ದಸರಾ ಹಬ್ಬಕ್ಕೆ ಬರಲಿದೆ ರಿಷಭ್‌ ಶೆಟ್ಟಿಯ ಕಾಂತಾರ, ಕಥೆ ಏನಿರಬಹುದು? Vistara News
Connect with us

ಸಿನಿಮಾ

ದಸರಾ ಹಬ್ಬಕ್ಕೆ ಬರಲಿದೆ ರಿಷಭ್‌ ಶೆಟ್ಟಿಯ ಕಾಂತಾರ, ಕಥೆ ಏನಿರಬಹುದು?

ಕಾಂತಾರ ಯಾವಾಗ ರಿಲೀಸ್‌ ಆಗಲಿದೆ ಎಂಬ ಕಾತರಕ್ಕೆ ತೆರೆಬಿದ್ದಿದೆ. ದಸರಾದ ಜತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ ಎಂದು ರಿಷಭ್‌ ಶೆಟ್ರು ಅನೌನ್ಸ್‌ ಮಾಡಿದ್ದಾರೆ. ಹಾಗಿದ್ದರೆ ಯಾವಾಗ ರಿಲೀಸ್‌, ಏನಿರಬಹುದು ಸಿನಿಮಾ ಕಥೆ? ಈ ವರದಿ ಓದಿ

VISTARANEWS.COM


on

ಕಾಂತಾರ
Koo

ಬೆಂಗಳೂರು: ಧಿಗ್ಗನೆ ಹೊತ್ತಿ ಉರಿಯುವ ಜ್ವಾಲೆಗಳ ನಡುವೆ ಕಂಬಳದ ಕೋಣಗಳ ಭಾರಿ ತುರುಸಿನ ಓಟದ ಪೋಸ್ಟರ್‌ ಮೂಲಕ ಗಮನ ಸೆಳೆದ ʻಕಾಂತಾರʼ ಸಿನಿಮಾ ಈಗಾಗಲೇ ಸಾಕಷ್ಟು ಕಾತರವನ್ನು ಸೃಷ್ಟಿಸಿದೆ. ವಿಜಯ್‌ ಕಿರಗಂದೂರು ನಿರ್ಮಾಣ ಮತ್ತು ರಿಷಭ್‌ ಶೆಟ್ಟಿ ಅಭಿನಯ, ನಿರ್ದೇಶನದಿಂದಾಗಿ ಕುತೂಹಲ ಕೆರಳಿಸಿರುವ ಈ ಚಿತ್ರವನ್ನು ಮುಂದಿನ ದಸರಾ ಹಬ್ಬದೊಂದಿಗೆ ಸವಿಯಬಹುದು!
ಹೌದು, ಇಡೀ ಚಿತ್ರರಂಗ ಅಚ್ಚರಿ, ಬೆರಗಿನೊಂದಿಗೆ ಕಾಯುತ್ತಿರುವ ಕಾಂತಾರ ಸೆಪ್ಟೆಂಬರ್‌ 30ರಂದು ತೆರೆ ಕಾಣಲಿದೆ.

ʻದಸರಾದ ಜತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ.. ಸೆಪ್ಟೆಂಬರ್‌ 30ರಂದು ಬಯಲಾಟಕ್ಕೆ ಸಾಕ್ಷಿಯಾಗಿʼ ಎಂಬ ಟ್ಯಾಗ್‌ಲೈನ್‌ನೊಂದಿಗೆ ಸಿನಿಮಾ ಬಿಡುಗಡೆ ದಿನಾಂಕವನ್ನು ಸ್ವತಃ ರಿಷಭ್‌ ಶೆಟ್ಟಿ ಹಂಚಿಕೊಂಡಿದ್ದಾರೆ. ರಿಷಭ್‌ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್‌ ನ ಅಧಿಕೃತ ಟ್ವಿಟರ್‌ನಲ್ಲಿ ಈ ಮಾಹಿತಿ ನೀಡಲಾಗಿದೆ.

