Site icon Vistara News

Kannada New Movie: ’ಶಾಖಾಹಾರಿ’ ಸಿನಿಮಾದ ರಂಗಾಯಣ ರಘು ಫಸ್ಟ್ ಲುಕ್ ರಿಲೀಸ್!

Kannada New Movie Rangayana Raghu Shakhahari

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ (Kannada New Movie) ತಮ್ಮದೇ ಛಾಪು ಮೂಡಿಸಿರುವ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸಿರುತ್ತಿರುವ ‘ಶಾಖಾಹಾರಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಹಿಂದೆ ಯೋಗರಾಜ್ ಭಟ್ ಟೈಟಲ್ ಪೋಸ್ಟರ್ ಅನಾವರಣ ಮಾಡಿದ್ದರು. ಇದೀಗ ಶಾಖಾಹಾರಿ ಸಿನಿಮಾದ ರಂಗಾಯಣ ರಘು ಅವರ ಲುಕ್ ಬಿಡುಗಡೆ ಮಾಡಲಾಗಿದ್ದು, ಸಿನಿರಸಿಕರಲ್ಲಿ ಕೌತುಕ ಮೂಡಿಸಿದೆ.

ಸಂದೀಪ್ ಸುಂಕದ್ ಶಾಖಾಹಾರಿ ಸಿನಿಮಾದ ಸೂತ್ರಧಾರ. ಈಗಾಗಲೇ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಅವರಿಗೆ ಇದು ಚೊಚ್ಚಲ ಸಿನಿಮಾ. ಸಹ-ನಿರ್ದೇಶಕನಾಗಿ, ಬರಹಗಾರರಾಗಿ ಅನುಭವ ಪಡೆದಿರುವ ಸಂದೀಪ್, ‘ಶಾಖಾಹಾರಿ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಮಲೆನಾಡಿನ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಒಂದಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಹೋಟೆಲ್‌ನಲ್ಲಿ ಅಡುಗೆ ಮಾಡುವ ಭಟ್ಟನಾಗಿ ರಂಗಾಯಣ ರಘು ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ ಕೂಡ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: Kannada New Movie: ರಂಗಾಯಣ ರಘು ‘ಶಾಖಾಹಾರಿ’ ಸಿನಿಮಾಗೆ ಯೋಗರಾಜ್ ಭಟ್ ಸಾಥ್‌!

ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಅವರು ಜೊತೆಗೂಡಿ ‘ಕೀಳಂಬಿ ಮೀಡಿಯಾ ಲ್ಯಾಬ್’ ಸಂಸ್ಥೆಯ ಮೂಲಕ ‘ಶಾಖಾಹಾರಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ ಚಿತ್ರಕ್ಕಿದೆ. ಆಶಿಕ್ ಕುಸುಗೊಳ್ಳಿ ಅವರು ಗ್ರೇಡಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಪೂರ್ತಿ ಮಲೆನಾಡಿನಲ್ಲೇ ಚಿತ್ರೀಕರಣ ಆಗಿರುವ ‘ಶಾಖಾಹಾರಿ’ ಸಿನಿಮಾದಲ್ಲಿ ಮಲೆನಾಡಿನ ಅನೇಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ.

Exit mobile version