Site icon Vistara News

Karimani Malika Ninalla: ನಂದಿನಿಗೆ ʻಕರಿಮಣಿ ಮಾಲೀಕʼ ರಾಹುಲ್ಲಾ ಅಂತೆ: ನೀವೆ ನೋಡಿ ಈ ವಿಡಿಯೊ!

Karimani Malika Ninalla reels By Vicky Pedia

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ (Upendra Movie) ನಟನೆಯ “ಉಪೇಂದ್ರʼ ಸಿನಿಮಾದ “ಓ ನಲ್ಲ.. ಏನಿಲ್ಲ” ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ʻಕರಿಮಣಿ ಮಾಲೀಕʼ ನೀನಲ್ಲ ಜತೆಗೆ “ರಾಹುಲ್ಲಾ.. ರಾಹುಲ್ಲಾ” ಕೂಡ ಸಖತ್‌ ಟ್ರೆಂಡಿಂಗ್‌ನಲ್ಲಿಯೇ ಇದೆ. ಇದೀಗ ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್ ಕೂಡ ರೀಲ್ಸ್‌ ಹಂಚಿಕೊಂಡಿದ್ದಾರೆ. ಕರಿಮಣಿ ಜತೆ ʻರಾಹುಲ್ಲಾʼ ಸಿಂಕ್‌ ಮಾಡಿ ನೋಡುಗರಿಗೆ ಸಖತ್‌ ಕಿಕ್‌ ಕೊಟ್ಟಿದ್ದಾರೆ.

ಉಪೇಂದ್ರ’ ಸಿನಿಮಾದ “ಓ ನಲ್ಲ..” ಹಾಡು ಇಷ್ಟೊಂದು ಟ್ರೆಂಡಿಂಗ್‌ನಲ್ಲಿ ಇರಲು ಕಾರಣ ಕಲ್ಯಾಣ ಕರ್ನಾಟಕ ಭಾಗದ ಕನಕ ಅವರು. ಕನಕ ತಮ್ಮ ಇನ್‌ಸ್ಟಾದಲ್ಲಿ ಪ್ರೀತಿಸಿದ ಹುಡುಗಿ ಕೈ ಕೊಟ್ಟು ಹೋದಾಗ ಆಕೆ ಹೇಳಿದ ಮಾತುಗಳು ಎಂದು ಹೇಳಿ ಈ ಹಾಡಿನ ಸಾಲುಗಳನ್ನು ಪೋಸ್ಟ್‌ ಮಾಡಿದ್ದರು. ಇದು ಸಖತ್‌ ವೈರಲ್‌ ಆಗಿತ್ತು. ಅಲ್ಲಿಂದ ಹಲವಾರು ಪ್ರತಿಭೆಗಳು ರೀಲ್ಸ್‌ ಹಂಚಿಕೊಂಡಿದೆ. ಅದರ ಜತೆಗೆ ಇನ್ನು ಹೋಟೆಲ್ ಉದ್ಯಮಿ ಹಾಗೂ ಬಾಣಸಿಗ ಚಂದ್ರು ಮಾಡಿದ ತಮ್ಮ ವಿಡಿಯೋಗಳಲ್ಲಿ “ರಾಹುಲ್ಲಾ.. ರಾಹುಲ್ಲಾ” ಎಂದು ಹೇಳಿರುವುದು ವೈರಲ್ ಆಗಿಬಿಟ್ಟಿದೆ. ಕೆಲವರು ಇದನ್ನು ಸಖತ್ ಟ್ರೋಲ್ ಸಹ ಮಾಡುತ್ತಿದ್ದಾರೆ.

ಇದನ್ನೂ ಓದಿ: Centre vs South: ಕರ್ನಾಟಕ ಮಾದರಿ; ಇಂದು ಕೇಂದ್ರದ ವಿರುದ್ಧ ದಿಲ್ಲಿಯಲ್ಲಿ ಕೇರಳ, ತಮಿಳುನಾಡು ಸರ್ಕಾರಗಳ ಪ್ರತಿಭಟನೆ

ಇದೀಗ ನಾನು ನಂದಿನಿ ರೀಲ್ಸ್‌ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ (vickypedia)ರೀಲ್ಸ್‌ ಹಂಚಿಕೊಂಡಿದ್ದಾರೆ. ಎರಡೂ ವೈರಲ್ ರೀಲ್ಸ್‌ ಸೇರಿಸಿ ತಮ್ಮದೇ ಶೈಲಿಯಲ್ಲಿ ಹೊಸ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೊಗೂ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. ಸ್ನೇಹಿತರಾದ ಅಮಿತ್ ಚಿಟ್ಟೆ, ಸಚಿತ್ ಸಾಥ್ ಕೊಟ್ಟಿದ್ದಾರೆ. ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ ಸಖತ್‌ ಮಜವಾಗಿ ಅಭಿನಯಿಸಿದ್ದಾರೆ. ವಿಕ್ಕಿಪೀಡಿಯಾದ ವಿಕಾಸ ಮತ್ತು ತಂಡದವರನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

1999ರಲ್ಲಿ ʻಉಪೇಂದ್ರʼ ಸಿನಿಮಾ ಬಿಡುಗಡೆಯಾಗಿತ್ತು. 1999ರ ಅಕ್ಟೋಬರ್ 22ಕ್ಕೆ ಬಿಡುಗಡೆಯಾದ ಈ ಸಿನಿಮಾ ಹಿಟ್ ಆಗಿತ್ತು. ನಟಿ ಪ್ರೇಮಾ, ರವೀನಾ ಟಂಡನ್, ದಾಮಿನಿ ಮೂವರು ನಾಯಕಿಯರಾಗಿದ್ದರು. ಈ ಹಾಡು ಮಾತ್ರವಲ್ಲ ಸಿನಿಮಾದ ಇತರೆ ಹಾಡುಗಳು ಕೂಡ ಭಾರಿ ಸದ್ದು ಮಾಡಿದ್ದವು.

ಏನಿಲ್ಲ..ಏನಿಲ್ಲ ಪದ ಹುಟ್ಟಿದ್ದು ಹೇಗೆ?

ಆಗ ಉಪೇಂದ್ರ ಹಾಗೂ ಪ್ರೇಮಾ ಮಧ್ಯೆ ಏನೋ ಇದೆ ಎನ್ನುವ ಗಾಸಿಪ್‌ಗಳು ಹುಟ್ಟಿಕೊಂಡಿದ್ದವು. ಹಾಗೇನೂ ಇಲ್ಲ ಎಂದು ಹೇಳಲು ʻಉಪೇಂದ್ರʼ ಸಿನಿಮಾದಲ್ಲಿ ಗುರು ಕಿರಣ್ ಈ ಹಾಡು ಮಾಡಲು ಪ್ಲಾನ್ ಮಾಡಿದ್ದರು. ಏನಿಲ್ಲ ಏನಿಲ್ಲ ಅಂತಲೇ ಶುರು ಮಾಡಿದ್ದರು. ಹಾಗೆ ಏನೀಲ್ಲ ಏನೀಲ್ಲ ನನ್ನ ನಿನ್ನ ನಡುವೆ ಏನಿಲ್ಲ… ಹೀಗೆ ಹಲವು ಪದಗಳು ಸೇರಿ ಒಂದು ಪಲ್ಲವಿ ಕೂಡ ಆಗಿತ್ತು. ಉಪ್ಪಿ ಹೆಸರಿನ ಸಿನಿಮಾಕ್ಕೂ ಗುರುಕಿರಣ್ ಸಂಗೀತ ಕೊಟ್ಟಿದ್ದರು.

Exit mobile version