Site icon Vistara News

Kannada New Movie: ಕರಾವಳಿ ಭಾಗದ ಕಥೆ; ʻಕುದ್ರುʼ ಚಿತ್ರ ಅಕ್ಟೋಬರ್ 13 ರಂದು ತೆರೆಗೆ!

Kudru Movie Team

ಬೆಂಗಳೂರು: ಕರಾವಳಿಯಲ್ಲಿ ಕೋಮು ಗಲಭೆಯ ಸುದ್ದಿ ಹೊಸದೇನಲ್ಲ. ಅದರ ಎಳೆಯನ್ನು ಇಟ್ಟುಕೊಂಡು ‘ಕುದ್ರು’ ಸಿನಿಮಾ (Kudru Movie) ಮೂಡಿಬಂದಿದೆ. ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಇರುವ ಕಥೆಯನ್ನು ಒಳಗೊಂಡಿದೆ ಈ ಸಿನಿಮಾ. ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

“ಕುದ್ರು” ಎಂದರೆ ಏನು?

ನೀರಿನಿಂದ ಸುತ್ತುವರೆದ ದ್ವೀಪ. ಈ ಬಗ್ಗೆ ನಿರ್ಮಾಪಕ ಹಾಗೂ ನಿರ್ದೇಶಕ ಭಾಸ್ಕರ್ ನಾಯ್ಕ್ ಮಾತನಾಡಿʻʻಈ ದ್ವೀಪದಲ್ಲಿ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸ್ ಆ್ಯಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಉಡುಪಿ, ಮಲೆನಾಡು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ(ರಿಗ್) ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಜನಪ್ರಿಯವಾಗಿದೆʼʼ ಎಂದರು.

ಇದನ್ನೂ ಓದಿ: Kannada New Movie: ನಟನೆಗೂ ಸೈ ಎಂದ ರಾಮಾ ರಾಮಾ ರೇ ನಿರ್ದೇಶಕ ಡಿ ಸತ್ಯಪ್ರಕಾಶ್‌

Kannada New Movie

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ನಟಿ ಡೈನ ಡಿಸೋಜ ಕಾಣಿಸಿಕೊಂಡಿಕೊಂಡಿದ್ದಾರೆ. ಮುಸ್ಲಿಂ ಹುಡುಗನ ಪಾತ್ರಕ್ಕೆ ಫರ್ಹಾನ್ ಬಣ್ಣ ಹಚ್ಚಿದ್ದಾರೆ. ಹಿಂದು ಹುಡುಗನಾಗಿ ಹರ್ಷಿತ್ ಶೆಟ್ಟಿ, ಕ್ರಿಶ್ಚಿಯನ್ ಹುಡುಗನ ಪಾತ್ರದಲ್ಲಿ ಗಾಡ್ವಿನ್, ಹಿಂದೂ ಹುಡುಗಿಯಾಗಿ ಪ್ರಿಯಾ ಹೆಗ್ಡೆ ಅಭಿನಯಿಸಿದ್ದಾರೆ.ಶ್ರೀಪುರಾಣಿಕ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಪ್ರತೀಕ್ ಕುಂದು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಶ್ರೀನಿವಾಸ್ ಕಲಾಲ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

Exit mobile version