ಬೆಂಗಳೂರು: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ. ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ʼಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀʼ ಚಿತ್ರದ ಪೋಸ್ಟರ್ (Kannada New Movie) ಬಿಡುಗಡೆಯಾಯಿತು.
ಕಾರ್ಯಕ್ರಮದಲ್ಲಿ ನಿರ್ದೇಶಕ ಸಿಂಪಲ್ ಸುನಿ ಅವರು ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.
ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ
ದಿಯಾ , ದಸರಾ, ಕೆಟಿಎಂ ಹಾಗೂ ಬ್ಲಿಂಕ್ ಸಿನಿಮಾಗಳಲ್ಲಿ ಅಭಿನಯದಲ್ಲಿ ಹೆಸರು ಮಾಡಿ, ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಸಿನಿಮಾದ ನಾಯಕಿಯಾಗಿದ್ದಾರೆ.
ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!
ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ. ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನಿಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ ವಿಎಫ್‌ಎಕ್ಸ್ (VFX) ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.
ಹಾಸ್ಯ ಪ್ರಧಾನ ಕಥಾಹಂದರ
ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರವನ್ನು ಈ ಚಿತ್ರವು ಒಳಗೊಂಡಿದೆ. ಸಹ ಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಸೇರಿದಂತೆ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.
ಶೀಘ್ರದಲ್ಲೇ ಚಿತ್ರೀಕರಣ ಮುಕ್ತಾಯ
ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತಮುತ್ತ ಶೇ.80 ರಷ್ಟು ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.
ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!
ಇನ್ನು ʼಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀʼ ಸಿನಿಮಾವನ್ನು ನಿರ್ಮಾಪಕ ಎಚ್.ಕೆ ಪ್ರಕಾಶ್, ಕನ್ನಡದ ಜತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ. ಕಾಸರಗೋಡು ಅವರ ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಅವರ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.