Site icon Vistara News

Kannada New Movie: ಪ್ರೇಮ್-ಮಾನ್ವಿತಾ ಜೋಡಿಯ ಹೊಸ ಸಿನಿಮಾದ ಅಪ್‌ಡೇಟ್‌ ಇಲ್ಲಿದೆ

Here is the update of Prem-Manvita Jodi's new movie

ಬೆಂಗಳೂರು: ಜೂಟಾಟ, ಗುಬ್ಬಚ್ಚಿ ಸಿನಿಮಾಗಳ ಸಾರಥಿ ಅಥರ್ವ್ ಆರ್ಯ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣ (Kannada New Movie) ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

K.R.S ಪ್ರೊಡಕ್ಷನ್ಸ್ ನಡಿ ತಬಲಾನಾಣಿ ಹಾಗೂ ಸ್ನೇಹಿತರ ಜೊತೆಗೂಡಿ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ. ತಂದೆಯ ಮಹತ್ವ ಸಾರುವ, ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ಆತ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದು ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

ಇದನ್ನೂ ಓದಿ: Manvita Kamath: ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ ತಾಯಿ ನಿಧನ

ಪ್ರೊಡಕ್ಷನ್ ನಂಬರ್-1 ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, k. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ.

Exit mobile version