ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ, ನಟ ಕಿರಿಕ್ ಕೀರ್ತಿ (Kirik Keerthi) ಇದೀಗ ಸಖತ್ ಸುದ್ದಿಯಲ್ಲಿದ್ದಾರೆ. ಜನರು ತಮ್ಮ ಬಗ್ಗೆ ವೈಯಕ್ತಿಕ ಜೀವನದ ಬಗ್ಗೆ ಕಮೆಂಟ್ ಮಾಡಿ, ಟ್ರೋಲ್ ಮಾಡಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಅವರು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ, ʻನನ್ನನ್ನು ಬದುಕುವುದಕ್ಕೆ ಬಿಡಿ, ಯಾಕೆ ಇಷ್ಟು ಟಾರ್ಚರ್ ಕೋಡುತ್ತೀರಿʼʼ? ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ ಎಂದು ಬರೆದುಕೊಂಡಿದ್ದರು. ಈಗ ಮತ್ತೊಂದು ವಿಡಿಯೊ ಅಪ್ಲೋಡ್ ಮಾಡಿದ್ದಾರೆ. ʻʻನಮಗೆ ಬದುಕಲು ಬಿಡಿ. ಯಾಕೆ ನಮಗೆ ಟಾರ್ಚರ್ ಮಾಡುತ್ತಿರುವುದು? ನಮ್ಮ ಜೀವನದಲ್ಲಿ ಏನಾಗಿದೆ ಏನಾಗಿಲ್ಲ ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಮಗೆ ಕ್ಲಾರಿಟಿ ಇಲ್ಲ ಅಂದ ಮೇಲೆ ನಿಮಗೆ ಹೇಗೆ ಕ್ಲಾರಿಟಿ ಸಿಗುತ್ತದೆ? ನಮ್ಮ ಜೀವನದಲ್ಲಿ ಏನಾಗುತ್ತಿದೆ ಎಂಬ ಅರಿವು ನಮ್ಮ ಕುಟುಂಬಕ್ಕೆ ಇಲ್ಲ. ವೈಯಕ್ತಿಕ ಜೀವನ ಪ್ರತಿಯೊಬ್ಬರಿಗೂ ಇರುತ್ತದೆ. ಮತ್ತೊಬ್ಬರ ವೈಯಕ್ತಿಕ ಜೀವನದ ಬಗ್ಗೆ ಯಾಕೆ ಅಷ್ಟೊಂದು ಆಸಕ್ತಿ? ಎಂದು ಕೀರ್ತಿ ಹೇಳಿದ್ದಾರೆ.
ಇದನ್ನೂ ಓದಿ: Priyanka Upendra Interview: ಸ್ಯಾಂಡಲ್‌ವುಡ್ ನಟಿ ಪ್ರಿಯಾಂಕಾ ಉಪೇಂದ್ರ ಸಿಗ್ನೇಚರ್ ಸ್ಟೈಲ್ ಏನು?
ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಕಿರಿಕ್ ಕೀರ್ತಿ ಮತ್ತಷ್ಟು ಜನಪ್ರಿಯರಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನೋವಿನ ಘಟನೆಯನ್ನು ಶೇರ್ ಮಾಡಿಕೊಂಡಿದ್ದಾರೆ. ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ.