Site icon Vistara News

Kannada New Movie: ‘ಏನೇ ಮಳ್ಳಿ ಸಿಕ್ತೂ ನಿಂಗೆ’ ಹಾಡು ಔಟ್‌; ರಿಲೀಸ್‌ಗೆ ಸಜ್ಜಾಯ್ತು ʻಹೆಜ್ಜಾರುʼ!

Hejjaru song Out

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ʻಜೊತೆಜೊತೆಯಲಿʼ ಧಾರಾವಾಹಿ (Kannada New Movie) ಟೈಟಲ್‌ ಟ್ರ್ಯಾಕ್‌ ನೋಡುಗರ ಮನ ಗೆದ್ದಿತ್ತು. ಮಿಲಿಯನ್‌ ವೀಕ್ಷಣೆ ಕಂಡ ಈ ಹಾಡಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಹಾಡನ್ನು ಬರೆದ ಹರ್ಷಪ್ರಿಯ ಸಿನಿಮಾವೇ ʻಹೆಜ್ಜಾರುʼ. ಕನ್ನಡದ ಮೊಟ್ಟ ಮೊದಲ ಪ್ಯಾರಲಲ್ ಸ್ಟೋರಿ ಮೂವಿ ಎಂಬ ಹೆಗ್ಗಳಿಕೆಯೊಂದಿಗೆ ತೆರೆಗೆ ಬರಲು ಸಿದ್ದವಾಗಿರುವ “ಹೆಜ್ಜಾರು” ಚಿತ್ರ ತಂಡ ಈಗ ತನ್ನ ಸಿನಿಮಾದ ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸಿದೆ. ಮೊದಲ ಹಂತವಾಗಿ ಚಿತ್ರದ ಮೊದಲನೇ ಹಾಡನ್ನು ಬಿಡುಗಡೆಗೊಳಿಸಿದ್ದು, ಬಿಡುಗಡೆಗೊಂಡ ಕಡಿಮೆ ಸಮಯದಲ್ಲೇ ಅದು ಹಿಟ್ ಲಿಸ್ಟ್ ಸೇರಿರುವ ಸಂಭ್ರಮದಲ್ಲಿ ಚಿತ್ರತಂಡ ಇದೆ.

ʻನೀನೇ ಸಾಕಿದಾ ಗಿಣಿʼ ಹಾಡಿನಿಂದ ʻಹಂಗೋ ಹಿಂಗೋ ಇದ್ದೇ ನಾನುʼ ಹಾಡಿನವರೆಗೂ ಹಿಟ್ ಆಗಿರುವ ಲೆಜೆಂಡರಿ ಬ್ರೇಕಪ್ ಹಾಡುಗಳ ಸಾಲಿಗೆ “ಏನೇ ಮಳ್ಳಿ ಸಿಕ್ತೂ ನಿಂಗೆ “ ಕೂಡ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ನಿರ್ದೇಶಕ ಹರ್ಷಪ್ರಿಯ ಅವರ ಅಭಿಪ್ರಾಯ.

ಹಿಟ್ ಹಾಡುಗಳ ಸರದಾರ ವಿಜಯ್ ಪ್ರಕಾಶ್‌ ಅವರ ಧ್ವನಿ ಈ ಹಾಡಿಗಿದೆ. ಇನ್ನು ಕಿರುತೆರೆಯ ಪುಟ್ಟಗೌರಿ ಮದುವೆ, ಅಕ್ಕ, ಗೀತಾ, ನಾಗಿಣಿ 2, ರಾಣಿ, ರಾಮಾಚಾರಿ ಮೊದಲಾದ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿ ನಿರ್ದೇಶಿಸಿರುವ ಕೆ ಎಸ್ ರಾಮ್ ಜೀ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಭಜರಂಗಿ ಮೋಹನ್ ಕೊರಿಯಾಗ್ರಫಿಯಲ್ಲಿ ಮೂಡಿ ಬಂದಿರುವ ಹುಕ್ ಸ್ಟೆಪ್‌ಗಳು ಈಗಿನ್ ರೀಲ್ಸ್ ಪ್ರಿಯರಿಗೆ ಹಬ್ಬವಾಗಿರಿಲಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಮೊದಲ ಬಾರಿ ಹಿರಿತೆರೆಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಭಗತ್ ಆಳ್ವಾ ತಮ್ಮ ಮೊದಲ ಚಿತ್ರದಲ್ಲೇ ಇಂತಹದ್ದೊಂದು ಮಾಸ್ ಸಾಂಗಿಗೆ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದ ಖುಶಿಯಲ್ಲಿದ್ದು ಜನರ ಪ್ರತಿಕ್ರಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಖಾಸಗಿ ಪುಟಗಳು ಚಿತ್ರದಿಂದ ಪರಿಚಿತರಾಗಿರುವ ಲಿಯೋನಿಲ್ಲ ಶ್ವೇತಾ ಡಿಸೋಜಾ ಹೆಜ್ಜಾರು ಚಿತ್ರದ ನಾಯಕ ನಟಿಯಾಗಿದ್ದು , ವಿಶಿಷ್ಟ ಪಾತ್ರಕ್ಕೆ ಜೀವತುಂಬಿದ್ದಾರೆ.

