Site icon Vistara News

Kannada New Movie | ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಹೊತ್ತು ತರಲಿದೆ ʻಬಯಲು ಸೀಮೆʼ!

Kannada New Movie

ಬೆಂಗಳೂರು: ಭಾಷೆಯ ಗಡಿ ಎಲ್ಲೆಯನ್ನು ಮೀರಿದ್ದು ಸಿನಿಮಾ. ಅದರ ಉದ್ದೇಶ ಒಂದೇ ಮನರಂಜನೆ. ಇದೀಗ ಅದೇ ಮನರಂಜನೆ ಉದ್ದೇಶ ಇಟ್ಟುಕೊಂಡು ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಹೊತ್ತು ‘ಬಯಲು ಸೀಮೆ’ (Kannada New Movie ) ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ.

ವರುಣ್ ಕಟ್ಟೀಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಬಯಲುಸೀಮೆ’ ಸಿನಿಮಾ, ಹೆಸರೇ ಸೂಚಿಸುವಂತೆ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ.. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟವನ್ನಿಟ್ಟುಕೊಂಡು ಕಥೆ ಹೆಣೆದು ನಿರ್ದೇಶನ ಮಾಡಿದ್ದಾರೆ ವರುಣ್ ಕಟ್ಟೀಮನಿ. ಈಗಾಗಲೇ ಸಿನಿಮಾದ ಹಾಡುಗಳು ಬಿಡುಗಡೆಯಾಗಿವೆ. ಸೆನ್ಸಾರ್‌ನಲ್ಲಿ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿರುವ ಈ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ.

ಇದನ್ನೂ ಓದಿ | Kannada New Movie | 25ನೇ ದಿನದತ್ತ ʻಧರಣಿ ಮಂಡಲ ಮಧ್ಯದೊಳಗೆʼ ಸಿನಿಮಾ: ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ

ವರುಣ್ ಕಟ್ಟೀಮನಿ ನಿರ್ದೇಶನದ ಜತೆಗೆ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದ್ದಾರೆ. ಆರ್ಮುಗಂ ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ನವರ್, ಪ್ರದೀಪ್ ರಾಜ್ ತಾರಾಗಣ ಚಿತ್ರದಲ್ಲಿದೆ.

ಕಲಾವಿದರು ಉತ್ತರಕರ್ನಾಟಕ ಭಾಷೆಯಲ್ಲಿಯೇ ಡಬ್ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ ಪೊಲಿಟಿಕಲ್, ಕ್ರೈಂ, ಅಲ್ಲಿನ ಸಂಸ್ಕೃತಿ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಗಾಯತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿ ಆರ್ ಎಸ್ ಕ್ರಿಯೇಷನ್ಸ್ ಬ್ಯಾನರ್‌ನಡಿ ಲಕ್ಷ್ಮಣ್ ಸಾ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮೀ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಸುಜಯ್ ಕುಮಾರ್ ಬಾವಿಕಟ್ಟಿ ಕ್ಯಾಮೆರಾವರ್ಕ್, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movie | ಸೈನ್ಸ್ ಫಿಕ್ಷನ್ ಸಿನಿಮಾದಲ್ಲಿ ಮಿಂಚಲಿದ್ದಾರೆ ʻವಿಕ್ರಾಂತ್‌ ರೋಣʼ ಪಿಟಿ ಮೇಷ್ಟ್ರು ವಜ್ರಧೀರ್ ಜೈನ್

Exit mobile version