ಬೆಂಗಳೂರು: ನಟ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ (Kannada New Movie) ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ವನಿತಾ ಎಚ್.ಎನ್ ಅವರ ನಿರ್ಮಾಣ ಈ ಸಿನಿಮಾಕ್ಕಿದೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್, ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಷ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.
ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಜಹಾಂಗೀರ್, ಸುಮನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: Kannada New Movie: ‘ಕೆಂಡದ ಸೆರಗು’ ಸಿನಿಮಾದ ಡಬ್ಬಿಂಗ್ ಮುಗಿಸಿದ ಆ್ಯಕ್ಷನ್ ಕ್ವಿನ್ ಮಾಲಾಶ್ರೀ!
ಇದನ್ನೂ ಓದಿ: Kannada New Movie: ಸೆಟ್ಟೇರಿದ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’: ಡಾಲಿ ಧನಂಜಯ್ ಶುಭ ಹಾರೈಕೆ
ವನಿತಾ ಎಚ್.ಎನ್. ಹಾಗೂ ಹರೀಶ್ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಆದಷ್ಟು ಬೇಗ ಸೆಕೆಂಡ್ ಶೆಡ್ಯೂಲ್ ಶೂಟಿಂಗ್ ಆರಂಭಿಸಲಿದೆ.