Site icon Vistara News

Kannada New Movie | `ಖಾಸಗಿ ಪುಟಗಳು’ ಸಿನಿಮಾ ನವೆಂಬರ್ 18ರಂದು ತೆರೆಗೆ!

Kannada New Movie

ಬೆಂಗಳೂರು : ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಖಾಸಗಿ ಪುಟಗಳು’ ಸಿನಿಮಾ (Kannada New Movie ) ಬಿಡುಗಡೆಗೆ ತಯಾರಾಗಿದೆ. ಈಗಾಗಲೇ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದೆ. ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ‘ಖಾಸಗಿ ಪುಟಗಳು’ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ಪ್ರೇಮಕಥೆ ಹೊತ್ತ ಸಿನಿಮಾವಿದು. ಕಿರುಚಿತ್ರದಲ್ಲಿ ನಟಿಸಿ ಅನುಭವ ಇರುವ ವಿಶ್ವ ಅವರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದ ನಾಯಕಿ ಶ್ವೇತ ಡಿಸೋಜ ಮಾತನಾಡಿ ʻʻಹಿಂದಿಯಲ್ಲಿ ‘ವೈ’ ಎಂಬ ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾ. ಭೂಮಿ ಪಾತ್ರದಲ್ಲಿ ನಟಿಸಿದ್ದೇನೆ. ಇನೋಸೆಂಟ್ ಹಾಗೂ ಮೆಚೋರ್ಡ್ ಎರಡು ಶೇಡ್‌ನಲ್ಲಿ ಕಾಣಸಿಗಲಿದ್ದೇನೆʼʼ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ʻʻಕಿರುಚಿತ್ರಗಳಲ್ಲಿ ಅಭಿನಯಿಸುತ್ತಿದ್ದೆ. ಸಿನಿಮಾಗಳಲ್ಲಿ ಅಭಿನಯಿಸಬೇಕು ಎಂಬ ಆಸೆಯಿತ್ತು. ನಾಯಕ ನಟನಾಗಿ ಇದು ನನ್ನ ಮೊದಲ ಸಿನಿಮಾ. ಒಂದು ತಂಡವಾಗಿ ಎಲ್ಲರೂ ಈ ಸಿನಿಮಾವನ್ನು ಮಾಡಿದ್ದೇವೆʼʼ.ಎಂದು ನಾಯಕ ವಿಶ್ವ ಹೇಳಿದರು.

ಇದನ್ನೂ ಓದಿ | Kannada New Movie | ಪೃಥ್ವಿ ಅಂಬಾರ್‌-ಮಿಲನಾ ಅಭಿನಯದ `For Regn’ ರಿಲೀಸ್‌ ಡೇಟ್‌ ರಿವೀಲ್‌!

ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮಾತನಾಡಿ ʻʻಸಂತೋಷ್ ಶ್ರೀಕಂಠಪ್ಪ ಅವರಿಗೆ ಇರುವ ಸಿನಿಮಾ ಪ್ರೀತಿ ನೋಡಿ ಈ ಚಿತ್ರವನ್ನು ಒಪ್ಪಿಕೊಂಡೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ, ಕೆ. ಕಲ್ಯಾಣ್, ಪ್ರಮೋದ್ ಮರವಂತೆ, ತ್ರಿಲೋಕ್ ತ್ರಿವಿಕ್ರಮ್ ಸಾಹಿತ್ಯ ಬರೆದಿದ್ದಾರೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಎಲ್ಲರೂ ಸಿನಿಮಾ ನೋಡಿ ಹೊಸಬರನ್ನು ಬೆಳೆಸಿʼʼ ಎಂದರು.

ಚೇತನ್ ದುರ್ಗಾ, ನಂದಕುಮಾರ್,ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ, ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ ನೀಡಿದ್ದು, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movie | ನೀ ಮಾಯೆಯೊಳಗೊ ಮಾಯೆ ನಿನ್ನೊಳಗೊ ಬಿಡುಗಡೆ ದಿನಾಂಕ ಪ್ರಕಟ

Exit mobile version