ಇದನ್ನೂ ಓದಿ: Kannada New Film | ಜೊತೆ ಜೊತೆಯಲಿ ಧಾರಾವಾಹಿ ಟೈಟಲ್‌ ಟ್ರ್ಯಾಕ್‌ ರೈಟರ್‌ ಇದೀಗ ಡೈರೆಕ್ಟರ್‌: ಸಿನಿಮಾ ಯಾವುದು?

ಹತ್ತಾರು ಹಿಟ್ ಧಾರಾವಾಹಿಗಳು ಮತ್ತು ಸಿನೆಮಾಗಳ ಗೀತರಚನಕಾರರಾಗಿ ಜನಪ್ರಿಯರಾಗಿದ್ದ ಹರ್ಷಪ್ರಿಯ ಅವರು ಹೆಜ್ಜಾರು ಚಿತ್ರದ ಮೂಲಕ ನಿರ್ದೇಶಕರಾಗಿದ್ದು, ಸಿನೆಮಾದ ಎಲ್ಲ ಹಾಡುಗಳನ್ನೂ ಅವರೇ ಬರೆದಿದ್ದಾರೆ.
ತಮ್ಮ ಗರಡಿಯಲ್ಲಿ ಪಳಗಿದ ಹರ್ಷಪ್ರಿಯ ಅವರ ಈ ಗೀತೆಯನ್ನು ಮೆಚ್ಚಿರುವ ಪ್ರೇಮಕವಿ ಕಲ್ಯಾಣ್ ತಮ್ಮ ಶಿಶ್ಯನ ಮೊದಲ ಚಿತ್ರಕ್ಕೆ ಶುಭಕೋರಿದ್ದಾರೆ. ಜತೆಗೆ ಕನ್ನಡದ ಹಿರಿಯ ನಿರ್ದೇಶಕರುಗಳಾದ ಪ್ರೇಮ್ ಮತ್ತು ಶಶಾಂಕ್ ರವರು ಹಾಡಿನ ಬಗ್ಗೆ ಮೆಚ್ಚುಗೆಯ ಮಾತಾಡಿದ್ದು, ಸಿನೆಮಾ ಬಗ್ಗೆ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ಪೋಷಕ ನಟ ಗೋಪಾಲ್ ದೇಶಪಾಂಡೆ ಪ್ರಮುಖ ಪಾತ್ರದಲ್ಲಿದ್ದಾರೆ. ಮತ್ತು ನಾಯಕ, ನಿರ್ದೇಶಕ ನವೀನ್ ಕೃಷ್ಣ ಮೊದಲ ಬಾರಿಗೆ ನೆಗಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅರುಣಾ ಬಾಲರಾಜ್ ಕೂಡ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿನೋದ್ ಭಾರತಿ ಸೇರಿದಂತೆ ಬಹಳಷ್ಟು ರಂಗಭೂಮಿಯ ಹೊಸ ಕಲಾವಿದರನ್ನು ಈ ಚಿತ್ರದಲ್ಲಿ ಕಾಣಬಹುದಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Kannada New Movie: ‘ಲವ್ ರೆಡ್ಡಿ’ ಸಿನಿಮಾಗೆ ಸಾಥ್ ಕೊಟ್ಟ ಪ್ರದೀಪ್ ಈಶ್ವರ್!

ಚಿತ್ರಕ್ಕೆ ಕಾರ್ತಿಕ್ ಭಟ್ ಸಂಭಾಷಣೆ ಬರೆದಿದ್ದು, ನರಸಿಂಹ ಸಾಹಸ ಸಂಯೋಜನೆ ಮಾಡಿದ್ದಾರೆ. ಗಿರೀಶ್ ಕನಕಪುರ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸ್ ಆಗುವುದರ ಜತೆಗೆ ಕಲಾ ವಿಭಾಗವನ್ನೂ ನಿಭಾಯಿಸಿದ್ದಾರೆ. ಅಜಿತ್ ಡ್ರಾಕುಲಾ ಸಂಕಲನ, ದಯಾನಂದ್ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

Exit mobile version