Kannada New Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ನ.15ಕ್ಕೆ ರಿಲೀಸ್‌ - Vistara News

ಸಿನಿಮಾ

Kannada New Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ನ.15ಕ್ಕೆ ರಿಲೀಸ್‌

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ʼಭೈರತಿ ರಣಗಲ್‍ʼ ಬಹು ನಿರೀಕ್ಷಿತ ಚಿತ್ರ (Kannada New Movie) ನವೆಂಬರ್ 15 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ graffiti art ಅನ್ನು ಅನಾವರಣಗೊಳಿಸುವ ಮೂಲಕ “ಭೈರತಿ ರಣಗಲ್” ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ‘ಭೈರತಿ ರಣಗಲ್‍ʼ ಚಿತ್ರ (Kannada New Movie) ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ ಮುಂದೆ ಹೋಗಿತ್ತು. ಆನಂತರ ಅಭಿಮಾನಿಗಳು ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದರು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಬೆಂಗಳೂರಿನ ಯಲಹಂಕದಲ್ಲಿರುವ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ graffiti art ಅನ್ನು ಅನಾವರಣಗೊಳಿಸುವ ಮೂಲಕ “ಭೈರತಿ ರಣಗಲ್” ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು. ನಿರ್ಮಾಪಕಿ ಗೀತಾ ಶಿವರಾಜಕುಮಾರ್, ನಿರ್ದೇಶಕ ನರ್ತನ್ ಹಾಗೂ ನಿವೇದಿತಾ ಶಿವರಾಜಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. graffiti art ನಲ್ಲಿ ಮೂಡಿಬಂದ ಶಿವರಾಜಕುಮಾರ್ ಅವರ‌ ಲುಕ್‌ಗೆ ಅಭಿಮಾನಿಗಳು ಫಿದಾ ಆದರು.

ಇದನ್ನೂ ಓದಿ: Bengaluru Power Cut: ಆ.28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬಿಡುಗಡೆ ದಿನಾಂಕ ಘೋಷಣೆಯಾದ ನಂತರ ಮಾತನಾಡಿದ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಅವರು, “ಭೈರತಿ ರಣಗಲ್” ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರ. ನಮ್ಮ ಸಂಸ್ಥೆಯ ಮೊದಲ ಚಿತ್ರ “ವೇದ” ಗೆ ನೀವೆಲ್ಲಾ ನೀಡಿದ ಪ್ರೋತ್ಸಾಹಕ್ಕೆ ಧನ್ಯವಾದ. ಈ ಚಿತ್ರಕ್ಕೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಇಂದು ನಿಮ್ಮೆಲ್ಲರ ಸಮ್ಮುಖದಲ್ಲಿ ವಿನೂತನ ರೀತಿಯಲ್ಲಿ ಬಿಡುಗಡೆಯ ದಿನಾಂಕ ಅನೌನ್ಸ್ ಆಗಿದೆ. ಮುಂದೆ ಬೆಳಗಾವಿಯಲ್ಲೂ ಈ ಚಿತ್ರದ ಕುರಿತಾದ ಕಾರ್ಯಕ್ರಮ ನಡೆಯಲಿದೆ ಎಂದರು.

ಚಿತ್ರದ ಬಿಡುಗಡೆ ದಿನಾಂಕವನ್ನು ವಿಭಿನ್ನವಾಗಿ ಅನೌನ್ಸ್ ಮಾಡಲು ನಿರ್ಧರಿಸಲಾಗಿತ್ತು. ಇದೇ ಮೊದಲ ಬಾರಿಗೆ 4800 ವಿಸ್ತೀರ್ಣದ ಬೃಹತ್ graffiti art ಅನಾವರಣ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆಯಾಗಿದೆ‌. ಸಹಸ್ರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದೀರಿ. ನಿಮಗೆಲ್ಲಾ ಅನಂತ ಧನ್ಯವಾದ. ನವೆಂಬರ್ 15 ರಂದು ಚಿತ್ರ ಬಿಡುಗಡೆಯಾಗಲಿದೆ‌. ನಮ್ಮ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನರ್ತನ್.

ಇದನ್ನೂ ಓದಿ: Uttarkashi Tour: ಪ್ರವಾಸ ಪ್ರಿಯರಿಗೆ ಸ್ವರ್ಗ ಉತ್ತರಕಾಶಿಗೆ ಹೋಗಲು ಉತ್ತಮ ಸಮಯ ಯಾವುದು?

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್‍ʼ ಚಿತ್ರವನ್ನು ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದಾರೆ. ನರ್ತನ್‍ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್‍, ರಾಹುಲ್ ಬೋಸ್‍, ಅವಿನಾಶ್, ದೇವರಾಜ್‍, ಮಧು ಗುರುಸ್ವಾಮಿ, ಛಾಯಾ ಸಿಂಗ್‍, ಬಾಬು ಹಿರಣ್ಣಯ್ಯ ಮುಂತಾದವರಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ರಿಷಭ್ ಶೆಟ್ಟಿ ನಿರ್ಮಾಣದ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ” ಈ ವಾರ ತೆರೆಗೆ

ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ. ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (Kannada New Movie) ಈ ವಾರ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ. ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (Kannada New Movie) ಈ ವಾರ ಬಿಡುಗಡೆಯಾಗುತ್ತಿದೆ.

ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೇ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್ ಮಂಚಾಲೆ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ. ಹಿರಿಯ ನಟ ಸುಂದರರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ.

ಇದನ್ನೂ ಓದಿ: Bengaluru Power Cut: ಆ.29 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಎಸ್. ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್ ಗ್ಯಾಂಗ್ ಬಂಧನ ಅವಧಿ ಸೆಪ್ಟೆಂಬರ್ 9 ರವರೆಗೆ ವಿಸ್ತರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ (Actor Darshan) ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಬುಧವಾರ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ನ್ಯಾಯಾಧೀಶರು ಆದೇಶ ನೀಡಿದರು.

