Site icon Vistara News

IFFI Goa 2023: ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ!

Kantara

ಬೆಂಗಳೂರು: ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಕಾಂತಾರ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ ಕೂಡ ಅಷ್ಟೇ ಎತ್ತರಕ್ಕೆ ಹೋಗಿತ್ತು. ಈ ಬಾರಿ 54ನೇ ಗೋವಾ ಅಂತಾರಾಷ್ಟ್ರಿಯ ಸಿನಿಮೋತ್ಸವದಲ್ಲಿ – ಐಎಫ್‌ಎಫ್‌ಐ ಗೋವಾ (IFFI Goa 2023) ತಮಿಳು, ಮಲಯಾಳಂ ಮತ್ತು ಕನ್ನಡ ಸಿನಿರಂಗಗಳ ಹಲವಾರು ಸಿನಿಮಾಗಳು ಪ್ರದರ್ಶನವಾಗಲಿವೆ. ಇದರದಲ್ಲಿ ಕನ್ನಡದ ಸೂಪರ್‌ ಹಿಟ್ ‘ಕಾಂತಾರ ಪ್ರದರ್ಶನವಾಗಲಿದ್ದು, ಸಿನಿ ತಂಡಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ ಎನಿಸಿದೆ.

ದಕ್ಷಿಣದ ಭಾಷೆಗಳಲ್ಲದೆ ಹಿಂದಿ ಸೇರಿದಂಥೆ ಉತ್ತರದ ಭಾಷೆಗಳಲ್ಲೂ ಖ್ಯಾತಿ ಪಡೆದ ಸಿನಿಮಾ ಇದು. ಈ ಚಿತ್ರದಿಂದ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡರು. ಕಾಂತಾರ ಜತೆಗೆ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ 2 ಕೂಡ ಗೋವಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಲಿದೆ.

ʼಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ, ಭರ್ಜರಿ ಯಶಸ್ಸು ಕಂಡಿರುವ ಇದು ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಸಂಪಾದಿಸಿತ್ತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಆರಂಭಗೊಂಡಿವೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇದನ್ನೂ ಓದಿ: Recreation of Kantara: ʻಕಾಂತಾರʼ ಎಫೆಕ್ಟ್ ; ಬೆಂಕಿ ಅವಘಡಕ್ಕೆ ಮಕ್ಕಳು ಸೇರಿ ಹಲವರಿಗೆ ಗಂಭೀರ ಗಾಯ

ಕಾಂತಾರ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಬೇರೆ ಸಿನಿಮಾ ರಂಗದಿಂದ ರಿಷಬ್ ಶೆಟ್ಟಿಗೆ (Rishabh Shetty) ಆಫರ್ ಬಂದಿದ್ದು ನಿಜ ಎಂದಿದ್ದರು ರಿಷಬ್‌. ʻʻಬೇರೆ ಭಾಷೆಗಳಿಂದ ಹಲವು ಸಿನಿಮಾ ಅವಕಾಶಗಳು ಬಂದಿದ್ದವು. ಆದರೆ ನನಗೆ ‘ಕಾಂತಾರ’ವೇ ಆದ್ಯತೆ. ಕಾಂತಾರ’ದ ಯಶಸ್ಸಿಗೆ ಕನ್ನಡಿಗರು ಕಾರಣ. ಇವರು ನೀಡಿರುವ ಯಶಸ್ಸಿನ ಬೆನ್ನಲ್ಲೇ ಬೇರೆ ಭಾಷೆಯಲ್ಲಿ ಅವಕಾಶ ಬಂತೆಂದು ಓಡಿ ಹೋಗುವುದಿಲ್ಲ. ಹೊರಗಡೆಯಿಂದ ಬಂದ ತಂತ್ರಜ್ಞರು, ನಿರ್ದೇಶಕರು ಕನ್ನಡ ಸಿನಿಮಾ ಮಾಡಿ ಪ್ರಪಂಚದಾದ್ಯಂತ ತೆಗೆದುಕೊಂಡು ಹೋದರೆ ಅಭ್ಯಂತರವಿಲ್ಲ. ನನ್ನ ಆದ್ಯತೆ ಕನ್ನಡ ಸಿನಿಮಾ. “ಕಾಂತಾರ-2′ ಪೂರ್ಣಗೊಂಡ ಬಳಿಕ ಮುಂದಿನ ಸಿನಿಮಾಗಳ ಬಗ್ಗೆ ಯೋಚಿಸುವೆ’ ಎಂದಿದ್ದರು ರಿಷಬ್‌.

 ‘ಕಾಂತಾರ’-2 ಚಿತ್ರೀಕರಣ ಮುಗಿದ ಬಳಿಕ ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟನೆ

ವರದಿಗಳ ಪ್ರಕಾರ ‘ಕಾಂತಾರ’-2 ಚಿತ್ರೀಕರಣ ಮುಗಿದ ಬಳಿಕ ‘ಲಗಾನ್’, ‘ಸ್ವದೇಶ್’, ‘ಜೋಧಾ ಅಕ್ಬರ್’, ‘ಪಾಣಿಪತ್’ ರೀತಿಯ ಅದ್ಭುತ ಸಿನಿಮಾಗಳನ್ನು ಕಟ್ಟಿಕೊಟ್ಟ ನಿರ್ದೇಶಕ ಅಶುತೋಷ್ ಗೋವಾರಿಕರ್ (ashutosh gowariker) ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಅಶುತೋಷ್ ನಿರ್ದೇಶನದ ಚಿತ್ರದಲ್ಲಿ ರಿಷಬ್ ನಟಿಸುತ್ತಾರೆ ಎನ್ನುವ ಸುದ್ದಿಯೇ ಭಾರೀ ಸದ್ದು ಮಾಡುತ್ತಿದೆ. ಇದೇ ಮೊದಲ ಬಾರಿಗೆ ಇಬ್ಬರೂ ಒಟ್ಟಿಗೆ ಕೆಲಸ ಮಾಡಲು ಮುಂದಾಗಿದ್ದಾರೆ. ಇನ್ನು ಹೆಸರಿಡದ ಈ ಸಿನಿಮಾ ಪ್ರೀ ಪ್ರೊಡಕ್ಷನ್ ಶೀಘ್ರದಲ್ಲೇ ಶುರುವಾಗಲಿದೆ. ಮುಂದಿನ ವರ್ಷ ಮಧ್ಯಭಾಗದಲ್ಲಿ ಸಿನಿಮಾ ಸೆಟ್ಟೇರುವ ನಿರೀಕ್ಷೆಯಿದೆ ಎನ್ನಲಾಗಿದೆ. ಈ ಬಗ್ಗೆ ರಿಷಬ್‌ ಶೆಟ್ಟಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ.

Exit mobile version