ರಿಷಭ್‌ ಶೆಟ್ಟಿ ಅವರ ನಿರ್ದೇಶನ ಹಾಗೂ ಅಭಿನಯದ ಕಾಂತಾರ ಚಿತ್ರವು ದಕ್ಷಿಣ ಕನ್ನಡ ಪ್ರಾಂತ್ಯದ ಸಾಂಪ್ರದಾಯಿಕ ಶ್ರೀಮಂತಿಕೆಯನ್ನು ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೈಲರ್‌ ರೋಮಾಂಚಕವಾಗಿದ್ದು, ಅದನ್ನು ಈಗಾಗಲೇ 21 ಲಕ್ಷ ಮಂದಿ ನೋಡಿದ್ದಾರೆ. ಅಭಿಮಾನಿಗಳಿಗೆ ಚಿತ್ರದ ಬಗ್ಗೆ ಇರುವ ಕುತೂಹಲಕ್ಕೆ ಇದು ಸಾಕ್ಷಿಯಾಗಿದೆ. ಟ್ರೇಲರ್‌ ಚಿತ್ರದ ಮೇಕಿಂಗ್‌ ಹಾಗೂ ಕಥೆ ಅದ್ಭುತವಾಗಿರಬಹುದು ಎಂಬ ಭರವಸೆ ಮೂಡಿಸಿದೆ.

ಕಾಂತಾರ
ಕಾಂತಾರ ಪೋಸ್ಟರ್

ಏನಿರಬಹುದು ಕಾಂತಾರದ ಕಥೆ?

ʼಕಾಂತಾರʼ ಎಂಬ ಶೀರ್ಷಿಕೆಯೇ ವಿಭಿನ್ನವಾಗಿದ್ದು, ಸಾಮಾನ್ಯವಾಗಿ ಇದರ ಅರ್ಥ ಸೂರ್ಯನ ಬಿಸಿಲೇ ಬೀಳದ ಕಾಡು ಎಂದರ್ಥ. ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರಸಂಗದಲ್ಲಿ ಶ್ರೀದೇವಿ ದುಷ್ಟರನ್ನು ಸದೆಬಡಿಯಲು ಕದಂಬ ಕಾಂತಾರದಲ್ಲಿ ನೆಲೆಸಿರುತ್ತಾಳೆ ಎಂದು ತೋರಿಸಲಾಗುತ್ತದೆ. ಕಂಬಳ ಕ್ಷೇತ್ರದಲ್ಲೀ ಕಾಂತಾವರ ಎಂಬ ಹೆಸರು ಜನಪ್ರಿಯವಾಗಿದೆ. ಇದೆಲ್ಲವನ್ನೂ ಜೋಡಿಸಿಕೊಂಡು ಕಾಂತಾರದ ಕಥೆ ಹೆಣೆದಿರುವ ಸಾಧ್ಯತೆ ಇದೆ.

ಕದಂಬ ಕೌಶಿಕೆ ರೂಪದಲ್ಲಿರುವ ಶ್ರೀದೇವಿ ಕಾಂತಾರದಲ್ಲಿ ನೆಲೆ ನಿಂತು ಆಕಾಶದಿಂದಲೇ ಭೂಮಿಗೆ ಇಳಿಸಲ್ಪಟ್ಟ ಸ್ವರ್ಣದುಯ್ಯಾಲೆಯಲ್ಲಿ ಕುಳಿತಿರುತ್ತಾಳೆ. ಅಲ್ಲಿಗೆ ಚಂಡ ಮುಂಡರು, ಶುಂಭ ನಿಶುಂಭರನ್ನು ಅಲ್ಲಿಗೇ ಬರುವಂತೆ ಮಾಡಿ ತರಿಯುತ್ತಾಳೆ. ಈ ಕಥೆಗೂ ಕಂಬಳಕ್ಕೂ ಏನನ್ನೋ ತಳುಕು ಹಾಕಿ ಕಥೆ ಹೆಣೆದಿರುವ ಬಗ್ಗೆ ಕುತೂಹಲಕಾರಿ ಚರ್ಚೆ ನಡೆಯತ್ತಿದೆ. ಇನ್ನೊಂದು ಕಡೆ ಇದೊಂದು ದೆವ್ವದ ಕಥೆ ಇರಬಹುದು ಎಂಬ ಮಾತೂ ಇದೆ. ಅಂತೂ ಎಲ್ಲರೂ ಮಾತನಾಡಿಕೊಳ್ಳುವಂತೆ ಮಾಡಿದೆ ಕಾಂತಾರ. ಇನ್ನೊಂದು ಊಹೆಯಂತೆ ಇದು ಕಂಬಳದೊಂದಿಗೆ ಬೆಸೆದುಕೊಂಡು ರೂಪಿಸಲಾದ ಕಾಡುಗಳ್ಳರ ಕಥೆಯೂ ಇರಬಹುದು. ಕಾಡಿಗೆ ಬೆಂಕಿ ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಟ ಕೂಟದ ಕಥೆಯೂ ಇರಬಹುದು ಎನ್ನಲಾಗುತ್ತಿದೆ.
ಕರಾವಳಿಯಿಂದಲೇ ಬಂದಿರುವ ರಿಷಭ್‌ ಶೆಟ್ಟಿ ಅಲ್ಲಿನ ನೇಟಿವಿಟಿಯನ್ನೇ ಬಳಸಿಕೊಂಡು ಕಥೆ ಮಾಡಿದ್ದಾರೆ. ಆದರೆ, ಅದನ್ನು ಇಡೀ ಕನ್ನಡ ಸಿನಿಮಾ ಲೋಕಕ್ಕೆ ಹೊಂದಿಕೊಳ್ಳುವಂತೆ ಡೆವಲಪ್‌ ಮಾಡಿರುವ ಸಾಧ್ಯತೆ ಇದೆ.