VISTARANEWS.COM


on

By

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Chitradurga Renukaswamy murder case) ಸಂಬಂಧಿಸಿ ಸೆಪ್ಟೆಂಬರ್ 9 ರವರೆಗೆ ನಟ ದರ್ಶನ್ (Actor Darshan) ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ (Judicial custody) ಅವಧಿ ವಿಸ್ತರಣೆ ಮಾಡಿ 24 ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಬುಧವಾರ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಜೈಲು ಅಧಿಕಾರಿಗಳು ಹಾಜರು ಪಡಿಸಿದರು.

ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ರೇಣುಕಾಸ್ವಾಮಿ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದರು.

ಪವಿತ್ರ ಗೌಡ, ದರ್ಶನ್, ಪುಟ್ಟಸ್ವಾಮಿ ಅಲಿಯಾಸ್ ಪವನ್, ನಂದಿಶ್ ,ರಾಘವೇಂದ್ರ, ಲಕ್ಷ್ಮಣ, ದೀಪಕ್, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಹೆಸರು ಕರೆದು ಹಾಜರಾತಿ ತೆಗೆದುಕೊಂಡ ನ್ಯಾಯಾಧೀಶರು ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ರಿಮ್ಯಾಂಡ್ ಅರ್ಜಿ ಸಲ್ಲಿಕೆ

ತಂದೆಗೆ ಕ್ಯಾನ್ಸರ್ ಇದೆ. ನನ್ನನ್ನು ಬೆಂಗಳೂರು ಜೈಲಿನಿಂದ ಶಿಪ್ಟ್ ಮಾಡಬೇಡಿ ಎಂದು ಪ್ರದೂಷ್ ಈ ಸಂದರ್ಭದಲ್ಲಿ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದಾರೆ. ಆರೋಪಿ ಕುಟುಂಬಸ್ಥರಿಗೆ ಭೇಟಿಗೆ ಅವಕಾಶ ನೀಡುತ್ತಿದ್ದೀರಾ ಎಂದು ಜೈಲು ಸಿಬ್ಬಂದಿಗೆ ಜಡ್ಜ್ ಪ್ರಶ್ನಿಸಿದ್ದಾರೆ.

ಹೊಸ ಎಫ್ ಐಆರ್ ಗಳ ಸಂಬಂಧ ತನಿಖೆ ಹಂತದಲ್ಲಿ ಇರುವುದರಿಂದ ಯಾರಿಗೂ ಅವಕಾಶ ಕೊಡುತ್ತಿಲ್ಲ ಎಂದು ಜೈಲಾಧಿಕಾರಿಗಳು ಈ ಸಂದರ್ಭದಲ್ಲಿ ನ್ಯಾಯಾಧೀಶರಿಗೆ ತಿಳಿಸಿದ್ದಾರೆ.

ದಯವಿಟ್ಟು ನನ್ನ ಶಿಫ್ಟ್ ಮಾಡಬೇಡಿ ಸ್ವಾಮಿ.. ಎಂದು ಪರಿಪರಿಯಾಗಿ ಪ್ರದೂಷ್ ಈ ಸಂದರ್ಭದಲ್ಲಿ ಬೇಡಿಕೊಂಡರು. ನಾಗರಾಜ್ ಮತ್ತು ಲಕ್ಷ್ಮಣ್ ಕೂಡ ನಮ್ಮನ್ನು ಶಿಫ್ಟ್ ಮಾಡಬೇಡಿ ಎಂದು ಮನವಿ ಮಾಡಿದರು.

ಆಗ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ ನ್ಯಾಯಾಧೀಶರು, ನಿಯಮಗಳು ಏನಿವೆಯೋ ಅದನ್ನು ಮಾಡಲಾಗುತ್ತದೆ ಎಂದು ಅವರಿಗೆ ಉತ್ತರಿಸಿದರು.

ಜೈಲು ಅಧಿಕಾರಿಗಳು ಅವರ ಪ್ರಕ್ರಿಯೆ ಅವರು ಮಾಡುತ್ತಾರೆ ಎಂದು ಹೇಳಿ ಆರೋಪಿಗಳ ಮನವಿಯನ್ನು ತಿರಸ್ಕರಿಸಿದರು.

ಪೊಲೀಸರ ಮನವಿ

ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಮುಂದುವರಿಕೆಗೆ ಮನವಿ ಮಾಡಿದ ಪೊಲೀಸರು ನ್ಯಾಯಾಲಯದ ಮುಂದೆ ಹತ್ತು ಅಂಶಗಳನ್ನು ಪ್ರಸ್ತಾವಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ಪಾತ್ರ ಎಲ್ಲ ರೀತಿಯಲ್ಲಿ‌ ಧೃಡವಾಗಿದೆ, ಕೇಸ್ ನಲ್ಲಿ ಇನ್ನೂ ಕೆಲ ಸಾಂದರ್ಭಿಕ ಸಾಕ್ಷಿಗಳ ಹೇಳಿಕೆ ಬಾಕಿ ಇದೆ, ಅಗತ್ಯವಿದ್ದರೆ 164 ಅಡಿ ಹೇಳಿಕೆ ದಾಖಲಿಸಬೇಕಿದೆ. ಸದ್ಯ ಆರೋಪಿಗಳಿಗೆ ಜಾಮೀನು ನೀಡಿದರೆ ಸಾಕ್ಷಿಗೆ ಬೆದರಿಕೆ ಸಾಧ್ಯತೆ, ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ, ಪ್ರಭಾವಿ ಆರೋಪಿ ಮೃತನ ಕುಟುಂಬಕ್ಕೆ ಬೆದರಿಕೆ, ಆಮಿಷ ಸಾಧ್ಯತೆ, ಎಫ್ ಎಸ್ ಎಲ್ ವರದಿಯಲ್ಲಿ ಆರೋಪಿಗಳ ಪಾತ್ರ ಸಾಬೀತು, ಟೆಕ್ನಿಕಲ್ ಎವಿಡೆನ್ಸ್ ಬಗ್ಗೆ ಕೆಲ ವರದಿ ಬಾಕಿ‌ ಇದೆ. ಇನ್ನೂ ಕೆಲವು ವಸ್ತುಗಳ ಎಫ್ ಎಸ್ ಎಲ್ ಗೆ ಕಳುಹಿಸಿ ವರದಿ ಪಡೆಯಬೇಕು, ಈ ವೇಳೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.

