ಬೆಂಗಳೂರು : ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ʻಕಾಂತಾರʼ ಸಿನಿಮಾ (Kantara Movie) ಈ ಬಾರಿ ಪ್ರಿಕ್ವೆಲ್ ಆಗಿ ಬರಲಿದೆ. ಕಾಂತಾರ-1 ಸಿಕ್ವೆಲ್ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್ (Prequel film) ಆಗಿ ಮೂಡಿಬರಲಿದೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥಾಪಕ ವಿಜಯ್ ಕಿರಗಂದೂರು ಸಂವಾದವೊಂದರಲ್ಲಿ ರಿಷಬ್ ಶೆಟ್ಟಿ ಈಗಾಗಲೇ ಚಿತ್ರದ ಕೆಲಸ ಪ್ರಾರಂಭಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ಪ್ರಿಕ್ವೆಲ್ ಆಗಿ ಬರಲಿದೆ ಕಾಂತಾರ 2:
ಕಾಂತಾರ 2 ಪೂರ್ವಭಾವಿ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.
ಇದನ್ನೂ ಓದಿ | Kantara Movie | ಕಾಂತಾರ ಸಿನಿಮಾ ಮೆಚ್ಚಿ ರಿಷಬ್ಗೆ ಪತ್ರ ಬರೆದ ಕಮಲಹಾಸನ್: ಪತ್ರದಲ್ಲಿ ಏನಿದೆ?
“ಚಿತ್ರದ ಒಂದು ದೃಶ್ಯಕ್ಕೆ ಮಳೆ ಅವಶ್ಯಕತೆ ಇರುವುದರಿಂದ ಜೂನ್ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ರಿಷಬ್ ಯೋಜಿಸಿದ್ದಾರೆ. ಮುಂದಿನ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚಿತ್ರವನ್ನು ಪ್ಯಾನ್-ಇಂಡಿಯಾ ಬಿಡುಗಡೆ ಮಾಡುವುದು ನಮ್ಮ ಉದ್ದೇಶ” ಎಂದು ವಿಜಯ್ ಹೇಳಿದ್ದಾರೆ. ʻʻʻಈಗಾಗಲೇ ರಿಷಬ್ ಶೆಟ್ಟಿ ಅವರು ಕರ್ನಾಟಕದ ಕರಾವಳಿ ಪ್ರದೇಶದ ಕಾಡುಗಳಿಗೆ ಹೋಗಿದ್ದಾರೆ. ಅವರು ತಮ್ಮ ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿರುವ ಜಾನಪದದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಎರಡು ತಿಂಗಳ ಕೆಲಸ ಮಾಡುತ್ತಿದ್ದಾರೆ. ಕಾಂತಾರ 2 ಚಿತ್ರದ ಬಜೆಟ್ ಅನ್ನು ಹೆಚ್ಚಿಸಲಾಗಿದೆ ಆದರೆ ಚಿತ್ರದ ನಿರಂತರತೆ ಮತ್ತು ನೈಜತೆಯನ್ನು ಉಳಿಸಿಕೊಳ್ಳಲು ಚಿತ್ರದ ಶೈಲಿ, ನಿರೂಪಣೆ ಮತ್ತು ಛಾಯಾಗ್ರಹಣವು ಕಾಂತಾರದಂತೆಯೇ ಇರುತ್ತದೆʼʼ ಎಂದರು.
ಹೆಚ್ಚಿನ ಪಾತ್ರವರ್ಗದ ಸದಸ್ಯರನ್ನು ಸೇರಿಸಲಾಗುತ್ತಿದೆ ಎನ್ನಲಾಗಿದೆ. ಮೊದಲ ಚಿತ್ರಕ್ಕೆ ಹೋಲಿಸಿದರೆ ಚಿತ್ರತಂಡದ ಸದಸ್ಯರು ಹೆಚ್ಚು ಸಂಭಾವನೆ ಪಡೆಯುವ ಸಾಧ್ಯತೆಯಿದೆ. ರಿಷಬ್ ಶೆಟ್ಟಿ ಮೊದಲ ಚಿತ್ರಕ್ಕೆ ರೂ. 4 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ವದಂತಿಗಳಿವೆ. ಅವರು ಪ್ರಿಕ್ವೆಲ್ನೊಂದಿಗೆ ದುಪ್ಪಟ್ಟು ಗಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಾಂತಾರ-1 , 16 ಕೋಟಿ ರೂ. ಬಜೆಟ್ನಲ್ಲಿ ನಿರ್ಮಿಸಿಲಾಗಿದ್ದು, ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಸುಮಾರು 400 ಕೋಟಿ ರೂ. ಗಳಿಸಿತು. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಾಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡಿತು. ಕಾಂತಾರ ಚಿತ್ರದಲ್ಲಿ ಕಿಶೋರ್, ಅಚ್ಯುತ್ ಕುಮಾರ್, ಸಪ್ತಮಿ ಗೌಡ ಮತ್ತು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ | Kantara Movie | ʻಕಾಂತಾರʼ ಪ್ರಭಾವದಿಂದ ದೈವದ ದರ್ಶನ ಸೇವೆಯನ್ನು ಕಣ್ತುಂಬಿಕೊಂಡ ನೂರಾರು ವಿದ್ಯಾರ್ಥಿಗಳು