ರಿಷಭ್‌ ಶೆಟ್ಟಿ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಅಚ್ಯುತ್‌ ಕುಮಾರ್‌ ಮತ್ತು ಪ್ರಮೋದ್‌ ಶೆಟ್ಟಿ ಪ್ರಧಾನ ಪಾತ್ರದಲ್ಲಿದ್ದಾರೆ. ಪಂಚಮಿ ಗೌಡ ಚಿತ್ರದ ನಾಯಕಿ.

ಇದನ್ನೂ ಓದಿ: 777 Charlie : ವೇಸ್ಟ್‌ ಬಾಡಿ ಚಾರ್ಲಿ ಸೂಪರ್‌ ಹೀರೊ ಆಗಿದ್ದು ಹೀಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

Kannada New Movie: ʻಗರಡಿʼ ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ; ನವೆಂಬರ್ 10ರಂದು ತೆರೆಗೆ!

Kannada New Movie: ಹರಿಕೃಷ್ಣ ಅವರ ಜತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

VISTARANEWS.COM


on

Edited by

Kannada New Movie
Koo

ಬೆಂಗಳೂರು: ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ (Garadi Movie) ಚಿತ್ರದ (Kannada New Movie) ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರೆಗಮ ಕನ್ನಡ’ ಯೂಟ್ಯೂಬ್‌ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ ಅಖಾಡ” ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

“ಗರಡಿ” ಎಂದರೆ ಒಂದು ಊರನ್ನು ಕಾಯುವ ಪೊಲೀಸ್ ಠಾಣೆ ಇದ್ದ ಹಾಗೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ʻʻಹಿಂದೆ ಒಂದು ಊರಿನ ರಕ್ಷಣೆಗೆ “ಗರಡಿ” ಬಹು ಮುಖ್ಯವಾಗಿತ್ತು. ಊರಿನವರು ಸಹ ಗರಡಿ ಮನೆಯ ಕುಸ್ತಿಪಟುಗಳನ್ನು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿದ್ದರು. ಅಂತಹ “ಗರಡಿ” ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಗರಡಿ ಮನೆಯ ಯಜಮಾನನಾಗಿ ಬಿ.ಸಿ.ಪಾಟೀಲ್ ಅಭಿನಯಿಸಿದ್ದಾರೆ. ಅವರ ಶಿಷ್ಯನಾಗಿ ಸೂರ್ಯ ಅಭಿನಯಿಸಿದ್ದಾರೆ. ಇದು ಒಂದು ರೀತಿ ದ್ರೋಣಾಚಾರ್ಯ ಹಾಗೂ ಏಕಲವ್ಯನ ಕಥೆ ಎನ್ನಬಹುದು. ಇನ್ನು ಇಂದು ಬಿಡುಗಡೆಯಾಗಿರುವ ಹಾಡನ್ನು ಹರಿಕೃಷ್ಣ ಅದ್ಭುತವಾಗಿ ಸಂಯೋಜಿಸಿ ಹಾಡಿದ್ದಾರೆ. ಚಿತ್ರ ನವೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿʼʼ ಎಂದರು.