ಜೈಲು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ

ನಟ ದರ್ಶನ ಜೈಲಿನಲ್ಲಿ ಕಾಫಿ ಕುಡಿದ ಪೋಟೋ ವೈರಲ್ ವಿಷಯಕ್ಕೆ ಸಂಬಂಧಿಸಿ ದರ್ಶನ ಪರ ವಕೀಲ ಅನೀಲ್ ಬಾಬು ಪ್ರತಿಕ್ರಿಯಿಸಿದ್ದು, ಇದು ಜೈಲಿನಲ್ಲಿ ಇರುವ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಎಂದು ಹೇಳಿದ್ದಾರೆ.

ಪೋಟೋ ಹಾಗೂ ವಿಡಿಯೋ ಲೀಕ್ ಅಗಿರೋದಕ್ಕೆ ಜೈಲ್ ಅಧಿಕಾರಿಗಳೇ ನೇರ ಕಾರಣ. ಜೈಲಿನ ಸಿಬ್ಬಂದಿ ಎಲ್ಲಾ ರೀತಿಯ ಚೆಕ್ ಮಾಡಬೇಕು. ಯಾರೋ ಒಬ್ಬರು ವಿಡಿಯೋ ಕಾಲ್ ಮಾಡಿ ಹಾಯ್ ಅನ್ನು ಅಂತ ಹೇಳಿದರೆ ಅದಕ್ಕೆ ದರ್ಶನ ಹಾಯ್ ಅಂತ ಹೇಳಿದ್ದಾರೆ. ಇದು ದರ್ಶನ ತಪ್ಪಲ್ಲ. ಅವರಿಗೂ ತಿಳಿಯದೇ ಆಗಿರೋ ಘಟನೆ ಎಂದಿದ್ದಾರೆ.

ಇನ್ನೂ ಜೈಲಿನಲ್ಲಿ ಕುರ್ಚಿ, ಕಾಫಿ ಕಪ್ ಹೇಗೆ ಬಂತು ಅಂತ ಅಧಿಕಾರಿಗಳು ವಿಚಾರಣೆ ಮಾಡಬೇಕು. ಇದಕ್ಕೆ ದರ್ಶನ ಕಾರಣ ಅಂದ್ರೆ ತಪ್ಪು. ಇನ್ನೂ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತಿದ್ದಾರೆ ಇದು ಕೋರ್ಟ್ ಅದೇಶ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಅಧಿಕಾರಿಗಳ ತಪ್ಪಿಗೆ ಈ ರೀತಿಯ ಶಿಕ್ಷೆ ಅಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪೊಲೀಸ್ ತನಿಖೆ ಶುರು

ಇನ್ನೂ ಜೈಲಿನಲ್ಲಿ ರೌಡಿಗಳ ಜೊತೆ ಸ್ನೇಹ ಸಂಬಂಧ ಇದೆ ಅಂತಾರೆ. ಆದರೆ ದರ್ಶನ ಗೆ ಇವರು ಯಾರು ಮೊದಲಿನಿಂದ ಪರಿಚಯ ಇಲ್ಲ. ಜೈಲಿನಲ್ಲಿ ಪರಿಚಯ ಅಗಿದೆ ಅಷ್ಟೆ. ಚಾರ್ಜ್ ಶೀಟ್ ಸಲ್ಲಿಕೆ ಮಾಡ್ಲಿ. ವಾದ ಮಾಡಿ ದರ್ಶನ ನಿರಪರಾಧಿ ಅಂತ ಹೊರಗೆ ತರುತ್ತೇವೆ ಎಂದರು.

Continue Reading

ಪ್ರಮುಖ ಸುದ್ದಿ

Actor Darshan: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪೊಲೀಸ್ ತನಿಖೆ ಶುರು

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ (Actor Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಬುಧವಾರ ತನಿಖೆ ಆರಂಭಿಸಿದ್ದಾರೆ. ಮಂಗಳವಾರ ಪ್ರಾಥಮಿಕ ಹಂತದ ತನಿಖೆ ನಡೆಸಿ ದರ್ಶನ್ ಹೇಳಿಕೆ ದಾಖಲಿಸಲಾಗಿತ್ತು.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ (Parappa Agrahara) ನಟ ದರ್ಶನ್ ಗೆ (Actor Darshan) ರಾಜಾತಿಥ್ಯ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಬೇಗೂರು ಇನ್ಸಪೆಕ್ಟರ್ ಕೃಷ್ಣ ಕುಮಾರ್ (Begur Inspector Krishna Kumar) ಆಗಮಿಸಿದ್ದು, ಲಾನ್ ನಲ್ಲಿ ಕುಳಿತಿದ್ದ ವಿಚಾರಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮಂಗಳವಾರ ಪ್ರಾಥಮಿಕ ಹಂತದ ತನಿಖೆ ನಡೆಸಲಾಗಿತ್ತು.

