ಬೆಂಗಳೂರು : ಸೂಪರ್ ಹಿಟ್ ಕನ್ನಡ ಸಿನಿಮಾ ಕಾಂತಾರದ ಜನಪ್ರಿಯ ಹಾಡು ವರಾಹ ರೂಪಂ ಪ್ರಸಾರಕ್ಕೆ ಕೇರಳದ ಕಲ್ಲಿಕೋಟೆಯ ಸೆಶನ್ಸ್ ಕೋರ್ಟ್ ತಡೆ ನೀಡಿದೆ. ಕಾಂತಾರದ ನಿರ್ಮಾಪಕರು, ನಿರ್ದೇಶಕರು, ಸಂಗೀತ ನಿರ್ದೇಶಕ ಹಾಡು ಪ್ರಸಾರ ಮಾಡುತ್ತಿರುವ ಅಮೆಜಾನ್, ಯೂಟ್ಯೂಬ್, ಸ್ಪೋಟಿಫೈ, ವಿಂಕ್, ಜಿಯೋ ಸಾವನ್ ಸೇರಿದಂತೆ ಇನ್ನಿತರ ಆನ್‌ಲೈನ್ ವೇದಿಕೆಗಳಿಗೆ ಆದೇಶ ಹೊರಡಿಸಿದೆ.
ಬ್ಲಾಕ್‌ಬಸ್ಟರ್ ಸಿನಿಮಾ ಕಾಂತಾರರದ ವರಾಹ ರೂಪಂ ಹಾಡು ನಾವು ಐದು ವರ್ಷದ ಹಿಂದೆ ರಚಿಸಿ ಬಿಡುಗಡೆ ಮಾಡಿದ್ದ ನವರಸಂ ಹಾಡಿನ ಕಾಪಿ ಎಂಬುದಾಗಿ ತೈಕುಡಂ ಬ್ರಿಜ್ ಎಂಬ ಸಂಸ್ಥೆ ಕೋರ್ಟ್ ಮೊರೆ ಹೋಗಿತ್ತು. ಅಂತೆಯೇ ವಿಚಾರಣೆ ನಡೆಸಿದ ಕೋರ್ಟ್ ಹಾಡಿನ ಪ್ರಸರಣವನ್ನು ನಿಲ್ಲಿಸುವಂತೆ ಆದೇಶ ಹೊರಡಿಸಿದೆ.
ತಡೆಯಾಜ್ಞೆ ತಂದಿರುವ ವಿಚಾರವನ್ನು ತೈಕುಡಂ ಬ್ರಿಜ್ ಮ್ಯೂಸಿಕ್ ಸಂಸ್ಥೆ, ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದೆ. ಅಂತೆಯೇ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದೆ.
ಇದನ್ನೂ ಓದಿ | Kantara Movie | ಕಾಂತಾರದ ವರಾಹ ರೂಪಂ ಹಾಡು ನವರಸಂ ಹಾಡಿನ ಕಾಪಿ? ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಮಲಯಾಳಂ ಸಂಗೀತ ತಂಡ