ಇದನ್ನೂ ಓದಿ: Kannada New Movie: `ಸೋಮು ಸೌಂಡ್ ಇಂಜಿನಿಯರ್’ ಸಿನಿಮಾದ ಫಸ್ಟ್‌ ಸಾಂಗ್‌ ಔಟ್‌!

“ಗರಡಿ” ಚಿತ್ರ ಆರಂಭವಾಗಿ ಈ ನವೆಂಬರ್ 14ಕ್ಕೆ ಎರಡು ವರ್ಷಗಳಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಈ ಚಿತ್ರ ಆರಂಭವಾಗಿತ್ತು. ದರ್ಶನ್ ಅವರು ಶೀರ್ಷಿಕೆ ಅನಾವರಣ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದ ಸಂದರ್ಭದಲ್ಲಿ (ನವೆಂಬರ್ 10) ಚಿತ್ರ ಬಿಡುಗಡೆಯಾಗುತ್ತದೆ. ಯೋಗರಾಜ್ ಭಟ್ ಅವರು ಬಹಳ ಶ್ರಮವಹಿಸಿ ಚಿತ್ರವನ್ನು ಉತ್ತಮವಾಗಿ ನಿರ್ದೇಶನ ಮಾಡಿದ್ದಾರೆ. ನಾನು ಈಗಾಗಲೇ ಚಿತ್ರವನ್ನು ಸಾಕಷ್ಟು ಸಲ ನೋಡಿ ಖುಷಿ ಪಟ್ಟಿದ್ದೇನೆ. ನಿಮಗೂ ಚಿತ್ರ ಹಿಡಿಸಲಿದೆʼʼ ಎಂದರು ಹಿರಿಯ ನಟ ಬಿ.ಸಿ.ಪಾಟೀಲ್.

ʻʻಈ ಚಿತ್ರದಲ್ಲೂ ನನ್ನ ಹೆಸರು ಸೂರ್ಯ ಅಂತ. ಎಲ್ಲರೂ “ಗರಡಿ ಸೂರಿ” ಅಂತ ಕರೆಯುತ್ತಿರುತ್ತಾರೆ. ಈ ಚಿತ್ರದಲ್ಲಿ ನನಗೆ ಅವಕಾಶ ಸಿಗಲು ದರ್ಶನ್ ಅವರು ಕಾರಣ. ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಬಿಡುಗಡೆಯಾಗಿರುವ ಟೈಟಲ್ ಸಾಂಗ್‌ನಲ್ಲಿ ನಾನು ಸಖತ್ ಡ್ಯಾನ್ಸ್ ಮಾಡಿದ್ದೇನೆ. ಯೋಗರಾಜ್ ಭಟ್ ಅವರ ಸಾಹಿತ್ಯ ಹಾಗೂ ಹರಿಕೃಷ್ಣ ಅವರ ಸಂಗೀತದಲ್ಲಿ ಹಾಡು ಅದ್ಭುತವಾಗಿ ಮೂಡಿಬಂದಿದೆʼʼ ಎನ್ನುತ್ತಾರೆ ನಾಯಕ ಸೂರ್ಯ.

ನಾಯಕಿ ಸೋನಲ್ ಮೊಂಥೆರೋ, ಚಿತ್ರದಲ್ಲಿ ನಟಿಸಿರುವ ಸುಜಯ್, ಧರ್ಮಣ್ಣ, ರಾಘು, ಛಾಯಾಗ್ರಾಹಕ ನಿರಂಜನ್ ಬಾಬು, ನೃತ್ಯ ನಿರ್ದೇಶಕ ಧನಂಜಯ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ವನಜಾ ಪಾಟೀಲ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕಿ ಸೃಷ್ಟಿ ಪಾಟೀಲ್ “ಗರಡಿ” ಚಿತ್ರ ಸಾಗಿ ಬಂದ ಬಗ್ಗೆ ವಿವರಣೆ ನೀಡಿದರು.

Continue Reading

South Cinema

Rakhi Sawant: ರಾಖಿ ಸಾವಂತ್‌ ಬಯೋಪಿಕ್‌ಗೆ ರಿಷಬ್‌ ಶೆಟ್ಟಿ ನಿರ್ದೇಶನ; ನಟಿಯ ಹೊಸ ಆಸೆ ಪೂರೈಸ್ತಾರಾ ಶೆಟ್ರು?

