Site icon Vistara News

Kannada New Movie | ‘ದಿ’ ಸಿನಿಮಾ ಶೀರ್ಷಿಕೆ ರಿವೀಲ್ ಮಾಡಿದ ಸಿಂಪಲ್ ಸುನಿ!

Kannada New Movie

ಬೆಂಗಳೂರು : ‘ಕಡೆಮನೆ’ ಸಿನಿಮಾ (Kannada New Movie ) ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ದಿ’ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಶೀರ್ಷಿಕೆ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ಚಿತ್ರದ ವಿಭಿನ್ನ ಟೈಟಲ್ ನ್ನು ನಿರ್ದೇಶಕ ಸಿಂಪಲ್ ಸುನಿ ಮೂಲಕ ರಿವೀಲ್ ಮಾಡಿಸಿದೆ. ಟೈಟಲ್ ರಿವೀಲ್ ಮಾಡಿ ನಿರ್ದೇಶಕ ವಿನಯ್ ಹಾಗೂ ಇಡೀ ಚಿತ್ರತಂಡಕ್ಕೆ ಸಿಂಪಲ್ ಸುನಿ ಶುಭ ಕೋರಿದ್ದಾರೆ. ಸದ್ಯದಲ್ಲೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ನಾಯಕ ನಾಯಕಿ ಯಾರೆಂಬುದನ್ನು ಚಿತ್ರತಂಡ ರಿವೀಲ್ ಮಾಡಲಿದೆ.

ಇದನ್ನೂ ಓದಿ | Kannada New Movie | ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ ʻಕೆಟಿಎಂʼ ಟೀಸರ್ ಔಟ್‌!

ಲವ್ ಸ್ಟೋರಿ ಕಥಾಹಂದರ ಒಳಗೊಂಡಿದೆ. ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಶೀಘ್ರದಲ್ಲೇ ಟ್ರೈಲರ್‌ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಚಿತ್ರತಂಡ ಫೆಬ್ರವರಿ ಕೊನೆಯ ವಾರ ಸಿನಿಮಾ ತೆರೆಗೆ ತರುವ ತಯಾರಿಯಲ್ಲಿದೆ.

‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ ‘ದಿ’ ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movie | `ಡಾಲರ್ಸ್ ಪೇಟೆ’ ಫಸ್ಟ್ ಲುಕ್ ರಿವೀಲ್!

Exit mobile version