Site icon Vistara News

Kichcha Sudeep | ʻʻಉಸಿರೇ ಉಸಿರೇʼʼ ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿ!

Kichcha Sudeep

ಬೆಂಗಳೂರು : “ಬಿಗ್ ಬಾಸ್” ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ “ಉಸಿರೇ ಉಸಿರೇ” ಚಿತ್ರದಲ್ಲಿ ಕಿಚ್ಚ ಸುದೀಪ್‌ (Kichcha Sudeep) ಅವರು ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿದೆ ಎಂದು ತಂಡ ಹೇಳಿಕೊಂಡಿದೆ. ಚಿತ್ರತಂಡವು ಈಗಾಗಲೇ ಅಭಿನಯ ಚಕ್ರವರ್ತಿಯನ್ನು ಭೇಟಿಯಾಗಿದ್ದು ಕಿಚ್ಚ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಶ್ರೀಜಿತ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ | Kichcha Sudeep | ಕಿಚ್ಚ ಸುದೀಪ್‌ ಬರ್ತ್‌ ಡೇಗೆ ಅಂಚೆ ಇಲಾಖೆಯಿಂದ ಸ್ಪೆಷಲ್‌ ಗಿಫ್ಟ್!‌

Kichcha Sudeep

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ.ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ. ವಿವೇಕ್ ಚಕ್ರವರ್ತಿಯ ಸಂಗೀತವಿದೆ. ಸದ್ಯದಲ್ಲೇ ಕಿಚ್ಚ ಸುದೀಪ್ ಅವರು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ | Kichcha Sudeep | ಕಿಚ್ಚನ ಜನುಮದಿನಕ್ಕೆ ಕಾಮನ್ ಡಿಪಿ: ಸಾಥ್ ನೀಡಿದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌!

Exit mobile version