Rakhi Sawant: ತನ್ನ ಜೀವನ ಚರಿತ್ರೆಯನ್ನು ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ ರಾಖಿ ಸಾವಂತ್‌.

VISTARANEWS.COM


on

Edited by

Rakhi Sawant Rishab Shetty
Koo

ಬೆಂಗಳೂರು: ರಾಖಿ ಸಾವಂತ್ (Rakhi Sawant) ಆಗಾಗ ವೈಯಕ್ತಿಕ ವಿಚಾರಗಳಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಹೆಚ್ಚಾಗಿ ಮಾಜಿ ಪತಿ ಆದಿಲ್ ಖಾನ್ ದುರಾನಿ (Adil Khan Durrani ) ಕುರಿತ ವಿಚಾರಗಳಿಗೆ ಸೌಂಡ್‌ ಮಾಡುತ್ತಲೇ ಇರುತ್ತಾರೆ. ಆದರೀಗ ನಟಿ ತಮ್ಮ ಬಯೋಪಿಕ್‌ ಬಗ್ಗೆ ಆಸೆಯನ್ನ ವ್ಯಕ್ತಪಡಿಸಿದ್ದಾರೆ. ತನ್ನ ಜೀವನ ಚರಿತ್ರೆಯನ್ನು ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ ರಾಖಿ ಸಾವಂತ್‌.

ಕೆಲವು ದಿನಗಳ ಹಿಂದೆ ರಾಖಿ ಸಾವಂತ್​ ಅವರ ಮಾಜಿ ಪತಿ ಆದಿಲ್​ ಖಾನ್​ ಮನೆ ಮುಂದೆ ಬುಲ್ಡೋಜರ್​ ತಂದು ಹೈಡ್ರಾಮಾ ಮಾಡಿದ್ದರು. ಮದುವೆ ಬಳಿಕ ತಾವು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದಾಗಿ ಈಗಾಗಲೇ ರಾಖಿ ಸಾವಂತ್ ಹೇಳಿದ್ದಾರೆ. ಅವರು ಫಾತಿಮಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಮೆಕ್ಕಾ ಮದೀನಾಗೂ ಅವರು ಹೋಗಿ ಬಂದಿದ್ದಾರೆ. ಆಗಾಗ ತಮ್ಮ ಹೊಸ ಅವತಾರಗಳಿಂದ ಮಾಧ್ಯಮದ ಮುಂದೆ ಅದೆಷ್ಟೋ ಬಾರಿ ಅತ್ತಿದ್ದೂ ಇದೆ. ಇದೀಗ ರಾಖಿ ಸಾವಂತ್‌ ಜೀವನ ಕಥೆ ಸಿನಿಮಾವಾಗುತ್ತಿದೆಯಂತೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ ಎಂದು ರಾಖಿ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ ನಿರ್ದೇಶನ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್​ ಶೆಟ್ಟಿ ಹೆಚ್ಚು ಇಷ್ಟ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರ ಹೇಳಿದ್ದಾರೆ.

ಇದನ್ನೂ ಓದಿ: Rakhi Sawant: ನನ್ನ ಸಾವಿಗೆ ರಾಖಿ ಸಾವಂತ್ ಕಾರಣ ಎಂದ ಆದಿಲ್; ಮಾಜಿ ಪತಿಯಿಂದ ಮತ್ತೊಂದು ದೂರು!

ಆದಿಲ್ ಖಾನ್ ದುರಾನಿ ಅವರು ರಾಖಿ ಸಾವಂತ್ ವಿರುದ್ಧ ಹಲವು ಆರೋಪಗಳಿಗೆ ತೆರೆ ಎಳೆದಿದ್ದಾರೆ. ತನ್ನ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲ್ಲೆ ನಡೆಸಿದ್ದಾರೆ. ರಿತೇಶ್ ಜತೆ ಮದುವೆಯಾಗಿರುವಾಗಲೇ ರಾಖಿ ತನ್ನನ್ನು ಮದುವೆಯಾಗಿದ್ದಾಳೆ ಎಂದು ಆದಿಲ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಮದುವೆಯಾದ ಮೇಲೂ ಆಕೆ ಮೊದಲ ಪತಿ ರಿತೇಶ್​ (Ritesh) ಜತೆ ಸಂಬಂಧವನ್ನೂ ಇಟ್ಟುಕೊಂಡಿದ್ದಳು ಎಂದಿದ್ದರು. ನನ್ನದಲ್ಲದ ತಪ್ಪಿಗೆ ನಾನು ಜೈಲು ಅನುಭವಿಸುವಂತಾಯಿತು. ರಾಖಿ ನನ್ನನ್ನು ಟ್ರ್ಯಾಪ್​ ಮಾಡಿದಳು ಎಂದೆಲ್ಲಾ ಹೇಳಿದ್ದರು. ಇದಾದ ಬಳಿಕ ರಾಖಿ ಸಾವಂತ್​ ಪತ್ರಿಕಾಗೋಷ್ಠಿ ಕರೆದು, ಆದಿಲ್​ ವಿರುದ್ಧ ಕಿಡಿ ಕಾರಿ ಪತಿ ಹೇಗೆಲ್ಲ ಮೋಸ ಮಾಡಿದರು ಎಂದು ತಿಳಿಸಿದ್ದರು.

