರಾಮಚಂದ್ರ ಸಿನಿಮಾದ (Kannada New Movie) ಟೀಸರ್ ಬಿಡುಗಡೆಗೊಂಡಿದೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಟೀಸರ್‌ ಬಗ್ಗೆ ನಟ ಶಿವರಾಜ್‌ಕುಮಾರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಭಿರಾಮಚಂದ್ರ ಟೀಸರ್ ಬಗ್ಗೆ ಶಿವಣ್ಣ ಹೇಳಿದ್ದೇನು?

ʻʻಅಭಿರಾಮಚಂದ್ರ ಟೀಸರ್ ರಿಲೀಸ್ ಮಾಡಿದ್ದು ಬಹಳ ಖುಷಿಯಾಯಿತು. ನಾಗೇಂದ್ರ ಗಾಣಿಗ ಡೈರೆಕ್ಷನ್ ಮಾಡಿದ್ದಾರೆ. ಮಕ್ಕಳ ಕಥೆ ಇದೆ. ಸ್ಟೋರಿಯಲ್ಲಿ ಬೇರೆ ಬೇರೆ ತಿರುವು ಕಾಣುತ್ತಿದೆ. ಅದನ್ನು ನಾವು ಹೇಳುವುದಕ್ಕಿಂತ ನಿರ್ದೇಶಕರು ಹೇಳಿದರೆ ಒಳ್ಳೆಯದು. ಟೀಸರ್ ನೋಡುತ್ತಿದ್ದರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆನಪಾಯ್ತು. ಆ ಸಿನಿಮಾ ತರ ಹಿಟ್ ಆಗಲಿ. ಟೈಟಲ್ ತುಂಬಾ ಪಾಸಿಟಿವ್ ಆಗಿದೆ. ಸಿನಿಮಾ ಮೇ ನಲ್ಲಿ ರಿಲೀಸ್ ಆಗುತ್ತಿದ್ದು, ನಾನು ನೋಡುತ್ತೇನೆ. ನೀವು ನೋಡಿ.. ರವಿ ಬಸ್ರೂರ್ ಸಂಗೀ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿʼʼ ಎಂದಿದ್ದಾರೆ.

ಶಾಲಾ ದಿನಗಳ ಪ್ರೀತಿ, ತುಂಟಾಟ, ಮುಗ್ದ ಸ್ನೇಹ ಸುಂದರ ನೋಟ ಅಭಿರಾಮಚಂದ್ರ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಾನಿ ರೈ ನಾಯಕಿ ಆಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: Kannada New Movie: 50 ದಿನದ ಭಾವನಾತ್ಮಕ ಪಯಣ, ಒಟಿಟಿಯಲ್ಲಿ ‘ಹೊಂದಿಸಿ ಬರೆಯಿರಿ’ ಸಿನಿಮಾ

ಅಭಿರಾಮಚಂದ್ರ ಪೋಸ್ಟರ್‌

ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್ ನಡೆಸಲಾಗಿದ್ದು, ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಸಿನಿಮಾಕ್ಕಿದೆ. ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಎ.ಜಿ. ಎಸ್ ಎಂಟಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್‌ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಅಭಿರಾಮಚಂದ್ರ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

Exit mobile version