Site icon Vistara News

Kichcha Sudeep: ಶ್ರೀರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ; ಕಿಚ್ಚನ ಟ್ವೀಟ್‌ ವೈರಲ್‌!

Kichcha Sudeep tweet On Rammandir

ಬೆಂಗಳೂರು: ಹನ್ನೊಂದು ದಿನಗಳ ಕಠಿಣ ವ್ರತ ಪಾಲನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ರಾಮ್‌ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ವಿಧ್ಯುಕ್ತವಾಗಿ ನೆರವೇರಿಸಿದ್ದಾರೆ. ಭಾರತದ ಹಲವಾರು ಸೆಲೆಬ್ರಿಟಿಗಳು ಶ್ರೀರಾಮನ (Sri Ram) ಪ್ರಾಣ ಪ್ರತಿಷ್ಠಾಪನೆಯ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದಾರೆ. ಇದೀಗ ಕಿಚ್ಚ ಸುದೀಪ್‌ ಅವರು ಪ್ರಾಣ ಪ್ರತಿಷ್ಠಾಪ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಮ ಜಯ ರಾಮ ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು…

ವಾಲ್ಮೀಕಿಗಳು ರೂಪಿಸಿದ ಶ್ರೀ ರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ

ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ.

ನಿನ್ನ ಕಣ್ಣುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ?

ನಿನ್ನ ಕೀರ್ತನೆಗೆ ಎರಡೇ ಕಿವಿಗಳು.

ನಮ್ಮದು ಎಂತಹ ಪುಣ್ಯ, ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ.

ಕರ್ನಾಟಕದ ಮಣ್ಣ ಗರ್ಭದಿಂದ ಎದ್ದು ಬಂದೆ

ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ಪ್ರಸನ್ನ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ

ಅರುಣ್ ಯೋಗಿರಾಜ್ ಅವರಿಗೆ ನಿನ್ನ ಕೆತ್ತಲು

ನಿನ್ನ ಪರಮ ಭಕ್ತ ಕವಚದ ಮಣ್ಣಿನ ವೀರ ಹನುಮಾನ

ಇದು ಕರ್ನಾಟಕಕ್ಕೆ ನಿಜದ ಸಮ್ಮಾನ ಜೈ ಶ್ರೀ ರಾಮ್…

ಎಂದು ಬರೆದಿದ್ದಾರೆ ಸುದೀಪ್.

ಇನ್ನೊಂದು ಪೋಸ್ಟ್‌ನಲ್ಲಿ ʻʻʻರಾಮನ ಭುಜಗಳು ನಮ್ಮ ಶಕ್ತಿ. ಅವರ ಎದೆ ನಮ್ಮ ಮಹತ್ವಾಕಾಂಕ್ಷೆ, ಅವರ ಕೈಗಳು ನಮ್ಮ ಶೌರ್ಯ, ಅವರ ಪಾದಗಳು ನಮ್ಮ ಮೋಕ್ಷ, ಅವರ ರೂಪದಲ್ಲಿ, ಎಲ್ಲಾ ಸೃಷ್ಟಿಯ ಸಾರ. 500 ವರ್ಷಗಳ ಕತ್ತಲೆಯ ನಂತರ ಒಂದು ರಾಷ್ಟ್ರದ, ಜನರ, ಬೆಳಕಿನ ಪ್ರಾಣ-ಪ್ರತಿಷ್ಠೆ. ಜೈಶ್ರೀರಾಮ್ʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kichcha sudeep: ಕಿಚ್ಚನ ‘ಮ್ಯಾಕ್ಸ್’ ಹೆಸರಲ್ಲಿ ಆ್ಯಂಬುಲೆನ್ಸ್ ಸೇವೆ!

ಸುಮಾರು 496 ವರ್ಷಗಳಿಂದ (Ram Mandir) ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿದೆ. ದೇಶಾದ್ಯಂತ ಸಂತಸದ ಅಲೆ ಎದ್ದಿದೆ. ಜನವರಿ 22ರಂದು ರಾಮ್ ಲಲ್ಲಾನನ್ನು ಸ್ವಾಗತಿಸಲು ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ದೀಪವನ್ನು ಬೆಳಗಿಸಬೇಕು ಮತ್ತು ಈ ದಿನವನ್ನು ತಮ್ಮ ಮನೆಯ ಸಂಭ್ರಮದಿಂದ ಆಚರಿಸಬೇಕು ಎಂದು ಪಿಎಂ ಮೋದಿ ಮನವಿ ಮಾಡಿದ್ದಾರೆ.

Exit mobile version