Continue Reading

South Cinema

Nirup Bhandari: ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!

Nirup Bhandari: ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

VISTARANEWS.COM


on

Edited by

Nirup Bhandari Actor diganth
Koo

ಬೆಂಗಳೂರು: ದೂದ್‌ ಪೇಡ ದಿಗಂತ್ (Actor diganth)​ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ‘ (edagaiye apaghatakke karana) ಸಿನಿಮಾ ವಿಭಿನ್ನವಾದ ಕಾನ್ಸೆಪ್ಟ್​ ಮೂಲಕ ಈಗಾಗಲೇ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇತ್ತೀಚೆಗಷ್ಟೆ ಆಗಸ್ಟ್​ 13ರಂದು ‘ವಿಶ್ವ ಎಡಗೈ ದಿನ’ ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಮಾಡಲಾಗಿತ್ತು. ವಿನೂತನ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿರುವ ‘ಎಡಗೈ’ ತಂಡಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ಯಾರು ಅಲ್ಲ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ (Nirup Bhandari). ಮೊದಲ ಬಾರಿಗೆ ನಿರೂಪ್ ಮತ್ತು ದಿಗಂತ್ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರರ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೊ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್.

ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ. ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಅಂದಹಾಗೆ ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ.

ಇದನ್ನೂ ಓದಿ: Edagaiye Apaghatakke Karana: ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್!

ʻಹೈಫನ್ ಪಿಕ್ಚರ್ಸ್ʼ ಬ್ಯಾನರ್’ಅಡಿಯಲ್ಲಿ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Lady Super Star: ʼಜವಾನ್‌ʼ ನಯನತಾರಾ ಶ್ರೀಮಂತ ನಟಿ! ಆಸ್ತಿ ಮೌಲ್ಯ ಎಷ್ಟು?

Lady super star: ನಯನತಾರಾ ಸದ್ಯ ‘ಜವಾನ್‌’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ದಕ್ಷಿಣ ಭಾರತದ ಲೇಡಿ ಸೂಪರ್‌ ಸ್ಟಾರ್‌ (lady super star) ಆಗಿದ್ದ ಅವರು ಇದೀಗ ಬಾಲಿವುಡ್‌ನಲ್ಲೂ ಮಿಂಚುತ್ತಿದ್ದಾರೆ. ಅವರ ಆಸ್ತಿಯ ಒಟ್ಟು ಮೌಲ್ಯ 200 ಕೋಟಿ ರೂ. (200 crore) ಎಂದು ಅಂದಾಜಿಸಲಾಗಿದೆ.

VISTARANEWS.COM


on

Edited by

nayanathara
Koo

ಚೆನ್ನೈ: ದಕ್ಷಿಣ ಭಾರತದ ಲೇಡಿ ಸೂಪರ್‌ ಸ್ಟಾರ್‌ (Lady super star) ನಯನತಾರಾ (Nayanthara) ಸದ್ಯ ‘ಜವಾನ್‌’ (Jawan) ಹಿಂದಿ ಚಿತ್ರದ ಗೆಲುವಿನ ಗುಂಗಿನಲ್ಲಿದ್ದಾರೆ. ಮೊದಲ ಬಾರಿಗೆ ಬಾಲಿವುಡ್‌ಗೆ (bollywood) ಕಾಲಿಟ್ಟ ಅವರು ಜಾಕ್‌ಪಟ್‌ ಹೊಡೆದಿದ್ದಾರೆ. ಹಿಂದಿಯ ಮೊದಲ ಚಿತ್ರದಲ್ಲೇ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ (Shah Rukh Khan) ಜತೆ ತೆರೆ ಹಂಚಿಕೊಳ್ಳುವ ಅವಕಾಶ ಪಡೆದಿದ್ದ ಅವರು ಅದನ್ನು ಉತ್ತಮವಾಗಿ ಬಳಸಿಕೊಂಡು ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಸದ್ಯ ನಯನತಾರಾ ವರ್ಚಸ್ಸು ದೇಶಾದ್ಯಂತ ಹರಡಿದೆ.

