Site icon Vistara News

Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ

2018 Mollywood Film

ಬೆಂಗಳೂರು: ಜೂಡ್​ ಆಂಥೊನಿ ಜೋಸೆಫ್​ ನಿರ್ದೇಶನದ ನೈಜ ಘಟನೆ ಆಧಾರಿತ ಮಲಯಾಳಂ `2018′ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಇದೀಗ ಈ ಸಿನಿಮಾ ಕನ್ನಡಿಗರ ಹೃದಯವನ್ನೂ ಗೆಲ್ಲುತ್ತಿದೆ. ಇದೀಗ ನಟ ಕಿಚ್ಚ ಸುದೀಪ್‌ (Kiccha Sudeep) ಟ್ವೀಟ್‌ ಮಾಡಿ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.

ʻʻಕೇರಳದಲ್ಲಿ 2018ರ ಪ್ರವಾಹದ ಸಂದರ್ಭದಲ್ಲಿ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಕೇರಳ ಚಲನಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾ ಆಗಿ ಹೊರಹೊಮ್ಮಿದೆ. ಕನ್ನಡಿಗರ ಹೃದಯವನ್ನೂ ಗೆಲ್ಲುತ್ತಿದೆ. ಅಭಿನಂದನೆಗಳು’ ಎಂದು ಟ್ವೀಟ್‌ ಮಾಡಿದ್ದಾರೆ ಕಿಚ್ಚ ಸುದೀಪ್‌.

ಬಿಡುಗಡೆಯಾದಾಗಿನಿಂದ, 2018 ಸಿನಿಮಾ ಸೆಲೆಬ್ರಿಟಿಗಳಿಂದ ಸಾಕಷ್ಟು ಪ್ರೀತಿಯನ್ನು ಪಡೆದುಕೊಂಡಿದೆ. ಈವರೆಗೂ 160 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬ್ಲಾಕ್​ ಬಸ್ಟರ್​ ಸಿನಿಮಾ ಎಂಬ ಖ್ಯಾತಿಗೆ ‘2018’ ಒಳಗಾಗಿದೆ. ಟೊವಿನೋ ಥಾಮಸ್​ ಜತೆ ಆಸಿಫ್​ ಅಲಿ, ಅಪರ್ಣಾ ಬಾಲಮುರಳಿ, ವಿನೀತ್​ ಶ್ರೀನಿವಾಸನ್​, ಕಲೈಯರಸನ್​, ಸುದೇಶ್​, ಅಜು ವರ್ಗೀಸ್​, ತನ್ವಿ ರಾಮ್​, ಗೌತಮಿ ನಾಯರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಚಿತ್ರದ ಮಲಯಾಳಂ ಆವೃತ್ತಿಯು ಮೇ 5ರಂದು ಬಿಡುಗಡೆಯಾದಾಗಿನಿಂದ ಕರ್ನಾಟಕದಲ್ಲಿ 5 ಕೋಟಿ ರೂ.ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಜೂನ್ 2 ರಿಂದ, ಕನ್ನಡ ಡಬ್ಬಿಂಗ್ ಆವೃತ್ತಿಯು ಸಹ ಚಿತ್ರಮಂದಿರಗಳಲ್ಲಿದೆ. ಜೂನ್ 7ರಂದು ಸಿನಿಮಾ ಒಟಿಟಿಗೆ ಬರಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kichcha Sudeepa: ಜೂನ್ 7ರಂದು ಕಿಚ್ಚ 46 ಸಿನಿಮಾದ ಟೀಸರ್‌ ರಿಲೀಸ್‌? ಹೊಸ ಅಪ್‌ಡೇಟ್‌ ಇಲ್ಲಿದೆ!

ಕಿಚ್ಚ ಸುದೀಪ್‌ ಟ್ವೀಟ್

2018 ಸಿನಿಮಾ ಕಥೆ ಏನು

‘2018’ ಸಿನಿಮಾ 2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ಮಾಡಿದ ಸಿನಿಮಾ ಇದಾಗಿದೆ. ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳು ಇವೆ. ಅತೀ ಕಷ್ಟದ ಸಮಯದಲ್ಲೂ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೊ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆದಿದೆ. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾಗಿದ್ದ ಅತಿ ಭೀಕರ ಪ್ರವಾಹ ಅದಾಗಿತ್ತು.

Exit mobile version