Site icon Vistara News

Kannada New Movie | ʻಸದ್ದು ವಿಚಾರಣೆ ನಡೆಯುತ್ತಿದೆʼ ಚಿತ್ರ ನವೆಂಬರ್‌ 25ರಂದು ತೆರೆಗೆ

Kannada New Movie (saddu vicharane nadeyuttide)

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹೊಸ ಸಿನಿಮಾ ‘ಸದ್ದು ವಿಚಾರಣೆ ನಡೆಯುತ್ತಿದೆ’ (Kannada New Movie) ಇದೇ ನವೆಂಬರ್‌ 25ಕ್ಕೆ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದೆ. ಎಂ. ಎಂ. ಸಿನಿಮಾಸ್ ಬ್ಯಾನರ್‌ನಡಿ ಭಾಸ್ಕರ್ ಆರ್ ನೀನಾಸಂ ಇದನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಈ ಚಿತ್ರ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳಿಂದ ಸಾಕಷ್ಟು ಹೆಸರನ್ನು ಪಡೆದಿದೆ.

ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಹೆಣೆದ ಈ ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಒಳಗೊಂಡಿದೆ. ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಹಾಂಗೀರ್, ರೋಹಿಣಿ ರಘುನಂನಂದನ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

ಇದನ್ನೂ ಓದಿ | Kannada New Movie | ಸುನಾಮಿ ಕಿಟ್ಟಿ ಅಭಿನಯದ ‘ಕೋರ’ ಸಿನಿಮಾ ಟೀಸರ್‌ ಔಟ್‌ : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಹೇಳಿದ್ದೇನು?

ಬೆಂಗಳೂರು, ಸಕಲೇಶಪುರ, ಮಂಗಳೂರು, ಮೈಸೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರಾಜ್ ಕಾಂತ ಅವರ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ, ಗಂಗಮ್ ರಾಜ್ ನೃತ್ಯ ನಿರ್ದೇಶನ, ದಕ್ಷಿಣ ಮೂರ್ತಿ ಸಂಭಾಷಣೆ ಚಿತ್ರಕ್ಕಿದೆ. ಪ್ರಮೋದ್‌ ಮರವಂತೆ, ಕಿನ್ನಾಳ್‌ ರಾಜ್‌ ಅವರ ಹಾಡುಗಳು ಚಿತ್ರಕ್ಕಿದೆ. ರಘು ದೀಕ್ಷಿತ್, ರವಿ ಬಸ್ರೂರು, ಪಂಚಮ್ ಜೀವ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ.

ಇದನ್ನೂ ಓದಿ | Kannada New Movie | ʻಸದ್ದು ವಿಚಾರಣೆ ನಡೆಯುತ್ತಿದೆʼ ಟ್ರೈಲರ್‌ ರಿಲೀಸ್‌: ನವೆಂಬರ್‌ 25ಕ್ಕೆ ತೆರೆಗೆ!

Exit mobile version