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Chitradurga Renukaswamy murder case) ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವುದರಿಂದ ಬುಧವಾರ ಮಧ್ಯಾಹ್ನ ಬಳಿಕ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ದರ್ಶನ್ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಕ್ತಾಯವಾಗಲಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಬಳಿಕ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.

ಜೈಲು ಸಿಬ್ಬಂದಿ ಜೊತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜೊತೆ ದುಃಖ ವ್ಯಕ್ತಪಡಿಸಿದ್ದಾರೆ. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್ ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ರಾಜಾತಿಥ್ಯ ವಿಚಾರಣೆ

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ರಾಜಾತಿಥ್ಯ ವಿಚಾರಣೆ ಪ್ರಾರಂಬವಾಡಿದೆ. ವಿಡಿಯೋ ಕಾಲ್ ಬಗ್ಗೆಯೂ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಹುಳಿಮಾವು ಇನ್ಸ್ ಪೆಕ್ಟರ್ ಕುಮಾರಸ್ವಾಮಿ ವಿಚಾರಣೆ ನಡೆಸಿದ್ದು, ಈ ವೇಳೆ ಮೊಬೈಲ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ದರ್ಶನ್ ತಿಳಿಸಿದ್ದಾರೆ.

ನನ್ನ ಪಾಡಿಗೆ ನಾನು ನನ್ನ ಕೊಠಡಿಯಲ್ಲಿ ಕುಳಿತಿದ್ದೆ. ಏಕಾಏಕಿ ನನ್ನ ಕೊಠಡಿಗೆ ಒರ್ವ ವ್ಯಕ್ತಿ ಬರುತ್ತಾನೆ. ಬಾಸ್ ನಿಮ್ಮ ಅಭಿಮಾನಿ‌ ಬಾಸ್ ಪ್ಲೀಸ್ ಒಮ್ಮೆ ಮಾತಾಡಿ ಅಂದ್ರು. ಅಭಿಮಾನಿ ಅಲ್ವಾ ಅಂತ ನಾನು ಊಟ ಆಯ್ತಾ ಅಂದೆ. ಹೇಗಿದ್ದೀರಾ ಬಾಸ್ ಅಂದ ನಾನು ಆರಾಮಾಗಿ ಇದ್ದೀನಿ ಅಂದೆ. ಅದು ಬಿಟ್ಟರೇ ನನಗೂ ಆ ವಿಡಿಯೋ ಕಾಲ್ ಗೂ ಸಂಬಂಧ ಇಲ್ಲ. ಮೊಬೈಲ್ ತಗೊಂಡು ಬಂದ ವ್ಯಕ್ತಿ ರೌಡಿಶೀಟರ್ ಅನ್ನೋದು ನನಗೆ ಗೊತ್ತಿಲ್ಲ. ನಾನು ಜೈಲಿನಲ್ಲಿ ಯಾವುದೇ ಮೊಬೈಲ್ ಬಳಕೆ ಮಾಡ್ತಾ ಇಲ್ಲ. ಫೋನ್ ನಲ್ಲಿ ಮಾತನಾಡಿದ ವ್ಯಕ್ತಿಯೂ ಯಾರು ಅನ್ನೋದು ಗೊತ್ತಿಲ್ಲ. ಬಹುಶ ಯಾವ ದಿನ ಮಾತನಾಡಿದ್ದು ಅಂತ ಸರಿಯಾಗಿ ಗೊತ್ತಿಲ್ಲ. ಸುಮಾರು 10- 15 ದಿನಗಳ ಹಿಂದೆ ಇರಬಹುದು ಎಂದು ವಿಚಾರಣೆ ವೇಳೆ ದರ್ಶನ್ ತಿಳಿಸಿದ್ದಾರೆ.

ದರ್ಶನ್ ಹೇಳಿಕೆ ದಾಖಲಿಸಿರುವ ಇನ್ಸ್ ಪೆಕ್ಟರ್ ಬುಧವಾರ ಮತ್ತೆ ಪರಪ್ಪನ ಅಗ್ರಹಾರದಲ್ಲಿ ವಿಚಾರಣೆ ನಡೆಸಲಿದ್ದಾರೆ. ಅವಶ್ಯಕತೆ ಇದ್ದರೆ ತನಿಖೆ ಭಾಗವಾಗಿ ಮತ್ತೆ ಬುಧವಾರ ಕೂಡ ದರ್ಶನ್ ವಿಚಾರಣೆ ನಡೆಯಲಿದೆ.


ಸಿಗರೇಟ್ ಸೇದಿದ ಪ್ರಕರಣ

ಲಾನ್ ನಲ್ಲಿ ಸಿಗರೇಟ್ ಸೇದಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ ದರ್ಶನ್, ಹುಡುಗರು ಕ್ರಿಕೆಟ್ ಆಡುತ್ತಿದ್ದರು. ಅದನ್ನು ನಾನು ನಿತ್ಯ ನೋಡುತ್ತಿದ್ದೆ. ಅಂದು ಕೂಡ ನನ್ನ ಪಾಡಿಗೆ ಸಿಗರೇಟ್ ಸೇದುತ್ತಾ ಕ್ರಿಕೆಟ್ ಆಡೋದನ್ನು ನೋಡುತ್ತಿದ್ದೆ. ಈ ವೇಳೆ ನಾಗ ಮತ್ತೆ ಆತನ ಸ್ನೇಹಿತ ಬಂದ. ನಾನು ಸಿಗರೇಟ್ ಸೇದುತ್ತಾ ಅವರ ಬಳಿ ಬಂದು ಕುಳಿತಿದ್ದೇನೆ ಅಷ್ಟೆ. ಇದರ ಹಿಂದೆ ಯಾವ ಉದ್ದೇಶ ಕೂಡ ಇರಲಿಲ್ಲ. ಅವರ ಜೊತೆ ಮಾತುಕತೆ ಮಾಡುವ ಉದ್ದೇಶ ಕೂಡ ಇರಲಿಲ್ಲ ಎಂದು ಠಾಣಾಧಿಕಾರಿ ಮುಂದೆ ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್

