ಬೆಂಗಳೂರು: ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ ಸಮೇತ ಅಮೆರಿಕಾದ ವಾಷಿಂಗ್ಟನ್ ಸಿಯಾಟಲ್‌ಗೆ ಭೇಟಿ ನೀಡಿದ್ದರು. ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್‌ನಲ್ಲಿ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಅಮೆರಿಕ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರು ಅಮೆರಿಕಾದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದರು.
ವಾಷಿಂಗ್ಟನ್ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್‌ಗೆ 95 ವರ್ಷಗಳ ಇತಿಹಾಸವಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ.
ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ. ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: Rishab Shetty : ಕುದುರೆ ಸವಾರಿಯಲ್ಲಿ ಶೆಟ್ರು ಬ್ಯುಸಿ; ಹೇಗಿದೆ ಕಾಂತಾರ-2 ತಯಾರಿ?
ರಿಷಬ್ ಕೂಡ ತಮ್ಮ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿ ʻʻಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೆರಿಕದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ –
ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Rishab Shetty: ರಿಷಬ್ ಹುಟ್ಟಿ ಬೆಳೆದ ಮನೆಯಲ್ಲಿ ಮಗಳ ಕಿವಿ ಚುಚ್ಚುವ ಶಾಸ್ತ್ರ!ಕ್ಯೂಟ್ ವಿಡಿಯೊ ವೈರಲ್!
ಈ ಕಾರ್ಯಕ್ರಮದಲ್ಲಿ ಸೆನೆಟರ್ ಡಾ. ದೆರೀಕ್ ಟ್ರಸ್ಫರ್ಡ್ ಹಾಜರಿ ಹಾಕಿದ್ದರು. ‘ಕಾಂತಾರ’ ಚಿತ್ರವನ್ನು ವಿಶ್ವದ ಅನೇಕರು ನೋಡಿದ್ದಾರೆ. ಆ ಸಾಲಿನಲ್ಲಿ ಟ್ರಸ್ಫರ್ಡ್ ಕೂಡ ಇದ್ದಾರೆ. ಈ ಚಿತ್ರವನ್ನು ಯೂನಿವರ್ಸಲ್ ಸಿನಿಮಾ ಎಂದು ಅವರು ಕರೆದಿದ್ದಾರೆ. ಅಮೆರಿಕ ಹಾಗೂ ವಾಷಿಂಗ್ಟನ್ಗೆ ಕನ್ನಡಿಗರು ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ ಎಂದು ಟ್ರಸ್ಫರ್ಡ್ ಮೆಚ್ಚುಗೆ ಸೂಚಿಸಿದ್ದಾರೆ.