Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌! - Vistara News

ಸಿನಿಮಾ

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

Karnataka Budget Session 2024: ಸಮಾಜ ಕಲ್ಯಾಣ ಇಲಾಖೆ ಅನುದಾನಗಳನ್ನ ಮಂಡಿಸುವ ಮುನ್ನ ಸಿಎಂ ಸಿದ್ದರಾಮಯ್ಯನವರು ʻಡೇರ್ ಡೆವಿಲ್ ಮುಸ್ತಫಾʼ ಚಿತ್ರದ ಎರಡು ಸಾಲುಗಳನ್ನ ಸದನದಲ್ಲಿ ಹೇಳಿದ್ದಾರೆ.

VISTARANEWS.COM


on

Karnataka Budget Session 2024 siddaramaiah use cinema Lines
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಈ ಬಾರಿಯ ಪ್ರಸಕ್ತ ಬಜೆಟ್‌ನಲ್ಲಿ ಕೆಲವು ಸಿನಿಮಾಗಳಲ್ಲಿನ ಸಾಲುಗಳನ್ನು ಬಳಸಿಕೊಳ್ಳಲಾಗಿದೆ. ಬಜೆಟ್ ಭಾಷಣದ ಆರಂಭದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಾ. ರಾಜಕುಮಾರ್ ಅವರ ʻಬಂಗಾರದ ಮನುಷ್ಯʼ ಸಿನಿಮಾದ ಹಾಡಿನ ಸಾಲುಗಳನ್ನು ಹೇಳುತ್ತ ಬಜೆಟ್ ಮಂಡನೆಯನ್ನು ಶುರು ಮಾಡಿದರು.

ʻಬಂಗಾರದ ಮನುಷ್ಯʼ ಮಾತ್ರವಲ್ಲದೆ ಕಳೆದ ವರ್ಷ ಬಿಡುಗಡೆಯಾದ ಡಾಲಿ ಧನಂಜಯ ನಿರ್ಮಾಣದ ಶಶಾಂಕ್ ಸೋಗಲ್ ನಿರ್ದೇಶನದ ʻಡೇರ್ ಡೆವಿಲ್‌ ಮುಸ್ತಫಾʼ ಸಿನಿಮಾದ ಸಾಲುಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅನುದಾನಗಳನ್ನ ಮಂಡಿಸುವ ಮುನ್ನ ಸಿಎಂ ಸಿದ್ದರಾಮಯ್ಯನವರು ʻಡೇರ್ ಡೆವಿಲ್ ಮುಸ್ತಫಾʼ ಚಿತ್ರದ ಎರಡು ಸಾಲುಗಳನ್ನು ಸದನದಲ್ಲಿ ಹೇಳಿದ್ದಾರೆ. “ಒಂದು ತೋಟದಲ್ಲಿ ನೂರು ಹೂವು ಅರಳಲಿ, ಎಲ್ಲಾ ಕೂಡಿ ಆಡುವಂತಹ ಗಾಳಿ ಬೀಸಲಿ” ಎಂಬ ಸಾಲುಗಳನ್ನ ಹೇಳುವ ಮೂಲಕ ಸಮಾಜ ಕಲ್ಯಾಣ ಇಲಾಖೆಗೆ ಕೊಟ್ಟಿರುವ ಅನುದಾನವನ್ನು ಮಂಡಿಸಿದ್ದಾರೆ.

ಇದನ್ನೂ ಓದಿ: Karnataka Budget Session 2024: ಮಹಿಳೆಯರಿಗೆ ಗೃಹಲಕ್ಷ್ಮಿಯೇ ಹೈಲೈಟ್‌; ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರ ಮಾಸಾಶನ ಹೆಚ್ಚಳ

ನಟ ಡಾಲಿ ಧನಂಜಯ್ ಅವರು ʻಡೇರ್ ಡೆವಿಲ್ ಮುಸ್ತಫಾʼ ಸಿನಿಮಾವನ್ನು ನಿರ್ಮಾಣ ಹಾಗೂ ಪ್ರಸ್ತುತಪಡಿಸಿದ್ದರು. ಅದರ ಜತೆಗೆ ಸಿನಿಮಾದ ಒಂದಷ್ಟು ವಿಭಾಗಗಳಲ್ಲಿ ಕೆಲಸ ಮಾಡಿದ್ದರು. ಈ ಸಾಲುಗಳನ್ನು ಕೂಡ ಧನಂಜಯ ಅವರೇ ಬರೆದಿದ್ದರು. ಇನ್ನು ವಿಶೇಷವೆಂದರೆ ಇತ್ತೀಚಿಗಷ್ಟೇ ಡಾಲಿ ಧನಂಜಯ್ ಅವರು ಲಿಡ್ಕರ್ ಸಂಸ್ಥೆಗೆ ಬ್ರ್ಯಾಂಡ್‌ ಅಂಬಾಸೆಡರ್ ಆಗಿ ಆಯ್ಕೆ ಆಗಿದ್ದರು. ಈ ಬಾರಿಯ ಮುಖ್ಯಮಂತ್ರಿಗಳು ಸೂಟ್‌ಕೇಸ್‌ ಬಿಟ್ಟು ಲಿಡ್ಕರ್ ಬ್ಯಾಗ್‌ನಲ್ಲಿ ಬಜೆಟ್ ಪ್ರತಿಗಳನ್ನು ತೆಗೆದುಕೊಂಡು ವಿಧಾನಸೌಧ ಪ್ರವೇಶ ಮಾಡಿದರು. ಒಟ್ಟಾರೆ ಈ ಬಾರಿಯ ಬಜೆಟ್‌ನಲ್ಲಿ ನಟ ಡಾಲಿ ಧನಂಜಯ್ ಹಾಗೂ ಅವರ ತಂಡ ಪರೋಕ್ಷವಾಗಿ ಭಾಗಿಯಾದಂತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading

Latest

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

VISTARANEWS.COM


on

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಸುದ್ದಿ ಬರ್ತಿದೆ. ಇದೀಗ ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರೀಕರಣಕ್ಕೂ ಮೊದಲು ನಿರ್ದೇಶಕರು ಈ ದೃಶ್ಯಗಳು ನಟಿಯ ಕಂಫರ್ಟ್ ಜೋನ್ ಒಳಗೇ ಇರುತ್ತವೆ ಎಂದು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಚಿತ್ರೀಕರಣ ಮುಗಿದ ನಂತರ ಔಟ್‌ಪುಟ್ ನೋಡಿದ ಕಿಯಾರಾ ಅವರಿಗೆ ಆ ದೃಶ್ಯಗಳು ತೆರೆಯ ಮೇಲೆ ಅತಿ ಎನಿಸಿದೆಯಂತೆ. ಈ ಕಾರಣದಿಂದ ಅವರು ದೃಶ್ಯಗಳನ್ನು ಎಡಿಟ್ ಮಾಡಲು ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ಮಾನ್ಸ್‌ಟರ್ ಮೈಂಡ್ ಕ್ರಿಯೇಷನ್ಸ್’ ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಜೂನ್ 4ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ರಿಲೀಸ್ ದಿನಾಂಕ ಸದ್ಯಕ್ಕೆ ಮುಂದೂಡಿಕೆ ಆಗಿದೆ. ಹೊಸ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Continue Reading
Advertisement
Latest9 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest9 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ9 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest10 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest12 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest14 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest1 day ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ1 day ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