ದರ್ಶನ್ ಗೆ ರಾಜಾಥಿತ್ಯ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ದರ್ಶನ್ ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದಂತೆ ಬುಧವಾರ ಮಧ್ಯಾಹ್ನದ ಅನಂತರ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ೩ ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರತರುವ ಸಾಧ್ಯತೆ ಇದ್ದು, ಈಗಾಗಲೆ ದರ್ಶನ್ ವಿರುದ್ದ ದಾಖಲಾಗಿರುವ ಎಫ್ಐಆರ್ ಗಳ ವಿಚಾರಣೆ ಮಂಗಳವಾರದಿಂದಲೇ ನಡೆಯುತ್ತಿದೆ. ಎರಡು ಎಫ್ ಐ ಆರ್ ನಲ್ಲಿ ದರ್ಶನ್ ಹೆಸರಿದ್ದು, ಸ್ಥಳ ಮಹಜರು ಹಾಗೂ ಆರೋಪಿಗಳ ಹೇಳಿಕೆಯನ್ನು ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಬದಲಾಗಲಿದೆ ದರ್ಶನ್ ಖೈದಿ ಸಂಖ್ಯೆ 6106

ಬಾರಿ ಟ್ರೆಂಡ್ ಆಗಿದ್ದ ನಟ ದರ್ಶನ್ ವಿಚಾರಣಾಧಿನ ಖೈದಿ ನಂಬರ್ ಮತ್ತೆ ಬದಲಾಗುವ ಸಾಧ್ಯತೆ ಇದೆ. 6106 ಖೈದಿ ನಂಬರ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗೆ ನೀಡಲಾಗಿತ್ತು. ಈಗ ಬಳ್ಳಾರಿಗೆ ಶಿಫ್ಟ್ ಆಗುತ್ತಿರುವುದರಿಂದ ನಟ ದರ್ಶನ್ ಖೈದಿ ನಂಬರ್ ಬದಲಾಗಲಿದೆ.

ನಟ ದರ್ಶನ್ ಅಭಿಮಾನಿಗಳು 6106 ನಂಬರ್ ಟ್ರೆಂಡ್ ಮಾಡಿಕೊಂಡಿದ್ದರು. ಕೆಲವು ಅಭಿಮಾನಿಗಳು ತಮ್ಮ ವಾಹನಗಳ ಮೇಲೆ ನಂಬರ್ ಹಾಕಿಸಿಕೊಂಡಿದ್ದರು. ಮಗುವಿನ ಪೋಟೋ ಶೂಟ್ ನಲ್ಲೂ ಕೈದಿ ನಂಬರ್ ಬಳಸಿದ್ದರು.
ಬಳ್ಳಾರಿ ಜೈಲಿಗೆ ಸೇರಿದ ಬಳಿಕ ನಟ ದರ್ಶನ್ ಗೆ ಹೊಸ ಖೈದಿ ನಂಬರ್ ಅನ್ನು ಬಳ್ಳಾರಿ ಜೈಲಿನ ಅಧಿಕಾರಿಗಳು ನೀಡಲಿದ್ದಾರೆ.

ಇದನ್ನೂ ಓದಿ: Actor Darshan: ಇನ್ಮುಂದೆ ಬಳ್ಳಾರಿ ಜೈಲಿನಲ್ಲಿ ಮುದ್ದೆ ಮುರಿಯುವ ನಟ ದರ್ಶನ್

ಬಳ್ಳಾರಿ ಖೈದಿಗಳಂತೆಯೇ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ( under crime prisoner) ನೀಡಲಾಗುತ್ತದೆ. ಹೀಗಾಗಿ ದರ್ಶನ್ ಖೈದಿ ನಂಬರ್ ಬದಲಾವಣೆ ಯಾಗುವುದು ಖಚಿತ. ಬಳ್ಳಾರಿ ಜೈಲಿನಲ್ಲಿ ಮೂರು ಸಂಖ್ಯೆಯ ಖೈದಿ ನಂಬರ್ ನೀಡಲು ಸಿದ್ದತೆ ನಡೆಸಲಾಗಿದೆ. ಜೈಲ್ ಗೆ ಸೇರಿದ ಬಳಿಕ ದರ್ಶನ್ ಗೆ ಹೊಸ ಖೈದಿ ಸಂಖ್ಯೆ ಸಿಗಲಿದೆ. ಖೈದಿ ಸಂಖ್ಯೆ ನೀಡಿದ ಬಳಿಕ ಜೈಲು ರೂಂ ನೀಡಲಾಗುತ್ತದೆ. ಸಮಾನ್ಯ ಖೈದಿಯಂತೆ ಇಲ್ಲಿ ದರ್ಶನ್ ನನ್ನು ನೋಡಿಕೊಳ್ಳಲಾಗುತ್ತದೆ.

Continue Reading

ಪ್ರಮುಖ ಸುದ್ದಿ

Actor Darshan: ಇನ್ಮುಂದೆ ಬಳ್ಳಾರಿ ಜೈಲಿನಲ್ಲಿ ಮುದ್ದೆ ಮುರಿಯುವ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ (Actor Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬಳಿಕ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ದರ್ಶನ್ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಕ್ತಾಯವಾಗಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರೆದುರು ಹಾಜರು ಪಡಿಸಿದ ಬಳಿಕ ಸ್ಥಳಾಂತರಿಸಲಾಗುವುದು ಎನ್ನಲಾಗಿದೆ.

