ಬೆಂಗಳೂರು: ನಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿದೆ ‘ಆರಾಮ್ ಅರವಿಂದ ಸ್ವಾಮಿ’. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿ ಸಾಥ್ ನೀಡಿದ್ದಾರೆ.
‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಆ್ಯಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನಾ ನಾಗರಾಜ್ ಹಾಗೂ ಹೃತಿಕ್ ಶ್ರೀನಿವಾಸ್ , ಅನೀಶ್ ಜತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ.
ಇದೇ ಮೊದಲ ಬಾರಿಗೆ ನಾಯಕ ಅನೀಶ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಮಿಲನಾ ನಾಗರಾಜ್ ಬಹಳ ವಿಭಿನ್ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಿ ಹುಡುಗಿ ಹಾಗೂ ಟೀಚರ್ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಮಿಲನಾ ನಾಗರಾಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಫಸ್ಟ್ ಲುಕ್ ಪೋಸ್ಟರ್ ಆರಾಮ್ ಅರವಿಂದ ಸ್ವಾಮಿ
ಇದನ್ನೂ ಓದಿ: Milana Nagaraj | ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ
ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.