Site icon Vistara News

Kannada New Movie: ಬರುತ್ತಿದ್ದಾನೆ ಹೊಸ ‘ಹುಲಿಯಾ’; ಟೈಟಲ್, ಫಸ್ಟ್‌ಲುಕ್‌ ಅದ್ಧೂರಿ ಬಿಡುಗಡೆ

Kannada New Movie chandrakeerthi Huliya Film Title

ಬೆಂಗಳೂರು: ಚಂದನವನದಲ್ಲಿ ಸೂಪರ್ ಹಿಟ್ ಸಿನಿಮಾಗಳ (Kannada New Movie) ಟೈಟಲ್ ಮರುಬಳಕೆ ಆಗುವುದು ಹೊಸತೇನಲ್ಲ. ಈಗ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆಯ ‘ಹುಲಿಯಾ’ ಶೀರ್ಷಿಕೆಯಡಿ ಇನ್ನೊಂದು ಸಿನಿಮಾ ಹೊರಬರುತ್ತಿದೆ. ತೂತುಮಡಿಕೆ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಯುವ ನಿರ್ದೇಶಕ ಹಾಗೂ ನಟ ಚಂದ್ರಕೀರ್ತಿಯ ಈ ಹೊಸ ಸಿನಿಮಾಕ್ಕೆ ಈಗ ‘ಹುಲಿಯಾ’ ಎಂಬ ಟೈಟಲ್ ಇಡಲಾಗಿದೆ.

ದೇವರಾಜ್ ಅವರ ಆಶೀರ್ವಾದೊಂದಿಗೆ ಶುರುವಾಗುತ್ತಿರುವ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಗಿದೆ.

ಸಿಲಿಕಾನ್ ಸಿಟಿ, ಕಿಸ್, ಮೂಕವಿಸ್ಮಿತ, ಬೆಂಕಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಚಂದ್ರಕೀರ್ತಿ ತೂತುಮಡಿಕೆ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಮೊದಲ ಚಿತ್ರದಲ್ಲಿಯೇ ಗಮನ ಸೆಳೆದಿದ್ದ ಅವರಿಗೆ ಹುಲಿಯಾ ಮೂಲಕ ಲವ್ ಹಾಗೂ ಆ್ಯಕ್ಷನ್ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರನ್ನು ರಂಜಿಸಲು ಅಣಿಯಾಗುತ್ತಿದ್ದಾರೆ. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವುದರ ಜತೆಗೆ ಚಂದ್ರಕೀರ್ತಿ ನಾಯಕನಾಗಿಯೂ ನಟಿಸುತ್ತಿದ್ದಾರೆ.

ಇದನ್ನೂ ಓದಿ: Tootu Madike | ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ‘ತೂತು ಮಡಿಕೆ’ ಅನಾವರಣಕ್ಕೆ ಕ್ಷಣಗಣನೆ!

ಹುಲಿಯಾ ಪೋಸ್ಟರ್‌ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ತೂತುಮಡಿಕೆ ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್, ಮಧು ರಾವ್ ಹಾಗೂ ವಸಂತ್ ವಲ್ಲಭ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಸಂಗೀತ ನಿರ್ದೇಶನವಿದ್ದರೆ, ಭಜರಂಗಿ, ವೇದ ಹಾಗೂ ಬೆಲ್ ಬಾಟಂ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ರಘು ನಿಡುವಳ್ಳಿ ಮಾತು ಚಿತ್ರಕ್ಕಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿರುವ ಹುಲಿಯಾ ಚಿತ್ರತಂಡವು ಶೀಘ್ರದಲ್ಲಿ ಉಳಿದ ತಾಂತ್ರಿಕ ಹಾಗೂ ತಾರಾಬಳಗದ ಬಗ್ಗೆ ಮಾಹಿತಿ ನೀಡಲಿರುವುದಾಗಿ ಹೇಳಿಕೊಂಡಿದೆ.

Exit mobile version