VISTARANEWS.COM


on

By

Actor Darshan
Koo

ಬಳ್ಳಾರಿ: ನಟ ದರ್ಶನ್ (Actor Darshan) ಇನ್ನು ಮುಂದೆ ಬಳ್ಳಾರಿ ಜೈಲಿನಲ್ಲಿ (bellary jail) ಮುದ್ದೆ ಮುರಿಯಲಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Chitradurga Renukaswamy murder case) ಆರೋಪಿಯಾಗಿರುವ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬುಧವಾರ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಸ್ಥಳಾಂತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲು ಸುತ್ತಮುತ್ತ ಮತ್ತು ಜೈಲು ಸಂಪರ್ಕದ ರಸ್ತೆಗಳ ಬದಿ ಭಾರಿ ಭದ್ರತೆ ಕೈಗೊಳ್ಳಲಾಗುತ್ತಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಎ2 ಆರೋಪಿ ನಟ ದರ್ಶನಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪಿಗಳನ್ನು ರಾಜ್ಯದ ಬೇರೆಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಬುಧವಾರ ಮಧ್ಯಾಹ್ನ ಬಳಿಕ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.

ದರ್ಶನ್ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಕ್ತಾಯವಾಗಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ನ್ಯಾಯಾಧೀಶರೆದುರು ಹಾಜರು ಪಡಿಸಲಾಗುತ್ತದೆ. ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಪರಾಹ್ನ 3 ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರತರುವ ಸಾಧ್ಯತೆ ಇದೆ.

ಎರಡು ಎಫ್ ಐಆರ್ ನಲ್ಲಿ ದರ್ಶನ್ ಹೆಸರಿದ್ದು, ದರ್ಶನ್ ವಿರುದ್ದ ದಾಖಲಾಗಿರುವ ಎಫ್ಐಆರ್ ಗಳ ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.

Actor Darshan
Actor Darshan


ಬಳ್ಳಾರಿ ಸೆಂಟ್ರಲ್ ಜೈಲಿಗೆ ದರ್ಶನ್

ನಟ ದರ್ಶನ್ ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆತರುತ್ತಿರುವ ಹಿನ್ನೆಲೆಯಲ್ಲಿ ಜೈಲು ಸಂಪರ್ಕದ ರಸ್ತೆ‌ಗಳ ಬದಿ ಬ್ಯಾರಿಕೇಡ್ ಹಾಕಲಾಗುತ್ತಿದೆ. ಬುಧವಾರ ಬಳ್ಳಾರಿಗೆ ದರ್ಶನ್ ನನ್ನು ಕರೆ ತರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್ ಆಗಿದ್ದರೆ.


ದರ್ಶನ್ ನೋಡಲು ಜನ ಸೇರುವ ಸೂಚನೆ ಸಿಕ್ಕಿದ್ದರಿಂದ ಜನರ ನಿಯಂತ್ರಣಕ್ಕೆ ಎರಡು ರಸ್ತೆಗಳ ಬದಿಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗುತ್ತಿದೆ. ಜೈಲು ಸಂಪರ್ಕದ ರಸ್ತೆಗಳಾದ ಎಸ್ಪಿ ಸರ್ಕಲ್ ರಸ್ತೆ, ಕನಕ ದುರ್ಗಮ್ಮ ದೇಗಲ ರಸ್ತೆಗೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸುತ್ತಿದ್ದಾರೆ.

ದರ್ಶನ್ ಮೇಲಿನ ಆರೋಪದ ಬಗ್ಗೆ ಗೊತ್ತಿಲ್ಲ

ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಕರೆ ತರುತ್ತಿರುವ ಸುದ್ದಿ ಕೇಳಿ ಬುಧವಾರ ಮುಂಜಾನೆಯಿಂದಲೇ ಅಭಿಮಾನಿಗಳು ಜೈಲು ಸಮೀಪ ಸೇರುತ್ತಿದ್ದಾರೆ. ದರ್ಶನ್ ನೋಡಲು ಜೈಲು ಬಳಿ ಬಂದ ಅಭಿಮಾನಿಗಳಿಗೆ ಆತನ ಮೇಲಿರುವ ಆರೋಪದ ಬಗ್ಗೆ ಗೊತ್ತಿಲ್ಲ, ನೆಚ್ಚಿನ ನಟನನ್ನು ನೋಡಲು ಮಾತ್ರ ಬಂದಿದ್ದೇವೆ ಎನ್ನುತ್ತಿದ್ದಾರೆ.

ನಮ್ಮ ನೆಚ್ಚಿನ ಹೀರೋಗಳನ್ನು ನೋಡಲು ಬೆಂಗಳೂರಿಗೂ ಹೋಗ್ತೇವೆ. ಇದೀಗ ದರ್ಶನ ಬಳ್ಳಾರಿಗೆ ಬರುತ್ತಿರುವುದರಿಂದ ಆತನನ್ನು ನೋಡಲು ಕಾತರರಾಗಿದ್ದೇವೆ. ಆತನ ಮೇಲಿರುವ ಆರೋಪದ ಬಗ್ಗೆ ಕೋರ್ಟ್, ಪೊಲೀಸರು ನೋಡಿಕೊಳ್ತಾರೆ. ದರ್ಶನ್ ನೋಡಲು ಸ್ವಲ್ಪ ಅವಕಾಶ ಸಿಕ್ಕರೇ ಸಾಕು ಎನ್ನುತ್ತಿದ್ದಾರೆ ಅಭಿಮಾನಿಗಳು.