ದುಬಾರಿ ಸಂಭಾವನೆ ಪಡೆಯುವ ನಾಯಕಿ

ನಯನತಾರಾ ಚಿತ್ರರಂಗಕ್ಕೆ ಕಾಲಿಟ್ಟು 20 ವರ್ಷಗಳೇ ಕಳೆದಿವೆ. ಆದರೆ ಇಂದಿಗೂ ಹಿಂದಿನಷ್ಟೇ ಬೇಡಿಕೆ ಉಳಿಸಿಕೊಂಡಿರುವುದು ಅವರ ವಿಶೇಷತೆ. ದುಬಾರಿ ಅಂಭಾವನೆ ಪಡೆಯುವ ದಕ್ಷಿಣ ಚಿತ್ರರಂಗದ ನಾಯಕಿಯರಲ್ಲಿ ಒಬ್ಬರಾದ ನಯನತಾರಾ ಅವರ ಆಸ್ತಿಯ ಒಟ್ಟು ಮೌಲ್ಯ ಸುಮಾರು 200 ಕೋಟಿ ರೂ. ಮೂಲಗಳ ಪ್ರಕಾರ ಅವರು ಕೋಟ್ಯಾಂತರ ರೂ. ಬೆಲೆಬಾಳುವ 4 ಮನೆಗಳನ್ನು ಹೊಂದಿದ್ದಾರೆ. ಮುಂಬೈ ಮತ್ತು ತಮಿಳುನಾಡಿನಲ್ಲಿ ಈ ಐಷರಾಮಿ ಬಂಗಲೆಗಳಿವೆ ಎನ್ನಲಾಗಿದೆ.

100 ಕೋಟಿ ರೂ. ಮೌಲ್ಯದ ಬಂಗಲೆ

ಇತ್ತೀಚೆಗೆ ನಯನತಾರಾ ತಮ್ಮ ಪತಿ ವಿಘ್ನೇಶ್‌ ಶಿವನ್ ಜತೆ ಸೇರಿಕೊಂಡು 4BHK ಫ್ಲ್ಯಾಟ್‌ ಖರೀದಿಸಿದ್ದಾರೆ. ಇದು 100 ಕೋಟಿ ರೂ. ಮೌಲ್ಯ ಹೊಂದಿದೆ ಎಂದು ಅಂದಾಜಿಸಲಾಗಿದೆ. ಇದು ಸಿನಿಮಾ ಹಾಲ್‌, ಈಜುಕೊಳ, ಅತ್ಯಾಧುನಿಕ ಜಿಮ್‌ ಅನ್ನು ಒಳಗೊಂಡಿದೆ. ಅದೇ ರೀತಿ ʼಸೂಪರ್‌ʼ ಹಿರೋಯಿನ್‌ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ಸುಮಾರು 30 ಕೋಟಿ ರೂ. ಬೆಲೆ ಬಾಳುವ ಎರಡು ಅಪಾರ್ಟ್ಮೆಂಟ್‌ ಹೊಂದಿದ್ದಾರೆ.

