Site icon Vistara News

Kichcha Sudeep: ʻವಿಕ್ರಾಂತ್ ರೋಣʼ ಮಡಿಲಿಗೆ ಎರಡು ಸೈಮಾ ಪ್ರಶಸ್ತಿ!

vikrant rona Film Got SIIMA Award

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ನಟನೆಯ ʻವಿಕ್ರಾಂತ್ ರೋಣʼ ಸಿನಿಮಾಗೆ 2 ವಿಭಾಗದಲ್ಲಿ ಸೈಮಾ ಪ್ರಶಸ್ತಿ ಒಲಿದು ಬಂದಿದೆ. ಅತ್ಯುತ್ತಮ ಉದಯೋನ್ಮುಖ ನಟಿ ಹಾಗೂ ಅತ್ಯುತ್ತಮ ಗಾಯಕಿ ಪ್ರಶಸ್ತಿ ವಿಕ್ರಾಂತ್ ರೋಣ ಸಿನಿಮಾಗೆ ಬಂದಿದೆ. ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದ ಅನೂಪ್ ಭಂಡಾರಿ ಪದ ಪೊಣಿಸಿದ್ದ ರಾರಾ ರಕ್ಕಮ್ಮ ಹಾಡು ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಜಬರ್ದಸ್ತ್ ಹಾಡಿನಲ್ಲಿ ಸುದೀಪ್ ಜತೆ ಬಾಲಿವುಡ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದರು ಸುನಿಧಿ ಚೌಹಾಣ್ ಅದ್ಭುತವಾಗಿ ರಾರಾ ರಕ್ಕಮ್ಮ ಹಾಡು ಹಾಡಿದ್ದರು. ದುಬಾರಿ ಬಜೆಟ್‌ನಲ್ಲಿ ತಯಾರಾಗಿದ್ದ ವಿಕ್ರಾಂತ್ ರೋಣ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದರು. ನೀತಾ ಆಶೋಕ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಚೊಚ್ಚಲ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದ ನೀತಾ ಅವರು ಸೈಮಾ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಈ ಬಾರಿ SIIMA (ಸೈಮಾ ಅವಾರ್ಡ್‌) 11ನೇ ಆವೃತ್ತಿಯು ದುಬೈನಲ್ಲಿ ಸೆಪ್ಟೆಂಬರ್ 15 ರಂದು ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿ ನಡೆದಿದೆ . ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಚಲನಚಿತ್ರೋದ್ಯಮದ ಪ್ರಮುಖ ತಾರೆಯರು ಈ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಗಂತ್, ಜ್ಯೂ.ಎನ್‌ಟಿಆರ್, ಶ್ರೀಲೀಲಾ ಸೇರಿದಂತೆ ಕನ್ನಡ, ತೆಲುಗಿನ ತಾರೆಯರು ಸೈಮಾ ವೇದಿಕೆಯಲ್ಲಿ ಕಾಣಿಸಿಕೊಂಡರು.ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಅಚ್ಯುತ್‌ ಕುಮಾರ್, ಸಪ್ತಮಿ ಗೌಡ ಸೇರಿದಂತೆ ಹಲವರು ದುಬೈನಲ್ಲಿ ನಡೆದ ಸೈಮಾ 2023 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಿ ಪ್ರಶಸ್ತಿ ಸ್ವೀಕರಿಸಿದರು. ಯಶ್ ಸೇರಿದಂತೆ ಹಲವರು ಭಾಗಿ ಆಗಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Kichcha Sudeep: ಕಿಚ್ಚನ 50ನೇ ಸಿನಿಮಾಗೆ ರಿಷಬ್‌ ಶೆಟ್ಟಿ ಆ್ಯಕ್ಷನ್ ಕಟ್?

ಡೈರೆಕ್ಟರ್‌ ಕ್ಯಾಪ್‌ ತೊಟ್ಟ ಸುದೀಪ್‌

ಕಿಚ್ಚ ಸುದೀಪ್​ ಕನ್ನಡ ಸಿನಿಮಾ ಕ್ಷೇತ್ರದ (Sandalwood) ಬಹುಬೇಡಿಕೆ ನಟ. ದೊಡ್ಡ ಮಟ್ಟಿನ ಫ್ಯಾನ್​ ಬೇಸ್ ಹೊಂದಿರುವ ಅವರು ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ಭರ್ಜರಿ ಖ್ಯಾತಿಯನ್ನೂ ಗಳಿಸಿಕೊಂಡಿದ್ದಾರೆ. ಅಭಿನಯ ಚಕ್ರವರ್ತಿ ಎಂದು ಎನಿಸಿಕೊಂಡಿರುವ ಅವರಿಗೆ ನಿರ್ದೇಶನ ಕೆಲಸವೂ ಸಲೀಸು. ಆದರೆ, ಅವರು ಇತ್ತೀಚಿನ ದಿನಗಳಲ್ಲಿ ಆ್ಯಕ್ಷನ್​-ಕಟ್​ ಹೇಳುವ ಕೆಲಸಕ್ಕೆ ಬ್ರೇಕ್​ ಕೊಟ್ಟಿದ್ದರು. ಹೀಗಾಗಿ ಅವರ ನಿರ್ದೇಶನದ ಸಿನಿಮಾಗಳ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಬೇಸರ ಉಂಟಾಗಿತ್ತು. ಇದೀಗ ಆ ನಿರಾಸೆ ಕೊನೆಯಾಗಲಿದೆ. ಕಿಚ್ಚ ಸುದೀಪ್ (Kichcha Sudeep)​ ಮತ್ತೆ ದೊಡ್ಡ ಸಿನಿಮಾ ಪ್ರಾಜೆಕ್ಟ್ ಒಂದರಲ್ಲಿ ಡೈರೆಕ್ಟರ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ.ಆರ್.ಜಿ. ಸ್ಟುಡಿಯೊ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿತ್ತು. ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

Exit mobile version