ಬಳ್ಳಾರಿ ಜೈಲು ಇತಿಹಾಸ

1884ರಲ್ಲಿ ಆರಂಭವಾಗಿದ್ದ ಬಳ್ಳಾರಿ ಜೈಲಿಗೆ 140 ವರ್ಷಗಳ ಇತಿಹಾಸವಿದೆ. ಪನಿಷ್ ಮೆಂಟ್ ಜೈಲ್ ಎಂಬ ಖ್ಯಾತಿ ಇದು ಪಡೆದಿದೆ. ಎಲ್ಲಿ ಗಲಾಟೆಯಾದರೂ ಆರೋಪಿ ಮತ್ತು ಕೈದಿಗಳನ್ನು ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡುವ ವಾಡಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಶಾರ್ಪು‌ಶೂಟರ್ ಬಚ್ಚಾಖಾನ್, ವಿಜಯಪುರದ ಮಹದೇವ ಸಾಹುಕಾರ್ ಸೇರಿಸಂತೆ ಇತರರನ್ನು ಬಂಧಿಸಿಟ್ಟಿದ್ದು ಇದೇ ಜೈಲಿನಲ್ಲಿ. ಮುನಿರಾಬಾದ್ ಬಾಂಬ್ ಇಡಲು ಬಂದ ಭಯೋತ್ಪಾದಕರನ್ನು‌ ಇಲ್ಲಿಯೇ ಬಂಧಿಸಿಟ್ಟಿದ್ದರು.

ರಾಜ್ಯದ ಅತ್ಯಂತ ಹಳೆಯ ಜೈಲು ಆಗಿರುವ ಬಳ್ಳಾರಿ ಜೈಲಿನಲ್ಲಿ ಸದ್ಯ 385 ಖೈದಿಗಳಿದ್ದಾರೆ. 100 ಜನ ಕೊಲೆ ಆರೋಪಿಗಳಿದ್ದು, 38 ಜನ ರೌಡಿಶೀಟರ್ ಗಳಿದ್ದಾರೆ.

ಭೀಮಾತೀರದ ಹನುಮಂತ ನಾಯ್ಕ್ ಕೆಜೆಹಳ್ಳಿ, ಡಿಜೆಹಳ್ಳಿ ಪ್ರಕರಣದಲ್ಲಿನ 80 ಆರೋಪಿಗಳು, ಹುಲಿಹೈದರ್ ಗಲಭೆ, ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಸೆಂಟ್ರರ್ ಜೈಲಿಗೆ ಶಿಫ್ಟ್ ಆಗಿದ್ದರು.

ಕೊಲೆ ಆರೋಪಿಗಳು, ರೇಫಿಸ್ಟ್ ಖೈದಿಗಳು ಇರುವ ಬಳ್ಳಾರಿ ಜೈಲಿನಲ್ಲಿ 80 ಸಿಸಿ ಕೆಮರಾ, 9 ಡಾನ್ ಮೆಟರಿಯಲ್ ಸೆಲ್, 16 ಸ್ಪೆಷಲ್ ಬ್ಯಾರಿಕೇಡ್ ವ್ಯವಸ್ಥೆ ಇದೆ.

ಪ್ರಖ್ಯಾತಿ , ಕುಖ್ಯಾತಿ ಎರಡನ್ನೂ ಹೊಂದಿರೋ ಬಳ್ಳಾರಿ ಜೈಲ್ ನಲ್ಲಿ ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧನದಲ್ಲಿ ಇರಿಸಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರ ರಾಜ ಗೋಪಾಲಾ ಚಾರ್ಯ,  ಬಿಜೆಪಿ‌ ಸರಕಾರದ ಗೃಹಸಚಿವರಾಗಿದ್ದ ದಿವಂಗತ ವಿ.ಎಸ್. ಅಚಾರ್ಯ ಅವರನ್ನು ಎಮರ್ಜೆನ್ಸಿ ಅವಧಿಯಲ್ಲಿ ಬಳ್ಳಾರಿ ಜೈಲಿನಲ್ಲಿ ಬಂಧಿಸಿಡಲಾಗಿತ್ತು. ಮಹದಾಯಿ ಹೋರಾಟಗಾರರ ರೈತರು ಇಲ್ಲಿ ಬಂಧನಕ್ಕೆ ಒಳಗಾಗಿದ್ದರು.

ನಟೋರಿಯಸ್ ಖೈದಿಗಳಿಂದ ಕುಖ್ಯಾತಿ ಹೊಂದಿರೋ ರೌಡಿಗಳು, ಭೀಮಾ ತೀರದ ಹಂತಕ ಹನುಮಂತ ನಾಯ್ಕ್, ಕುಖ್ಯಾತಿ ರೇಫಿಸ್ಟ್ ಉಮೇಶ್ ರೆಡ್ಡಿ, ಕುಖ್ಯಾತ ರೌಡಿ ಡೆಡ್ಲಿ ಸೋಮ, ಕುಖ್ಯಾತ ಕಳ್ಳ ಸಿಗ್ಲಿ ಬಸ್ಯಾ, ನಟೋರಿಯಸ್ ರೌಡಿ ಬಚ್ಚಾಖಾನ್, ಕೊರಂಗು ಕೃಷ್ಣ ಸೇರಿ ಹಲವಾರು ರೌಡಿಗಳು ಇಲ್ಲಿ ಜೈಲು ವಾಸ ಅನುಭವಿಸಿದ್ದರು.

ರಾಜಕಾರಣಿಗಳಾದ ಜನಾರ್ದನ ರೆಡ್ಡಿ ಕೂಡಾ ಒಂದು ದಿನ ಇದೇ ಜೈಲಿನಲ್ಲಿ ಕಾಲ ಕಳೆದಿದ್ದರು.

