ಬೆಂಗಳೂರು: `ಪೆಂಟಗನ್‘ ಸಿನಿಮಾ (Pentagon Movie) ಐದು ಕಥೆಗಳನ್ನು (Kannada New Movie) ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಚಿತ್ರವಾಗಿದ್ದು, ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಗೊಂಡಿದೆ. ಚಿತ್ರದ 5ನೇ ಟೀಸರ್ ಜನವರಿ 18 ರಂದು ಬಿಡುಗಡೆಯಾಗಿದ್ದು, ನೋಡುಗರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಸಿನಿಮಾ ಏಪ್ರಿಲ್ 7 ರಂದು ದೇಶಾದ್ಯಂತ ಬಿಡುಗಡೆ ಮಾಡುವುದಾಗಿ ನಿರ್ದೇಶಕ ಗುರು ದೇಶಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಗುರು ದೇಶಪಾಂಡೆ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಪೆಂಟಗನ್’ ಸಿನಿಮಾದ ಐದನೇ ಕಥೆಯ ಟೀಸರ್ ಕನ್ನಡಪರ ಹೋರಾಟಗಾರರ ಕಥೆಯನ್ನು ಇದು ಒಳಗೊಂಡಿದೆ ಎನ್ನಲಾಗುತ್ತಿದೆ. ಟೀಸರ್‌ನಲ್ಲಿ ಕನ್ನಡ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. `ಪೆಂಟಗನ್’ ಒಂದೊಂದು ಕಥೆಯನ್ನು ಒಬ್ಬೊಬ್ಬರು ನಿರ್ದೇಶನ ಮಾಡಿದ್ದಾರೆ. ಗುರು ದೇಶಪಾಂಡೆ ನಿರ್ದೇಶನ ಮಾಡಿರುವ ಕಥೆಯಲ್ಲಿ ಮುಖ್ಯಪಾತ್ರವನ್ನು ಕಿಶೋರ್ ಮಾಡಿದ್ದಾರೆ. ಜತೆಗೆ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಕೂಡ ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಇದನ್ನೂ ಓದಿ: Pentagon Movie | ಪೆಂಟಗನ್ ಟೀಸರ್ ವಿವಾದ, ಕನ್ನಡ ಹೋರಾಟಗಾರರಿಗೆ ಅವಮಾನ ಮಾಡಿದ್ರಾ ನಿರ್ದೇಶಕರು?
ಸಿನಿಮಾ ಟ್ರೈಲರ್ ಬಿಡುಗಡೆಯಾದ ದಿನದಿಂದ ನಿರೀಕ್ಷೆ ಮೂಡಿಸಿದೆ. ʻಪೆಂಟಗನ್’ ಸಿನಿಮಾದಲ್ಲಿ ‘ಶಿವಾಜಿ ಸುರತ್ಕಲ್’ ಖ್ಯಾತಿಯ ಆಕಾಶ್ ಶ್ರೀವತ್ಸ, ‘ಬ್ರಹ್ಮಚಾರಿ’ ಖ್ಯಾತಿಯ ಚಂದ್ರ ಮೋಹನ್, ‘ಚೂರಿಕಟ್ಟೆ’ ಖ್ಯಾತಿಯ ರಾಘು ಶಿವಮೊಗ್ಗ, ಹೊಸ ಪ್ರತಿಭೆ ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜೀ ಸಿನಿಮಾಸ್ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣ ಇದೆ.
ಗುರು ದೇಶಪಾಂಡೆ ಟ್ವೀಟ್
ಪ್ರಕಾಶ್ ಬೆಳವಾಡಿ, ಕಿಶೋರ್, ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ. ಜೀ ಸಿನಿಮಾಸ್ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ.