Site icon Vistara News

Milana Nagaraj | ಹೊಸ ಗೂಡು ಪ್ರವೇಶಿಸಿದ ಕೃಷ್ಣ- ಮಿಲನಾ ಜೋಡಿ; ಗೃಹ ಪ್ರವೇಶದ ಚಿತ್ರಗಳು ಇಲ್ಲಿವೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಯಶಸ್ವಿ ಜೋಡಿ ಡಾರ್ಲಿಂಗ್‌ ಕೃಷ್ಣ ಹಾಗೂ ಮಿಲನಾ ನಾಗರಾಜ್‌ ಜೋಡಿ ಹೊಸ ಮನೆ ಕಟ್ಟಿದ್ದು, ಅದರ ಗೃಹಪ್ರವೇಶ ಕಾರ್ಯಕ್ರಮವನ್ನು ಚೊಕ್ಕಟವಾಗಿ ಮಾಡಿ ಮುಗಿಸಿದ್ದಾರೆ. ಹೊಸ ಗೂಡು ಸೇರುತ್ತಿರುವ ಈ ಸಂಭ್ರಮದ ಚಿತ್ರಗಳನ್ನು ಈ ಜೋಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರ ಅಭಿಮಾನಿಗಳು ಅದಕ್ಕೆ ಚಂದದ ಪ್ರತಿಕ್ರಿಯೆಗಳನ್ನು ಕೊಟ್ಟಿದ್ದು, ಅಂದದ ಜೋಡಿ ಸಂಭ್ರಮಕ್ಕೆ ಸಾಥ್‌ ಕೊಟ್ಟಿದ್ದಾರೆ.

ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್‌ ಲವ್‌ ಮಾಕ್ಟೇಲ್‌ ಸೇರಿದಂತೆ ಹಲವು ಸಿನಿಮಾಗಳಲ್ಲಿ ಯಶಸ್ಸು ಕಂಡಿದ್ದಾರೆ. ಜತೆಯಾಗಿ ಕೆಲಸ ಮಾಡುವ ಅವಧಿಯಲ್ಲಿ ಹುಟ್ಟಿಕೊಂಡಿದ್ದ ಅವರ ಪ್ರೀತಿ ದಾಂಪತ್ಯ ಜೀವನಕ್ಕೆ ಅಡಿಯಿಡುವಂತೆ ಮಾಡಿತ್ತು. ಹೀಗಾಗಿ ಅವರು ಸ್ಯಾಂಡಲ್‌ವುಡ್‌ನ ಅತ್ಯಂತ ಯಶಸ್ವಿ ದಂಪತಿ ಎನಿಸಿಕೊಂಡಿದ್ದಾರೆ. ಈ ದಂಪತಿಯನ್ನು ಅಭಿಮಾನಿಗಳು ಪ್ರೀತಿಯಿಂದ ಕ್ರಿಸ್‌ಮಿ ಎಂದು ಕರೆಯುತ್ತಾರೆ. ಹೀಗಾಗಿ ಅವರು ತಮ್ಮ ಹೊಸ ಮನೆಗೆ ಕ್ರಿಸ್‌ಮಿ ನೆಸ್ಟ್‌ ಎಂದು ಹೆಸರಿಟ್ಟಿದ್ದಾರೆ.

ನೂತನ ಮನೆಯ ಗೃಹ ಪ್ರವೇಶದ ವೇಳೆ ಜತೆಯಾಗಿ ಕುಳಿತು ಮಾತನಾಡುವ, ದೀಪ ಬೆಳಗುವ, ಒಳಿತಿಗಾಗಿ ಭಗವಂತನಲ್ಲಿ ಪ್ರಾರ್ಥಿಸುವ ಹಾಗೂ ಪೂಜೆಯಲ್ಲಿ ಪಾಲ್ಗೊಂಡಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ | Kannada New Movie | ಪೃಥ್ವಿ ಅಂಬಾರ್‌-ಮಿಲನಾ ಅಭಿನಯದ `For Regn’ ರಿಲೀಸ್‌ ಡೇಟ್‌ ರಿವೀಲ್‌!

Exit mobile version