Actor Darshan
Actor Darshan


ಸಾಮಾನ್ಯ ಸೆಲ್ ನಲ್ಲಿ ದರ್ಶನ್ ?

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್ ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್ ಗಳಾಗಿದೆ. ಹೀಗಾಗಿ ದರ್ಶನ್ ಕೂಡ‌ ಇಲ್ಲಿರುವ ಎಲ್ಲ ಕೈದಿಗಳಂತೆಯೇ ಸಾಮಾನ್ಯ ಕೈದಿಯಾಗಿ‌ ಮುಂದುವರಿಯಬೇಕಿದೆ.

ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್ ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗುತ್ತದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್ ಗಳಿದ್ದು, ಒಂದು ಸೆಲ್ ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲವನ್ನು ಹೊಂದಿದೆ.

ಇಲ್ಲಿರುವ ಹನ್ನೊಂದು ಸೆಲ್ ಗಳಿಗೆ ದಿನದ 24 ಗಂಟೆಯೂ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿದೆ.

ಈ ವೇಳೆ ಭದ್ರತೆ ಸಿಬ್ಬಂದಿ ಕೂಡ ಹಾಜರಿರುತ್ತಾರೆ. ಸೆಲ್ ನ ಒಳಗಡೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಈ ಸೆಲ್ ಗೆ ಎರಡು ಗೇಟ್ ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ,ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ.

ಬಳ್ಳಾರಿಯಲ್ಲಿ ಹೈ ಅಲರ್ಟ್

ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಶಿಫ್ಟ್ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದಲ್ಲಿ ಅಧಿಕಾರಿಗಳು ಹೈ ಅಲಟ್೯ ಆಗಿದ್ದಾರೆ. ಮಂಗಳವಾರ ರಾತ್ರಿ ಸಿಬ್ಬಂದಿಯ ತುರ್ತು ಸಭೆ ನಡೆಸಿದ‌ ಬಳ್ಳಾರಿ‌ ಕೇಂದ್ರ ಕಾರಾಗೃಹ ಅಧೀಕ್ಷಕಿ‌ ಲತಾ ಅವರು ಪೊಲೀಸ್ ಅಧಿಕಾರಿಗಳು ತೀವ್ರ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ.

ಸಿಸಿ ಟಿವಿಗಳ ಕಾರ್ಯಾಚರಣೆ, ಸೆಲ್ ಗಳ ಸ್ಥಿತಿಗತಿ ಪರಿಶೀಲನೆ ನಡೆಸಿರುವ ಅವರು, ಜೈಲಿನ ಎಲ್ಲ ಸಿಬ್ಬಂದಿ ಜೊತೆ ಸಭೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ನಡೆದ ಘಟನೆ ಇಲ್ಲಿ ಮರುಕಳಿಸಬಾರದು ಮತ್ತು ಯಾವುದೇ ಸಿಬ್ಬಂದಿ ಖೈದಿಗಳ‌ ಜತೆ ಕೈ ಮಿಲಾಯಿಸಿದ್ದು ಗೊತ್ತಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ‌ಯನ್ನು ನೀಡಿದ್ದಾರೆ.

ಭದ್ರತೆ ಹೆಚ್ಚಳ

ಜೈಲು ಬಳಿ ಹೆಚ್ಚಿನ ‌ಪೊಲೀಸ್ ಭದ್ರತೆ ‌ಒದಗಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಜೈಲಿನಲ್ಲಿ ‌ಸದ್ಯ 100 ಜನ ಸಿಬ್ಬಂದಿ ‌ಮಾತ್ರ ಕರ್ತವ್ಯದಲ್ಲಿದ್ದಾರೆ. ಹೆಚ್ಚಿನ‌ ಸಿಬ್ಬಂದಿ ನಿಯೋಜನೆಗೆ ಚಿಂತನೆ‌ ನಡೆಸಲಾಗುತ್ತಿದೆ.

ಇದನ್ನೂ ಓದಿ: Actor Darshan : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ಡ್ರಿಲ್!‌

ಧಾರವಾಡ ಜೈಲಿಗೆ ಧನರಾಜ್

17 ಆರೋಪಿಗಳ ಪೈಕಿ ಎ9 ಆರೋಪಿ ಧನರಾಜ್ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಸಂಜೆಯೊಳಗೆ ಶಿಫ್ಟ್ ಅಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ.

ಶಿವಮೊಗ್ಗ ಜೈಲಿಗೆ ಎಸ್ಪಿ ತಂಡ ದಿಢೀರ್ ದಾಳಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೆಂದ್ರ ಕಾರಾಗೃಹದ ಮೇಲೆ ಎಸ್ಪಿ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದೆ. ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ 120 ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ ಜೈಲಿನಲ್ಲಿ ಕಾರ್ಯಾಚರಣೆಯನ್ನು ತಪಾಸಣೆ ನಡೆಸಿದ್ದಾರೆ. ಜೈಲಿನಲ್ಲಿರುವ ಬ್ಯಾರಕ್, ನಿಷೇಧಿತ ವಸ್ತುಗಳ ಬಗ್ಗೆ ತಪಾಸಣೆ ನಡೆಸಲಾಗಿದೆ.

ರೇಣುಕಾಸ್ವಾಮಿ‌ ಕೊಲೆ ಆರೋಪಿಗಳಾದ ಲಕ್ಷ್ಮಣ ಹಾಗೂ ಜಗದೀಶ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಪೊಲೀಸರು ಸ್ಥಳಾಂತರ ನಡೆಸಲಿದ್ದಾರೆ.

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