Site icon Vistara News

Kiccha Sudeep: ‘ಕಬ್ಜ’ ಡೈರೆಕ್ಟರ್ ಆರ್​. ಚಂದ್ರು ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್‌; ವಿಜಯೇಂದ್ರ ಪ್ರಸಾದ್ ಸಾಥ್‌!

Kiccha Sudeep R Chandru

ಬೆಂಗಳೂರು: ಈಗಾಗಲೇ ಕಿಚ್ಚ ಸುದೀಪ್‌ (Kiccha Sudeep) ಅವರ ಜನುಮದಿನದ ಸಂಭ್ರಮಾಚರಣಗೆ ಸಿದ್ಧತೆ ಭರದಿಂದ ಸಾಗುತ್ತಿದೆ. ಸೆಪ್ಟೆಂಬರ್​ 2ರಂದು ಸುದೀಪ್​ ಅವರು ಅಭಿಮಾನಿಗಳ ಜೊತೆ ಸಂಭ್ರಮದಿಂದ ಬರ್ತ್​ಡೇ ಆಚರಿಸಿಕೊಳ್ಳಲಿದ್ದಾರೆ.ಇದೀಗ ಕಿಚ್ಚ ಸುದೀಪ್‌ ನಿರ್ದೇಶಕ ಆರ್​. ಚಂದ್ರು (R. Chandru) ಜತೆ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಸ್ಕ್ರಿಪ್ಟ್​ ಕೆಲಸದಲ್ಲಿ ವಿಜಯೇಂದ್ರ ಪ್ರಸಾದ್​ (Vijayendra Prasad) ಅವರು ಸಾಥ್​ ನೀಡಿದ್ದಾರೆ. ಹಾಗಾಗಿ ಈ ಪ್ರಾಜೆಕ್ಟ್​ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದೆ.

ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

ನಿರ್ದೇಶಕ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್​ ಅವರು ಚಿತ್ರರಂಗದಲ್ಲಿ ಬಹುಬೇಡಿಕೆಯ ಕಥೆಗಾರನಾಗಿ ಗುರುತಿಸಿಕೊಂಡಿದ್ದಾರೆ.ಆರ್​. ಚಂದ್ರು ನಿರ್ದೇಶಿಸಿದ ‘ಕಬ್ಜ’ ಸಿನಿಮಾದಲ್ಲೂ ಸುದೀಪ್​ ಅವರು ಒಂದು ಪಾತ್ರ ಮಾಡಿದ್ದರು. ಈಗ ಅವರಿಬ್ಬರು ಮತ್ತೆ ಒಟ್ಟಾಗಿ ಸಿನಿಮಾ ಮಾಡಲು ಸಜ್ಜಾಗುತ್ತಿದ್ದಾರೆ. ಸುದೀಪ್​ ಅವರ ಸಂಪೂರ್ಣ ಗಮನ ಈಗ ‘Kichcha 46’ ಸಿನಿಮಾದ ಮೇಲಿದೆ. ಆ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಬರ್ತ್​ಡೇ ಪ್ರಯುಕ್ತ ಟೈಟಲ್​ ರಿವೀಲ್​ ಆಗಲಿದೆ.

ಈ ಬಾರಿ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅಭಿಮಾನಿಗಳ ಜತೆ ಜನುಮದಿನವನ್ನು ಸಂಭ್ರಮಿಸಲಿದ್ದಾರೆ. ಕಿಚ್ಚನ ಜನ್ಮದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ನೆಚ್ಚಿನ ಸ್ಟಾರ್ಸ್ ಹುಟ್ಟುಹಬ್ಬಕ್ಕೆ ಕಿಚ್ಚನ ಗುಣಗಾನ ಮಾಡುವ ಸ್ಪೆಷಲ್ ಹಾಡುಗಳು ಯೂಟ್ಯೂಬ್ ಅಂಗಳ ಪ್ರವೇಶಿಸಿವೆ. ಅದರ ಹೊರತಾಗಿ ಅರಸು ಕ್ರಿಯೇಷನ್ಸ್ ಸುದೀಪ್ 50ನೇ ಜನ್ಮೋತ್ಸವಕ್ಕೆ ವಿಶೇಷ ಉಡುಗೊರೆ ನೀಡಿದೆ.

ಇದನ್ನೂ ಓದಿ; Kiccha Sudeep: ಕಿಚ್ಚ ಸುದೀಪ್‌ ಜನುಮದಿನಕ್ಕೆ ಸರ್ಪ್ರೈಸ್ ಕೊಡಲಿದ್ದಾರೆ ಪತ್ನಿ‌ ಪ್ರಿಯಾ!

ಮತ್ತೊಂದೆಡೆ ಸುದೀಪ್ ನಟಿಸಲಿರುವ ಮುಂದಿನ ಚಿತ್ರಗಳ ನಿರ್ಮಾಪಕರು ಆ ಚಿತ್ರಗಳ ಕುರಿತಾದ ಅಪ್‌ಡೇಟ್‌ಗಳನ್ನು ಈ ವಿಶೇಷ ದಿನದಂದು ನೀಡಲು ಮುಂದಾಗಿದ್ದಾರೆ. ಈ ಪೈಕಿ ಸುದೀಪ್ ನಟಿಸಲಿರುವ ಮುಂದಿನ ಚಿತ್ರದ ಅಪ್‌ಡೇಟ್‌ಗಾಗಿ ಕಿಚ್ಚನ ಅಭಿಮಾನಿಗಳು ಕಾತರರಾಗಿದ್ದಾರೆ. ಅಷ್ಟೇ ಅಲ್ಲದೇ ಕಿಚ್ಚ ಸುದೀಪ್‌ ಅವರ ಕಿಚ್ಚ 46 ಚಿತ್ರತಂಡ ಸೆಪ್ಟೆಂಬರ್ 2ರಂದು ಹುಟ್ಟುಹಬ್ಬದ ಅಂಗವಾಗಿ ಮಧ್ಯರಾತ್ರಿ 12.01ಕ್ಕೆ ಚಿತ್ರದ ಟೈಟಲ್ ಟೀಸರ್ ಅನ್ನು ಬಿಡುಗಡೆ ಮಾಡಲಿದ್ದೇವೆ ಎಂಬುದನ್ನು ಘೋಷಿಸಿದೆ.

Exit mobile version