ಐಷರಾಮಿ ಕಾರುಗಳ ಒಡತಿ

ಇಷ್ಟೇ ಅಲ್ಲದೆ ನಯನತಾರಾ ವಿವಿಧ ರೀತಿಯ ಐಷಾರಾಮಿ ಕಾರುಗಳ ಒಡತಿಯೂ ಹೌದು. 1.76 ಕೋಟಿ ರೂ. ಬೆಲೆಬಾಳುವ BMW 7 ಸೀರಿಸ್‌ನ ಕಾರು, 1 ಕೋಟಿ ರೂ. ಬೆಲೆಯ Mercedes GLS350D ಮತ್ತು BMW 5 ಸೀರಿಸ್‌ ಕಾರುಗಳನ್ನು ಹೊಂದಿದ್ದಾರೆ. ಜೊತೆಗೆ ಬಾಲಿವುಡ್‌ ನಟಿಯರಾದ ಶಿಲ್ಪಾ ಶೆಟ್ಟಿ, ಪ್ರಯಾಂಕಾ ಚೋಪ್ರಾ, ಮಾಧುರಿ ದೀಕ್ಷಿತ್‌ ಅವರಂತೆ ಪ್ರೈವೇಟ್‌ ಜೆಟ್‌ ಅನ್ನೂ ಹೊಂದಿದ್ದಾರೆ. ಇದರ ಬೆಲೆ 50 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್‌ ಫೋಟೊಸ್ ಔಟ್‌!

ಉದ್ಯಮಿಯೂ ಹೌದು

ನಯನತಾರಾ ಯಶಸ್ವಿ ನಟಿಯ ಜೊತೆಗೆ ಯಶಸ್ವಿ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ದ ಲಿಪ್‌ ಬಾಮ್‌ ಕಂಪೆನಿ(The Lip Balm Company) ಮತ್ತು ಯುಎಇ ಮೂಲದ ಎಣ್ಣೆ ಕಂಪೆನಿ ಹೊಂದಿದ್ದಾರೆ. ಮಾತ್ರವಲ್ಲ ವಿಘ್ನೇಶ್‌ ಶಿವನ್‌ ಜತೆ ಪ್ರೊಡಕ್ಷನ್‌ ಹೌಸ್‌ Rowdy Pictures Bannerನ ಸಹ ಮಾಲಕಿಯಾಗಿದ್ದಾರೆ.

ಸಾವಿರ ಕೋಟಿ ರೂ. ಕ್ಲಬ್‌ ಸೇರಿದ ʼಜವಾನ್‌ʼ

ಸದ್ಯ ʼಜವಾನ್‌ʼ ಚಿತ್ರ ಸಾವಿರ ಕೋಟಿ ರೂ. ಕ್ಲಬ್‌ ಸೇರಿದೆ. ಈ ಚಿತ್ರ ಈಗಾಗಲೇ ವಿಶ್ವಾದ್ಯಂತ ಸಾವಿರ ಕೋಟಿ ರೂ. ಗಳಿಸಿ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕಾಗಿ ನಯನತಾರಾ 12-15 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ. 2003ರಲ್ಲಿ ʼಮನಸಿನಕ್ಕರೆʼ ಮಲೆಯಾಳಂ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಈಗ ಪಂಚ ಭಾಷಾ ತಾರೆಯಾಗಿದ್ದಾರೆ. 2010ರಲ್ಲಿ ʼಸೂಪರ್ʼ ಚಿತ್ರದಲ್ಲಿ ಉಪೇಂದ್ರ ಜತೆ ತೆರೆ ಹಂಚುವ ಮೂಲಕ ಕನ್ನಡಕ್ಕೂ ಕಾಲಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Continue Reading
Advertisement
chain snatchers murderes
ಕ್ರೈಂ6 mins ago

Murder Case: ಸರಗಳ್ಳರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

Kiran Bedi tihar jail
ಅಂಕಣ23 mins ago

Raja Marga Column : ಕಿರಣ್‌ ಬೇಡಿ IPS ; ವರ್ಷ 74 ಆದರೂ ಇಂದಿಗೂ ಅವರು ಯೂತ್ ಐಕಾನ್!

castor oil
ಆರೋಗ್ಯ37 mins ago

Hair Care Tips: ಹರಳೆಣ್ಣೆಯನ್ನು ಹೇಗೆ ಬಳಸುವ ಮೂಲಕ ಉದ್ದವಾದ ಕಪ್ಪುಗೂದಲು ಪಡೆಯಬಹುದು ಗೊತ್ತೇ?

Vistara Editorial, Indian Government must act against Khalistani Terrorists
ದೇಶ2 hours ago

ವಿಸ್ತಾರ ಸಂಪಾದಕೀಯ: ಖಲಿಸ್ತಾನಿ ಭಯೋತ್ಪಾದಕರ ಹೆಡೆಮುರಿ ಕಟ್ಟಲೇಬೇಕಿದೆ

dina bhavishya September 27
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ7 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ8 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ8 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ8 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