Site icon Vistara News

Kannada New Movie: ʻSupplier ಶಂಕರ’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್‌!

Kannada New Movie Supplier shankar

ಬೆಂಗಳೂರು: ಸದ್ದಿಲ್ಲದೇ ಶೂಟಿಂಗ್ ಮುಗಿಸಿ (Kannada New Movie) ಬಿಡುಗಡೆಗೆ ಸಜ್ಜಾಗಿರುವ ʻSupplier ಶಂಕರʼ (Supplier ಶಂಕರ) ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಪೊಲೀಸ್ ಸ್ಟೇಷನ್‌ ದೃಶ್ಯದ ಮೂಲಕ ತೆರೆದುಕೊಳ್ಳುವ ಮೋಷನ್ ಪೋಸ್ಟರ್ ನಾನಾ ಕುತೂಹಲವನ್ನು ಹುಟ್ಟುಹಾಕಿದೆ. ರಕ್ತ ಮೆತ್ತಿದ ನಾಯಕ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ Supplier ಶಂಕರ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ Supplier ಸುತ್ತ ಇಡೀ ಸಿನಿಮಾ ಸಾಗುತ್ತದೆ. ನಿಶ್ಚಿತ್‌ಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದು, ಗೋಪಾಲ ಕೃಷ್ಣ ದೇಶಪಾಂಡೇ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ʻಕಣ್ಣಲ್ಲೇ ನಟಿಸೊ ಒಂದೊಳ್ಳೇ ನಟʼಅಂದ್ರು ಪ್ರೇಕ್ಷಕರು; ʻಕ್ಷೇತ್ರಪತಿʼ ಚಿತ್ರಕ್ಕೆ ಜೈಕಾರ!

Supplier ಶಂಕರ ಸಿನಿಮಾಗೆ ರಂಜಿತ್, ಕಥೆ , ಚಿತ್ರಕಥೆ, ಸಂಭಾಷಣೆ ಜೊತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದು, ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ. ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ Supplier ಶಂಕರ್ ಸಿನಿಮಾಗಿದೆ.

Exit mobile version