ಬೆಂಗಳೂರು: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು (Adipurush Movie) ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.
ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷರಿಗೆ ತಲುಪಿಸುವ ಕಾರ್ಯದಲ್ಲಿ ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ್ ಆಗಲಿದೆ ಎನ್ನುವುದು ಸಂಸ್ಥೆಯ ನಂಬಿಕೆ. ನಮ್ಮ ಹಿಂದು ಸಂಸ್ಕೃತಿಯ ಮಹಾಕಾವ್ಯ ಎಂದೇ ಹೇಳಲ್ಪಡುವ ಪವಿತ್ರ ಗ್ರಂಥ ರಾಮಾಯಣದ ಎಳೆಯನ್ನು ಆಧಿರಿಸಿ ತಯಾರಿಸಿರುವ ಚಿತ್ರ ಆದಿಪುರುಷ್.
ಟಿ. ಸೀರೀಸ್ ಮತ್ತು ರೆಟ್ರೋಫಿಲ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಕಥೆ ಹೆಣೆದು ನಿರ್ದೇಶನ ಮಾಡುತ್ತಿರುವುದು ಓಂ ರಾವತ್ ಅವರು. ಆದಿಪುರುಷ್ ಚಿತ್ರವು ಏಕಕಾಲಕ್ಕೆ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗಿದೆ. “ಆದಿಪುರುಷ್ ಚಿತ್ರ ಕರ್ನಾಟಕದ ವಿತರಣೆ ನಮಗೆ ಸಿಕ್ಕಿರುವುದು ಬಹಳ ಹೆಮ್ಮೆಯ ಸಂಗತಿ” ಎಂದು ಹೊಂಬಾಳೆ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕರು ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರು ಆಗಿರುವ ಕಾರ್ತಿಕ್ ಗೌಡ ಸಂತಸ ವ್ಯಕ್ತ ಪಡಿಸಿದ್ದಾರೆ. ಈ ಚಿತ್ರವು ಪ್ರಭಾಸ್ ಮತ್ತು ಯು. ವಿ ಕ್ರಿಯೇಷನ್ಸ್ ಜತೆಗಿನ ಕೆ.ಆರ್.ಜಿ ಸ್ಟುಡಿಯೋಸ್ ಒಡನಾಟಕ್ಕೂ ಸಾಕ್ಷಿಯಾಗಲಿದೆ.
ಇದನ್ನೂ ಓದಿ: Adipurush Movie : ಆದಿಪುರುಷನಿಗೆ ಸಿಕ್ಕ ಸರ್ಟಿಫಿಕೇಟ್ ಯಾವುದು? ಎಷ್ಟೊಂದು ತಾಸು ಇರಲಿದೆ ಗೊತ್ತಾ ಈ ಸಿನಿಮಾ?
ಜೂನ್ 16ಕ್ಕೆ ಆದಿಪುರುಷ್ ರಿಲೀಸ್
ಓಂ ರಾವತ್ ನಿರ್ದೇಶನದ ಆದಿಪುರುಷ್ ಚಿತ್ರದಲ್ಲಿ ನಟ ಪ್ರಭಾಸ್ ರಾಮನಾಗಿ ನಟಿಸಿದ್ದಾರೆ, ಕೃತಿ ಸನೂನ್ ಸೀತೆಯಾಗಿ ಮತ್ತು ಸೈಫ್ ಅಲಿ ಖಾನ್ ರಾವಣನ ಪಾತ್ರವನ್ನು ನಿಭಾಯಿಸಿದ್ದಾರೆ. ಆದಿಪುರುಷದ ಟೀಸರ್ ಕಳೆದ ವರ್ಷ ಬಿಡುಗಡೆಯಾಗಿತ್ತು. ಆದರೆ ವಿಎಫ್‌ಎಕ್ಸ್ ಕುರಿತಾಗಿ ನೆಗೆಟಿವ್ ಪ್ರತಿಕ್ರಿಯೆಯನ್ನು ಪಡೆಯಿತು. ಜೂನ್ 16ರಂದು ಸಿನಿಮಾ ತೆರೆ ಕಾಣುತ್ತಿದ್ದು, ದೊಡ್ಡ ಪರದೆಯಲ್ಲಿ ‘ಆದಿಪುರುಷ್’ (Adipurush) ಚಿತ್ರವನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.
ಹಿಂದಿ, ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಕೆಲ ದಿನಗಳ ಹಿಂದೆ ಸಿನಿಮಾದ ಮೊದಲನೇ ಹಾಡಾಗಿ ಜೈ ಶ್ರೀ ರಾಮ್ ಹಾಡನ್ನು ಬಿಡುಗಡೆ ಮಾಡಲಾಗಿತ್ತು.