Site icon Vistara News

Kannada New Movie | ಡಿಸೆಂಬರ್ 14ಕ್ಕೆ ಸೆಟ್ಟೇರಲಿದೆ `ಜಸ್ಟ್‌ ಪಾಸ್‌ʼ ಸಿನಿಮಾ: ನಾಯಕಿ ರಿವೀಲ್‌!

Kannada New Movie

ಬೆಂಗಳೂರು : ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ (Kannada New Movie) ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಕಥೆ ಹೇಳಲು ರೆಡಿಯಾಗಿದ್ದಾರೆ. ಈ ಚಿತ್ರ ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ʻಇರುವುದೆಲ್ಲವ ಬಿಟ್ಟುʼ, ʻಗಜಾನನ ಗ್ಯಾಂಗ್ʼ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್‌ಗೆ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ.

ಚಿತ್ರಕ್ಕೆ ಹೀರೋಯಿನ್ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಹೊಸ ಪ್ರತಿಭೆ ಪ್ರಣತಿ ನಾಯಕಿಯಾಗಿ ಸಿಕ್ಕಿದ್ದಾರೆ. ಡಾನ್ಸ್ ಕರ್ನಾಟಕ ಡಾನ್ಸ್, ಫ್ಯಾಮಿಲಿ ವಾರ್ ಸೀಸನ್ 2 ರನ್ನರ್ ಅಪ್ ಆಗಿರುವ ಪ್ರಣತಿ ಬ್ರಹ್ಮಗಂಟು ಸೀರಿಯಲ್‌ನಲ್ಲೂ ನಟಿಸಿದ್ದಾರೆ. ಈಗ ಜಸ್ಟ್ ಪಾಸ್ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಇದನ್ನೂ ಓದಿ | Kannada New Film | `ಜುಗಲ್ ಬಂದಿ’ ಸಿನಿಮಾ ಮೊದಲ ಹಾಡು ಬಿಡುಗಡೆ: ಕನ್ನಡಕ್ಕೆ ಬಂದ ತಮಿಳು ಗಾಯಕಿ!

ಕೆ.ಎಂ ರಘು. ನಿರ್ದೇಶನದ ದೊಡ್ಡಹಟ್ಟಿ ಬೋರೇಗೌಡ ಸಿನಿಮಾ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡು ಗಮನ ಸೆಳೆದಿತ್ತು.

ರಾಯ್ಸ್ ಎಂಟರ್ಟೈನ್ಮೆಂಟ್ ಬ್ಯಾನರ್‌ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ಜಸ್ಟ್ ಪಾಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಅರ್ಪಿತಾ, ಚಂದು ಶ್ರೀ, ಯಶಿಕಾ, ವಿಶ್ವಾಸ್, ನಿಖಿಲ್, ಗಗನ್, ಅಭಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movie 2022 | ನವೆಂಬರ್‌ ತಿಂಗಳಲ್ಲಿ ಬಿಡುಗಡೆಯಾದ ಕನ್ನಡ ಸಿನಿಮಾಗಳಿಗೆ ಪ್ರೇಕ್ಷಕರ ಬರ!

Exit mobile version