ಬೆಂಗಳೂರು: ಸೂಪರ್ ಹಿಟ್ ಕನ್ನಡ ಸಿನಿಮಾ ಕಾಂತಾರದ (Kantara Movie) ಜನಪ್ರಿಯ ಹಾಡು ʻವರಾಹ ರೂಪಂʼ ಪ್ರಸಾರಕ್ಕೆ ಕೇರಳದ ಕಲ್ಲಿಕೋಟೆಯ ಸೆಷನ್ಸ್ ಕೋರ್ಟ್ ತಡೆ ನೀಡಿತ್ತು. ಇದಾದ ನಂತರದಲ್ಲಿ ಸಿನಿಮಾ ತಂಡಕ್ಕೆ ಕೇರಳದ ಪಾಲಕ್ಕಾಡ್ ಕೋರ್ಟ್ ಮತ್ತೊಂದು ಆದೇಶ ನೀಡಿದೆ. ವರಾಹ ರೂಪಂ ಹಾಡಿಗೆ ತಡೆ ನೀಡಿ ಎಂದು ಕೇರಳದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಾತೃಭೂಮಿ ʻಮ್ಯೂಸಿಕ್’ ಪಾಲಕ್ಕಾಡ್ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಸಂಬಂಧ ಕೇಸ್ ದಾಖಲು ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ‘ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ, ಪ್ರಸಾರ ಮಾಡುವಂತಿಲ್ಲ’ ಎಂದು ಹೇಳಿದೆ. ಈ ಮೂಲಕ ಹಾಡಿಗೆ ತಡೆಯಾಜ್ಞೆ ನೀಡಿದೆ.
ಕಾಂತಾರದ ಜನಪ್ರಿಯ ಹಾಡು ʻವರಾಹ ರೂಪಂʼ ಪ್ರಸಾರಕ್ಕೆ ಕೇರಳದ ಕಲ್ಲಿಕೋಟೆಯ ಸೆಷನ್ಸ್ ಕೋರ್ಟ್ ತಡೆ ನೀಡಿತ್ತು. ಕಾಂತಾರದ ನಿರ್ಮಾಪಕರು, ನಿರ್ದೇಶಕರು, ಸಂಗೀತ ನಿರ್ದೇಶಕ ಹಾಡು ಪ್ರಸಾರ ಮಾಡುತ್ತಿರುವ ಅಮೆಜಾನ್, ಯೂಟ್ಯೂಬ್, ಸ್ಪೋಟಿಫೈ, ವಿಂಕ್, ಜಿಯೋ ಸಾವನ್ ಸೇರಿದಂತೆ ಇನ್ನಿತರ ಆನ್‌ಲೈನ್ ವೇದಿಕೆಗಳಿಗೆ ಆದೇಶ ಹೊರಡಿಸಿತ್ತು. ಬ್ಲಾಕ್‌ಬಸ್ಟರ್ ಸಿನಿಮಾ ಕಾಂತಾರದ ವರಾಹ ರೂಪಂ ಹಾಡು ನಾವು ಐದು ವರ್ಷದ ಹಿಂದೆ ರಚಿಸಿ ಬಿಡುಗಡೆ ಮಾಡಿದ್ದ ನವರಸಂ ಹಾಡಿನ ಕಾಪಿ ಎಂಬುದಾಗಿ ತೈಕುಡಂ ಬ್ರಿಜ್ ಎಂಬ ಸಂಸ್ಥೆ ಕೋರ್ಟ್ ಮೊರೆ ಹೋಗಿತ್ತು. ಅಂತೆಯೇ ವಿಚಾರಣೆ ನಡೆಸಿದ ಕೋರ್ಟ್ ಹಾಡಿನ ಪ್ರಸರಣವನ್ನು ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು. ಈಗ ಪಾಲಕ್ಕಾಡ್ ಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ | Kantara Movie | ವರಾಹ ರೂಪಂ ಮ್ಯೂಸಿಕ್ ಕದ್ದಿಲ್ಲ, ಸಾಬೀತು ಪಡಿಸುತ್ತೇವೆ: ರಿಷಬ್ ಶೆಟ್ಟಿ!
ಬ್ಲಾಕ್‌ಬಸ್ಟರ್ ಸಿನಿಮಾ ಕಾಂತಾರದ ವರಾಹ ರೂಪಂ ಹಾಡು ನಾವು ಐದು ವರ್ಷದ ಹಿಂದೆ ರಚಿಸಿ ಬಿಡುಗಡೆ ಮಾಡಿದ್ದ ನವರಸಂ ಹಾಡಿನ ಕಾಪಿ ಎಂಬುದಾಗಿ ತೈಕುಡಂ ಬ್ರಿಜ್ ಎಂಬ ಸಂಸ್ಥೆ ಕೋರ್ಟ್ ಮೊರೆ ಹೋಗಿತ್ತು. ಅಂತೆಯೇ ವಿಚಾರಣೆ ನಡೆಸಿದ ಕೋರ್ಟ್ ಹಾಡಿನ ಪ್ರಸರಣವನ್ನು ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು. ತಡೆಯಾಜ್ಞೆ ತಂದಿರುವ ವಿಚಾರವನ್ನು ತೈಕುಡಂ ಬ್ರಿಜ್ ಮ್ಯೂಸಿಕ್ ಸಂಸ್ಥೆ, ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿತ್ತು. ಅಂತೆಯೇ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿತ್ತು.
ಇದನ್ನೂ ಓದಿ| Kantara Movie | ಬೆಂಗಳೂರಿನಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್